Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು.

Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 12, 2023 | 11:53 AM

ನವದೆಹಲಿ: ದೆಹಲಿಯಲ್ಲಿ ಶ್ರದ್ಧಾ ವಾಕರ್ (Shraddha Walkar Murder) ಕೊಲೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅದಾದ ಬಳಿಕ ದೆಹಲಿಯಲ್ಲಿ ಸಾಲು ಸಾಲು ವಿಚಿತ್ರವಾದ ಕೊಲೆ ಪ್ರಕರಣಗಳು ಬೆಳಕಿಗೆ ಬರತೊಡಗಿವು. ಇದೀಗ ದೆಹಲಿಯ ಮಂಗಲ್ಪುರಿಯಲ್ಲಿ ಮತ್ತೊಂದು ಶಾಕಿಂಗ್ ಕೊಲೆ (Murder) ಪ್ರಕರಣ ಬೆಳಕಿಗೆ ಬಂದಿದೆ. ಮೂವರು ವ್ಯಕ್ತಿಗಳು ಮಹಿಳೆಯನ್ನು ಅಪಹರಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ, ಆ ಮಹಿಳೆಯ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣ ತಡವಾಗಿ ಪತ್ತೆಯಾಗಿದೆ.

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಬಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಶವ ಹೂತಿಟ್ಟಿರುವ ಬಗ್ಗೆ ಮುಬಿನ್ ಬಾಯಿ ಬಿಟ್ಟಿದ್ದ. ಮುಬಿನ್ ಜೊತೆ ರೆಹಾನ್ ಹಾಗೂ ಮತ್ತೊಬ್ಬ ಸಹಚರ ಸೇರಿ ಕೊಲೆ ಮಾಡಿದ್ದರು.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್​ಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಮೀನಾ ಅವರನ್ನು ಕೊಲೆ ಮಾಡಿದ ಆರೋಪಿಗಳು ಆಕೆಯ ಶವವನ್ನು ಹತ್ತಿರದ ಸ್ಥಳದಲ್ಲಿ ಹೂತಿಟ್ಟಿದ್ದರು. ಮುಬಿನ್​ನನ್ನು ಬಂಧಿಸಲಾಗಿದೆ. ಪೊಲೀಸರ ವಿಚಾರಣೆಯ ಸಮಯದಲ್ಲಿ ಆತ ಮಂಗಲ್ಪುರಿಯಲ್ಲಿ ಮೀನಾರನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾನೆ. ಕೊಲೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಸಿಗಬಾರದು ಎಂಬ ಕಾರಣಕ್ಕೆ ಆಕೆಯ ಶವವನ್ನು ಹೂತಿಟ್ಟಿದ್ದರು.

ಸುಮಾರು 10 ದಿನಗಳ ಹಿಂದೆ ಆ ಮಹಿಳೆಯನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಶವವನ್ನು ಪಡೆಯಲು ಪೊಲೀಸರು ನಂಗ್ಲೋಯ್‌ನಲ್ಲಿ ಸಮಾಧಿಯನ್ನು ಅಗೆದಿದ್ದಾರೆ. ಆಕೆಯ ಮರಣೋತ್ತರ ಪರೀಕ್ಷೆಯನ್ನು ಇಂದು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!