AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ದೆಹಲಿಯ ಚಪ್ಪಲಿ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; ಇಬ್ಬರು ಸಾವು, ಹಲವರಿಗೆ ಗಾಯ

ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೆಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

Fire Accident: ದೆಹಲಿಯ ಚಪ್ಪಲಿ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; ಇಬ್ಬರು ಸಾವು, ಹಲವರಿಗೆ ಗಾಯ
ದೆಹಲಿಯಲ್ಲಿ ಬೆಂಕಿ ಅವಘಡ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 01, 2022 | 1:22 PM

Share

ನವದೆಹಲಿ: ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ (Narela Industrical Area) ಇಂದು ಬೆಳಗ್ಗೆ ಭಾರೀ ಬೆಂಕಿ (Fire Accident) ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ ಇಲ್ಲಿಯವರೆಗೆ ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಕೆಲವು ಜನರು ಸಿಕ್ಕಿಬಿದ್ದಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೆಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ಸಾವನ್ನಪ್ಪಿದ್ದು, ಅವರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ರಕ್ಷಿಸುತ್ತಿರುವ ವಿಡಿಯೋವನ್ನು ಸುದ್ದಿ ಸಂಸ್ಥೆ IANS ಪೋಸ್ಟ್ ಮಾಡಿದೆ. ಇದುವರೆಗೂ ಮೂವರನ್ನು ರಕ್ಷಿಸಲಾಗಿದ್ದು, ಕೆಲವರು ಸಿಕ್ಕಿಬಿದ್ದಿರುವ ಆತಂಕವಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

ಇದನ್ನೂ ಓದಿ: Fire Accident: ಪುಣೆಯ ರೆಸ್ಟೋರೆಂಟ್​​ನಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಮೇಲಿನ ಮಹಡಿ

ಈ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯಸ್ಥ ಅತುಲ್ ಗಾರ್ಗ್ ಮಾತನಾಡಿ, “ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಫೋನ್ ಬಂದಿದ್ದು ಬೆಳಿಗ್ಗೆ 9.35ರ ಸುಮಾರಿಗೆ 10 ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ತರಲಾಯಿತು. ಇಲ್ಲಿಯವರೆಗೆ, ಮೂವರನ್ನು ರಕ್ಷಿಸಲಾಗಿದೆ. ಇನ್ನೂ 2-3 ಜನರು ಸಿಕ್ಕಿಬಿದ್ದಿರುವ ಭಯವಿದೆ” ಎಂದು ತಿಳಿಸಿದ್ದಾರೆ.

ಎರಡರಿಂದ ಮೂರು ಮಂದಿ ಕಾರ್ಖಾನೆಯೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿ ಅಗ್ನಿಶಾಮಕ ಸೇವೆಗಳ ರಕ್ಷಣಾ ತಂಡಗಳು ಅಗ್ನಿಶಾಮಕ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ಅವಘಡದ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ