ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ ಜಿಲ್ಲೆಯ ಇಂದು ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ (Terrorists Attack) ನಡೆಸಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಬಸ್ ಶಿವಖೋಡಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪು ಈ ಕೃತ್ಯ ಎಸಗಿದೆ.
ತಕ್ಷಣದ ಸಹಾಯಕ್ಕಾಗಿ ಆಂಬುಲೆನ್ಸ್‌ಗಳು ರಸ್ತೆಯ ಬದಿಯಲ್ಲಿ ನಿಂತಿದ್ದರಿಂದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿರುವ ದೃಶ್ಯಗಳು ಸ್ಥಳದಿಂದ ಕಂಡುಬಂದವು. ಕೂಡಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
#WATCH | 10 people dead as a bus rolls down a gorge in Jammu & Kashmir’s Reasi, confirms DC Reasi Vishesh Mahajan.
Details awaited. pic.twitter.com/T7d38iURIw
— ANI (@ANI) June 9, 2024
ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸಿನಿಮಾ ಸ್ಟೈಲ್ಲ್ಲಿ ಕೆರೆಗೆ ಹಾರಿದ ಕಾರು!
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:02 pm, Sun, 9 June 24