AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಂಧ್ರದಲ್ಲಿ ವೈದ್ಯರ ಕುಟುಂಬದ ಐವರ ನಿಗೂಢ ಸಾವು

ಆಂಧ್ರಪ್ರದೇಶದ ವೈದ್ಯರೊಬ್ಬರು ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರು ವಿಜಯವಾಡದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಾವಿಗೆ ಆತ್ಮಹತ್ಯೆ ಕಾರಣವೋ ಅಥವಾ ಅವರನ್ನು ಯಾರಾದರೂ ಕೊಲೆ ಮಾಡಿದ್ದಾರೋ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

Crime News: ಆಂಧ್ರದಲ್ಲಿ ವೈದ್ಯರ ಕುಟುಂಬದ ಐವರ ನಿಗೂಢ ಸಾವು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Apr 30, 2024 | 7:17 PM

Share

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ (Vijayawada) ದಾರುಣ ಘಟನೆಯೊಂದು ನಡೆದಿದೆ. ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇದು ಅನುಮಾನ ಸೃಷ್ಟಿಸಿದೆ. ಈ ಅನುಮಾನಾಸ್ಪದ ಸಾವಿನ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ವೈದ್ಯರಾದ ಡಾ. ಶ್ರೀನಿವಾಸ್ ಶವವಾಗಿ ಪತ್ತೆಯಾಗಿದ್ದು (Dead body), ಮನೆಯಲ್ಲಿ ಅವರ ಪತ್ನಿ, ಮಕ್ಕಳು, ತಾಯಿಯ ಹೆಣವೂ ಪತ್ತೆಯಾಗಿದೆ.

ಡಾ. ಶ್ರೀನಿವಾಸ್ ಎಂಬ ವೈದ್ಯ ತನ್ನ ಮನೆಯ ಹೊರಗೆ, ಅಂಗಳದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯೊಳಗೆ ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ತಾಯಿಯ ಶವಗಳು ರಕ್ತದ ಮಡುವಿನಲ್ಲಿ ಪತ್ತೆಯಾಗಿವೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಪೊಲೀಸರ ಪ್ರಕಾರ, ಗುರುನಾನಕ್ ನಗರದಲ್ಲಿ ಈ ಘಟನೆ ನಡೆದಿದ್ದು, ಡಾ. ಶ್ರೀನಿವಾಸ್ ತಮ್ಮ ಮನೆಯ ಹೊರಗಿನ ಅಂಗಳದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಡಾ.ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕುಟುಂಬದ ಇತರ ನಾಲ್ವರನ್ನು ಕೊಲೆ ಮಾಡಲಾಗಿದೆಯೇ ಅಥವಾ ಬೇರೆ ಏನಾದರೂ ವಿಷಯವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶ್ವಾನದಳ ಹಾಗೂ ಸುಳಿವು ತಂಡ ಮನೆಯಿಂದ ಸಾಕ್ಷ್ಯ ಸಂಗ್ರಹಿಸಿದೆ.

ಪೊಲೀಸರು ರಕ್ತದಿಂದ ಕೂಡಿದ್ದ ಚೂರಿಯನ್ನು ವಶಪಡಿಸಿಕೊಂಡಿದ್ದಾರೆ. ಡಾ. ಶ್ರೀನಿವಾಸ್ ಅವರು ಬರೆದಿ ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ನನ್ನ ಸಹೋದರನಿಗೆ ಕಾರಿನ ಕೀಗಳನ್ನು ನೀಡಿ” ಎಂದು ಬರೆಯಲಾಗಿದೆ. ಅವರ ಕಾರಿನಲ್ಲಿದ್ದ ಬ್ಯಾಗನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಾದಿನಿ ಮದುವೆಗೆ ಕರೆಯಲಿಲ್ಲ ಎಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಯೋಧ

ಮೃತರನ್ನು ಡಾ.ಡಿ.ಶ್ರೀನಿವಾಸ್ (40), ಅವರ ಪತ್ನಿ ಉಷಾರಾಣಿ (36), ಅವರ ಮಕ್ಕಳಾದ ಶೈಲಜಾ (9), ಶ್ರೀಹಾನ್ (5), ಮತ್ತು ಶ್ರೀನಿವಾಸ್ ಅವರ ತಾಯಿ ರಮಣಮ್ಮ (65) ಎಂದು ಗುರುತಿಸಲಾಗಿದೆ. ಸ್ಥಳೀಯರು ಮತ್ತು ಡಾ. ಶ್ರೀನಿವಾಸ್ ಅವರ ಸ್ನೇಹಿತರ ಪ್ರಕಾರ, ಅವರು ಆಸ್ಪತ್ರೆಯನ್ನು ಹೊಂದಿದ್ದು, ಬಹಳ ಸಾಲ ಮಾಡಿಕೊಂಡಿದ್ದರು. ಇದೇ ಕಾರಣದಿಂದ ಆಸ್ಪತ್ರೆಯನ್ನು ಟ್ರಸ್ಟ್‌ಗೆ ಬಾಡಿಗೆಗೆ ನೀಡಿದ್ದಾರೆ ಎಂಬ ವದಂತಿಯಿದೆ. ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಪ್ರಕರಣ ದಾಖಲಾಗಬೇಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್