AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir Terrorist Attack: ಜಮ್ಮುವಿನಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ; 10 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಉಗ್ರರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಬಸ್ ಕಂದಕಕ್ಕೆ ಬಿದ್ದಾಗ 10 ಯಾತ್ರಿಕರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ಅಪಘಾತದ ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

Jammu and Kashmir Terrorist Attack: ಜಮ್ಮುವಿನಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ; 10 ಮಂದಿ ಸಾವು
ಜಮ್ಮುವಿನಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ
ಸುಷ್ಮಾ ಚಕ್ರೆ
|

Updated on:Jun 09, 2024 | 9:13 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ ಜಿಲ್ಲೆಯ ಇಂದು ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ (Terrorists Attack) ನಡೆಸಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಬಸ್ ಶಿವಖೋಡಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪು ಈ ಕೃತ್ಯ ಎಸಗಿದೆ.

ತಕ್ಷಣದ ಸಹಾಯಕ್ಕಾಗಿ ಆಂಬುಲೆನ್ಸ್‌ಗಳು ರಸ್ತೆಯ ಬದಿಯಲ್ಲಿ ನಿಂತಿದ್ದರಿಂದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿರುವ ದೃಶ್ಯಗಳು ಸ್ಥಳದಿಂದ ಕಂಡುಬಂದವು. ಕೂಡಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸಿನಿಮಾ ಸ್ಟೈಲ್​ಲ್ಲಿ ಕೆರೆಗೆ ಹಾರಿದ ಕಾರು!

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Sun, 9 June 24

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು