Crime News: ಕೇರಳದ ತೃತೀಯಲಿಂಗಿ ಆರ್​ಜೆ ಅನನ್ಯಾ ಸಾವಿನ ಬೆನ್ನಲ್ಲೇ ಆಕೆಯ ಗೆಳೆಯನೂ ನೇಣಿಗೆ ಶರಣು

Anannyah Kumari Alex | ಅನನ್ಯಾ ಕುಮಾರಿ ಅಲೆಕ್ಸ್ ಸಾವನ್ನಪ್ಪಿದ ಕೆಲವೇ ದಿನಗಳ ಬಳಿಕ ಆಕೆಯ ಸ್ನೇಹಿತ ಜಿಜು ರಾಜ್ ಎಂಬ 36 ವರ್ಷದ ವ್ಯಕ್ತಿಯ ಶವವೂ ನೇಣು ಬಿಗಿದ ಸ್ಥಿತಿಯಲ್ಲೇ ಪತ್ತೆಯಾಗಿದೆ.

Crime News: ಕೇರಳದ ತೃತೀಯಲಿಂಗಿ ಆರ್​ಜೆ ಅನನ್ಯಾ ಸಾವಿನ ಬೆನ್ನಲ್ಲೇ ಆಕೆಯ ಗೆಳೆಯನೂ ನೇಣಿಗೆ ಶರಣು
ಅನನ್ಯಾ ಕುಮಾರಿ- ಜಿಜು ರಾಜ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 24, 2021 | 12:58 PM

ತಿರುವನಂತಪುರ: ಕೇರಳದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ (Transgender RJ Anannyah Kumari Alex) ಅನನ್ಯಾ ಕುಮಾರಿ ಅಲೆಕ್ಸ್​ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಅದರ ಬೆನ್ನಲ್ಲೇ ಆಕೆಯ ಗೆಳೆಯ ಕೂಡ ಅದೇ ರೀತಿಯಲ್ಲಿ ಸಾವನ್ನಪ್ಪಿರುವುದು ಇನ್ನಷ್ಟು ಅನುಮಾನಕ್ಕೆ ಕಾರಣವಾಗಿದೆ. ಅನನ್ಯಾ ಸಾವನ್ನಪ್ಪಿದ ಕೆಲವೇ ದಿನಗಳ ಬಳಿಕ ಆಕೆಯ ಸ್ನೇಹಿತ ಜಿಜು ರಾಜ್ (Jiju Raj) ಎಂಬ 36 ವರ್ಷದ ವ್ಯಕ್ತಿಯ ಶವವೂ ನೇಣು ಬಿಗಿದ ಸ್ಥಿತಿಯಲ್ಲೇ ಪತ್ತೆಯಾಗಿದೆ.

ಕೊಚ್ಚಿಯಲ್ಲಿರುವ ತನ್ನ ಸ್ನೇಹಿತನ ಮನೆಯಲ್ಲಿ ಜಿಜು ರಾಜ್ ಅವರ ಶವ ಪತ್ತೆಯಾಗಿದೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ಜಿಜು ಅವರ ಗೆಳೆಯ ಹೊರಗೆ ಹೋಗಿದ್ದವರು ಮಧ್ಯಾಹ್ನ ಮನೆಗೆ ವಾಪಾಸ್ ಬಂದಾದ ಜಿಜು ಸಾವನ್ನಪ್ಪಿರುವುದು ಒತ್ತಾಗಿದೆ. ತಕ್ಷಣ ಅವರು ಪೊಲೀಸರಿಗೆ ಈ ವಿಷಯ ಮುಟ್ಟಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅನನ್ಯಾರ ಸಾವಿನ ಬಳಿಕ ಮಾನಸಿಕವಾಗಿ ಬಹಳ ನೊಂದಿದ್ದ ಜಿಜು ಅದೇ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಆದರೆ, ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬೀಳಲಿದೆ.

ಕೊಲ್ಲಂ ನಿವಾಸಿಯಾಗಿದ್ದ ಅನನ್ಯಾ ಕುಮಾರಿ ಅಲೆಕ್ಸಾ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಲ್ಲಪ್ಪುರಂ ಜಿಲ್ಲೆಯ ವೆಂಗಾರಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರ ಸಲ್ಲಿಸಿದ ನಂತರ ತನಗೆ DSJP ನಾಯಕರಿಂದ ಬೆದರಿಕೆ ಕರೆಗಳು ಬರುತ್ತಿವೆ, ನನ್ನ ಜೀವಕ್ಕೆ ಅಪಾಯವಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ ಎಂದು ಹೇಳಿಕೆ ನೀಡಿ ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದರು. ಅದಾದ ಬಳಿಕ ಕೆಲವು ದಿನಗಳ ಹಿಂದೆ ಅವರು ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು.

ಕೇರಳದ ಮೊದಲ ತೃತೀಯಲಿಂಗಿ ಆರ್​ಜೆ ಆಗಿದ್ದ ಅನನ್ಯಾ ಕುಮಾರಿ ಖಾಸಗಿ ವಾಹಿನಿಯಲ್ಲಿ ನಿರೂಪಿಕಿಯಾಗಿಯೂ ಕೆಲಸ ಮಾಡಿದ್ದರು. ಅಲ್ಲದೆ, ಸಾಮಾಜಿಕ ಹೋರಾಟಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದರು. 2020ರಲ್ಲಿ ನಡೆದ ಲಿಂಗ ಪರಿವರ್ತನೆಗೆ ಸಂಬಂಧಿಸಿದ ಆಪರೇಷನ್ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಆಕೆಯ ಆರೋಗ್ಯ ಸಂಪೂರ್ಣ ಹದಗೆಟ್ಟಿತ್ತು. ಇದೇ ಕೊರಗಿನಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಅನನ್ಯಾಳ ಪೋಷಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತೃತೀಯಲಿಂಗಿಗಳು ಆ ಆಸ್ಪತ್ರೆಯ ಎದುರು ಪ್ರತಿಭಟನೆಯನ್ನೂ ಮಾಡಿದ್ದರು. ಆದರೆ, ಆಸ್ಪತ್ರೆ ವೈದ್ಯರು ಆಪರೇಷನ್ ವಿಚಾರದಲ್ಲಿ ತಮ್ಮಿಂದ ಯಾವ ಲೋಪವೂ ಆಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಕೇರಳದ ಮೊದಲ ಮಂಗಳಮುಖಿ ಆರ್​ಜೆ ಅನನ್ಯಾ ಕುಮಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ; ಅಂದು ಜೀವ ಬೆದರಿಕೆ ಇದೆ ಎಂದಿದ್ದರು..!

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

(Days After Kerala Transgender RJ Anannyah Kumari Death Her Partner Found Hanging at Friend House in Kochi)

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್