Crime News: ದೆಹಲಿಯಲ್ಲಿ ನಕಲಿ ನೋಟುಗಳನ್ನು ಪೂರೈಕೆ ಮಾಡುತ್ತಿದ್ದ ಗುಂಪು ಕ್ರೈಂ ಬ್ರಾಂಚ್ ವಶಕ್ಕೆ

ಮೇ 19ರಂದು ಆಶಿಶ್ ಜೈನ್ ನಕಲಿ ನೋಟುಗಳನ್ನು ಪೂರೈಸಲು ಬರುತ್ತಾರೆ ಎಂಬ ಮಾಹಿತಿ ಸಿಕ್ಕಿತ್ತು. ಹೀಗಾಗಿ, ಆತನಿಗಾಗಿ ಕಾದಿದ್ದ ಅಪರಾಧ ವಿಭಾಗದ ತಂಡ ಆತನನ್ನು ಸ್ಥಳದಲ್ಲೇ ಬಂಧಿಸಿದೆ.

Crime News: ದೆಹಲಿಯಲ್ಲಿ ನಕಲಿ ನೋಟುಗಳನ್ನು ಪೂರೈಕೆ ಮಾಡುತ್ತಿದ್ದ ಗುಂಪು ಕ್ರೈಂ ಬ್ರಾಂಚ್ ವಶಕ್ಕೆ
ದೆಹಲಿಯಲ್ಲಿ ನಕಲ ನೋಟುಗಳನ್ನು ವಶಪಡಿಸಿಕೊಂಡ ಕ್ರೈಂ ಬ್ರಾಂಚ್ ಅಧಿಕಾರಿಗಳುImage Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on:May 23, 2022 | 1:26 PM

ನವದೆಹಲಿ: ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ (Delhi Crime Branch) ನಕಲಿ ನೋಟುಗಳನ್ನು ಪೂರೈಸುವ ಗುಂಪೊಂದನ್ನು ಸೆರೆಹಿಡಿದಿದೆ. ಸೆರೆಹಿಡಿದ ಗುಂಪಿನಿಂದ 34.75 ಲಕ್ಷಕ್ಕೂ ಹೆಚ್ಚು ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ನಕಲಿ ನೋಟುಗಳ (fake currency notes) ಜೊತೆಗೆ ಒಂದು ಮುದ್ರಣ ಯಂತ್ರ, ನೋಟುಗಳನ್ನು ತಯಾರಿಸಲು ಬಳಸಿದ 8 ಬಣ್ಣಗಳು, 4 ಇಂಕ್ ಬಾಕ್ಸ್, 3 ಸಿಪಿಯು ಮತ್ತು 1 ಸ್ಕ್ಯಾನರ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತರಾದ ಮೂವರನ್ನು ರಾಜ್‌ಪಾಲ್, ಅಜೀಂ ಮತ್ತು ಆಶಿಶ್ ಜೈನ್ ಎಂದು ಗುರುತಿಸಲಾಗಿದೆ. ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ನಕಲಿ ನೋಟುಗಳನ್ನು ಚಲಾವಣೆ ಮಾಡುತ್ತಿರುವ ಗುಂಪಿನ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ತಂತ್ರ ರೂಪಿಸಿದ್ದಾರೆ.

ಮೇ 19ರಂದು ಆಶಿಶ್ ಜೈನ್ ನಕಲಿ ನೋಟುಗಳನ್ನು ಪೂರೈಸಲು ಬರುತ್ತಾರೆ ಎಂಬ ಮಾಹಿತಿ ಸಿಕ್ಕಿತ್ತು. ಹೀಗಾಗಿ, ಆತನಿಗಾಗಿ ಕಾದಿದ್ದ ಅಪರಾಧ ವಿಭಾಗದ ತಂಡ ಆತನನ್ನು ಸ್ಥಳದಲ್ಲೇ ಬಂಧಿಸಿದೆ. ಆತನಿಂದ 1.5 ಲಕ್ಷ ರೂ. ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಶಿಶ್ ಜೈನ್‌ನನ್ನು ವಿಚಾರಣೆಗೊಳಪಡಿಸಿದ ಬಳಿಕ ಆತನ ಸಹಚರ ರಾಜ್‌ಪಾಲ್ ರಾಜು ಎಂಬಾತನನ್ನು ಬಂಧಿಸಲಾಗಿದ್ದು, 3.13 ಲಕ್ಷ ರೂ. ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಅವರ ಕಚೇರಿಯಿಂದ 62,000 ರೂ. ಮೌಲ್ಯದ 50 ಮುದ್ರಿತ ನೋಟುಗಳನ್ನು ಅಭಿವೃದ್ಧಿಪಡಿಸಲು ಬಳಸಿದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. (Source)

ಇದನ್ನೂ ಓದಿ
Image
ರಾಷ್ಟ್ರ ರಾಜಕಾರಣದತ್ತ ತೆಲಂಗಾಣ ಸಿಎಂ ಕೆಸಿಆರ್ ಕಣ್ಣು: ಅರವಿಂದ ಕೇಜ್ರಿವಾಜ್ ಜೊತೆಗೆ ಇಂದು ಪಂಜಾಬ್ ಯಾತ್ರೆ
Image
ಮದರಸಾಗಳ ಬಾಗಿಲು ಮುಚ್ಚಿಸಿ, ಮುಸ್ಲಿಮರಿಗೆ ಉಪಕಾರ ಮಾಡುತ್ತೇನೆ: ಅಸ್ಸಾಂ ಮುಖ್ಯಮಂತ್ರಿ ಹಿಮವಂತ ಬಿಸ್ವಾ ಶರ್ಮಾ
Image
ಮಸೀದಿಗಳಿಂದ ತೆರವುಗೊಳಿಸಿದ್ದ ಧ್ವನಿವರ್ಧಕಗಳನ್ನು ಶಾಲೆಗಳಿಗೆ ದಾನ ಮಾಡಲಾಗುತ್ತಿದೆ : ಯೋಗಿ ಆದಿತ್ಯನಾಥ್
Image
ಅಪಘಾತದಲ್ಲಿ ಗಾಯಗೊಂಡವನನ್ನು ತಮ್ಮ ಕಾರಿನಲ್ಲಿ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಪುಟ್ಟರಂಗಶೆಟ್ಟಿ

ಇದನ್ನೂ ಓದಿ: Crime News: ಮನೆಕೆಲಸದವಳ ಮೇಲೆ ಹಲ್ಲೆ ನಡೆಸಿ, ಕೂದಲು ಕತ್ತರಿಸಿದ ಮಾಲೀಕರು!

ರಾಜಪಾಲ್ ರಾಜು ಅವರ ಸಹಚರ ಅಜೀಂ ಅಹ್ಮದ್ ಅವರನ್ನು ಗಾಜಿಯಾಬಾದ್‌ನಲ್ಲಿರುವ ಅವರ ಕಚೇರಿಯಿಂದ ಬಂಧಿಸಲಾಗಿದೆ. 26.37 ಲಕ್ಷ ರೂ. ಮೌಲ್ಯದ 453 ಕತ್ತರಿಸದ ಮುದ್ರಿತ ಶೀಟ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ 8 ಪ್ರಿಂಟಿಂಗ್ ಪ್ರೂಫ್ ಪ್ಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಾದ ಮೂವರೂ ತಮ್ಮ ಸಹಚರರ ಮೂಲಕ ಸಣ್ಣ ಪಟ್ಟಣ ಪ್ರದೇಶಗಳಲ್ಲಿ ನಕಲಿ ನೋಟುಗಳ ಮುದ್ರಣ, ಸಂಸ್ಕರಣೆ ಮತ್ತು ಮಾರಾಟದಲ್ಲಿ ತೊಡಗಿದ್ದರು.

ಪೊಲೀಸ್ ವಿಚಾರಣೆಯಿಂದ ಉತ್ತರ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕಾರ್ಖಾನೆಗಳು ನೋಟುಗಳನ್ನು ಮುದ್ರಿಸಿದ ಸ್ಥಳವನ್ನು ಬಹಿರಂಗಪಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Mon, 23 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್