ನವದೆಹಲಿ: ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ (Narela Industrical Area) ಇಂದು ಬೆಳಗ್ಗೆ ಭಾರೀ ಬೆಂಕಿ (Fire Accident) ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ ಇಲ್ಲಿಯವರೆಗೆ ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಕೆಲವು ಜನರು ಸಿಕ್ಕಿಬಿದ್ದಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೆಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ಸಾವನ್ನಪ್ಪಿದ್ದು, ಅವರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
A fire broke out at a factory in the #Narela Industrial area of Delhi.
Delhi Fire Service chief Atul Garg said, “A call regarding fire at a building in Narela Industrial area was received at around 9.35 a.m following which 10 fire tenders were rushed to the site.” pic.twitter.com/8a5h61Pmgr
— IANS (@ians_india) November 1, 2022
ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ರಕ್ಷಿಸುತ್ತಿರುವ ವಿಡಿಯೋವನ್ನು ಸುದ್ದಿ ಸಂಸ್ಥೆ IANS ಪೋಸ್ಟ್ ಮಾಡಿದೆ. ಇದುವರೆಗೂ ಮೂವರನ್ನು ರಕ್ಷಿಸಲಾಗಿದ್ದು, ಕೆಲವರು ಸಿಕ್ಕಿಬಿದ್ದಿರುವ ಆತಂಕವಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
ಇದನ್ನೂ ಓದಿ: Fire Accident: ಪುಣೆಯ ರೆಸ್ಟೋರೆಂಟ್ನಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಮೇಲಿನ ಮಹಡಿ
ಈ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯಸ್ಥ ಅತುಲ್ ಗಾರ್ಗ್ ಮಾತನಾಡಿ, “ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಫೋನ್ ಬಂದಿದ್ದು ಬೆಳಿಗ್ಗೆ 9.35ರ ಸುಮಾರಿಗೆ 10 ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ತರಲಾಯಿತು. ಇಲ್ಲಿಯವರೆಗೆ, ಮೂವರನ್ನು ರಕ್ಷಿಸಲಾಗಿದೆ. ಇನ್ನೂ 2-3 ಜನರು ಸಿಕ್ಕಿಬಿದ್ದಿರುವ ಭಯವಿದೆ” ಎಂದು ತಿಳಿಸಿದ್ದಾರೆ.
ಎರಡರಿಂದ ಮೂರು ಮಂದಿ ಕಾರ್ಖಾನೆಯೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿ ಅಗ್ನಿಶಾಮಕ ಸೇವೆಗಳ ರಕ್ಷಣಾ ತಂಡಗಳು ಅಗ್ನಿಶಾಮಕ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ಅವಘಡದ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.