Delhi Fire Accident: ದೆಹಲಿಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಉಸಿರಾಡಲು ಸಾಧ್ಯವಾಗದೆ ರೋಗಿ ಸಾವು
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪೂತ್ ಖುರ್ದ್‌ನ ಬ್ರಹ್ಮ ಶಕ್ತಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಓರ್ವ ರೋಗಿ ಸಾವನ್ನಪ್ಪಿದ್ದಾರೆ.
ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ (Fire Accident) ಕಾಣಿಸಿಕೊಂಡಿದ್ದರಿಂದ ಆಕ್ಸಿಜನ್ ಕೊರತೆಯಿಂದಾಗಿ ಇಂದು (ಶನಿವಾರ) ಮುಂಜಾನೆ 64 ವರ್ಷದ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಐಸಿಯುನಲ್ಲಿದ್ದ (ICU) ಆ ರೋಗಿಯ ಆಕ್ಸಿಜನ್ ಸಪೋರ್ಟ್ ಹಾನಿಗೀಡಾಗಿದ್ದು, ಉಸಿರಾಡಲು ಸಾಧ್ಯವಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪೂತ್ ಖುರ್ದ್‌ನ ಬ್ರಹ್ಮ ಶಕ್ತಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ವಾಹನವನ್ನು ಕರೆಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ಪ್ರಣವ್ ತಯಾಲ್ ತಿಳಿಸಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗಾರ್ಗ್ ಬೆಂಕಿಯನ್ನು ನಂದಿಸಲು ಒಟ್ಟು 9 ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕರೆಸಿದ್ದಾರೆ. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ ಎಂದು ಗಾರ್ಗ್ ತಿಳಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಊಟ ಕೇಳಿದ್ದಕ್ಕೆ 4 ವರ್ಷದ ಮಗುವಿಗೆ ಬೆಂಕಿಯಿಂದ ಸುಟ್ಟು ಮಲತಾಯಿ ಕ್ರೌರ್ಯ!
ಒಬ್ಬ ರೋಗಿಯನ್ನು ಹೊರತುಪಡಿಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟಿರುವ ರೋಗಿಗಳನ್ನು ಐಸಿಯುಗೆ ದಾಖಲಿಸಲಾಗಿದೆ ಮತ್ತು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯಾದ ಪ್ರೇಮ್‌ನಗರದ ನಿವಾಸಿ ಹೋಳಿ ಅವರನ್ನು ತುರ್ತಾಗಿ ಹೊರಗೆ ಕರೆತರಲಾಯಿತಾದರೂ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರಾಟದ ತೊಂದರೆಯಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ತಯಾಲ್ ತಿಳಿಸಿದ್ದಾರೆ.
Delhi | A fire broke out at 3rd (ICU ward) of Brahm Shakti Hospital in Rohini. 9 fire tenders were rushed. All have been safely rescued except 1 patient who was on the ventilator & is suspected to have died. Fire has been completely doused: Atul Garg, Director, Delhi fire service pic.twitter.com/M1aqCijqIj
— ANI (@ANI) June 11, 2022
ಮೇ 27ರಂದು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮತ್ತು ನಗರದ ಪೂರ್ವ ಭಾಗದಲ್ಲಿರುವ ಮಕ್ಕರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದೇ ರೀತಿಯ ಬೆಂಕಿಯ ಘಟನೆಗಳು ವರದಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:12 pm, Sat, 11 June 22