AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾಗಿ ಮೊಬೈಲ್​ ಬಳಸಬೇಡ ಎಂದು ತಿಳಿ ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ

ಮೊಬೈಲ್​, ಟಿವಿ, ಇಂಟರ್ನೆಟ್​ ಬಳಕೆಯಿಂದಾಗಿ ಜನರು ಸಂಬಂಧವನ್ನೇ ಮರೆಯುತ್ತಿದ್ದಾರೆ. ಊಟ ಮಾಡುವಾಗಲೂ, ಮಲಗುವಾಗಲೂ, ಕೆಲಸದ ವೇಳೆಯಲ್ಲೂ, ಶಾಲೆ, ಕಾಲೇಜುಗಳಲ್ಲೂ ಮೊಬೈಲ್​ ಬಳಕೆ ವಿಪರೀತವಾಗಿದೆ. ಹೆಚ್ಚು ಮೊಬೈಲ್​ ಬಳಕೆ ಮಾಡಬೇಡ ಎಂದಿದ್ದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

ಹೆಚ್ಚಾಗಿ ಮೊಬೈಲ್​ ಬಳಸಬೇಡ ಎಂದು ತಿಳಿ ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ
ನಯನಾ ರಾಜೀವ್
|

Updated on: May 05, 2024 | 9:46 AM

Share

ಹೆಚ್ಚಾಗಿ ಮೊಬೈಲ್​ ಫೋನ್​ ಬಳಕೆ ಮಾಡಬೇಡ ಎಂದಿದ್ದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಮೊಬೈಲ್​ಗೆ ಅಡಿಕ್ಟ್​ ಆಗಿದ್ದಳು, ಹುಡುಗರೊಂದಿಗೆ ಹೆಚ್ಚು ಕಾಲ ಮಾತನಾಡುತ್ತಿದ್ದಳು, ಇದನ್ನು ಅರಿತ ಅಣ್ಣ ತಂಗಿಗೆ ಬುದ್ಧಿವಾದ ಹೇಳಿದ್ದ. ಇದಕ್ಕೆ ಕೋಪಗೊಂಡ ಬಾಲಕಿ ಅಣ್ಣನನ್ನು ಹತ್ಯೆ ಮಾಡಿದ್ದಾಳೆ.

ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ ಅಪರಾಧಕ್ಕಾಗಿ ಬಾಲಕಿಯನ್ನು ಬಂಧಿಸಲಾಗಿದೆ. ಘಟನೆಯ ಸಮಯದಲ್ಲಿ ಇತರ ಕುಟುಂಬ ಸದಸ್ಯರು ಕೆಲಸದ ಮೇಲೆ ಹೊರಗೆ ಹೋಗಿದ್ದರೆ ಬಾಲಕಿ ಮತ್ತು ಆಕೆಯ ಸಹೋದರ (18) ಮನೆಯಲ್ಲಿದ್ದರು ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಮೊಬೈಲ್ ಫೋನ್‌ನಲ್ಲಿ ಹುಡುಗರೊಂದಿಗೆ ಮಾತನಾಡುತ್ತೀಯ ಎಂದು ಬೈದಿದ್ದ, ಇನ್ನು ಮುಂದೆ ಫೋನ್ ಬಳಸದಂತೆ ತಿಳಿ ಹೇಳಿದ್ದ. ಬಳಿಕ ಅಣ್ಣ ಮಲಗಿದಾಗ ಕೊಡಲಿಯಿಂದ ಕುತ್ತಿಗೆಗೆ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂತರ ಬಾಲಕಿ ಸ್ನಾನ ಮಾಡಿ ತನ್ನ ಬಟ್ಟೆಯ ಮೇಲಿನ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿ, ತನ್ನ ಅಣ್ಣನನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

ಮತ್ತಷ್ಟು ಓದಿ: Crime News: ಬಾತ್​ರೂಂನಲ್ಲಿ ಹುಟ್ಟಿದ ಮಗುವನ್ನು ಕತ್ತು ಹಿಸುಕಿ ಕೊಂದ ತಾಯಿ!

ಪೊಲೀಸರ ವಿಚಾರಣೆ ವೇಳೆ ಆಕೆ ಆತನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?