AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜೇಶ್ವರ; ಚಿಕ್ಕ ಬಾಲಕಿಯ ಹೊಡೆದು ರಸ್ತೆಗೆಸೆದು ಕ್ರೌರ್ಯ ಮೆರೆದ ವ್ಯಕ್ತಿ ಬಂಧನ

Kasaragod Crime; ಆರೋಪಿಯು ಬಾಲಕಿಗೆ ಹೊಡೆದು ಆಕೆಯನ್ನು ನೆಲಕ್ಕೆ ಎಸೆದಿರುವ ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಏಕಾಏಕಿ ಬಾಲಕಿಯತ್ತ ಬಂದ ಆರೋಪಿ ಆಕೆಗೆ ಹೊಡೆಯುತ್ತಾನೆ. ಬಳಿಕ ಆಕೆಯನ್ನು ಎತ್ತಿ ಎಸೆದು ಏನೂ ಆಗಿಯೇ ಇಲ್ಲ ಎಂಬಂತೆ ನಡೆದುಕೊಂಡು ಹೋಗಿ ಮತ್ತೊಂದು ಬದಿಯಲ್ಲಿ ನಿಂತಿರುವುದು ವಿಡಿಯೊದಲ್ಲಿದೆ.

ಮಂಜೇಶ್ವರ; ಚಿಕ್ಕ ಬಾಲಕಿಯ ಹೊಡೆದು ರಸ್ತೆಗೆಸೆದು ಕ್ರೌರ್ಯ ಮೆರೆದ ವ್ಯಕ್ತಿ ಬಂಧನ
ಆರೋಪಿಯು ಬಾಲಕಿಯನ್ನು ಎತ್ತಿ ಎಸೆದಿರುವುದು (ಟ್ವಿಟರ್ ಸ್ಕ್ರೀನ್​ಗ್ರ್ಯಾಬ್ ಚಿತ್ರ)
TV9 Web
| Updated By: Ganapathi Sharma|

Updated on: Nov 18, 2022 | 12:23 PM

Share

ಕಾಸರಗೋಡು: ರಸ್ತೆ ಬದಲಿಯಲ್ಲಿದ್ದ 8 ವರ್ಷ ವಯಸ್ಸಿನ ಬಾಲಕಿಯನ್ನು ವ್ಯಕ್ತಿಯೊಬ್ಬ ಹೊಡೆದು, ಎತ್ತಿ ರಸ್ತೆಗೆ ಎಸೆದ ಘಟನೆ ಕೇರಳದ ಕಾಸರಗೋಡಿ (Kasaragod) ಮಂಜೇಶ್ವರ (Manjeshwar) ಎಂಬಲ್ಲಿ ಗುರುವಾರ ನಡೆದಿದೆ. ಬಾಲಕಿಯು ಮದರಸಾದಿಂದ ಹೊರಬಂದು ಮನೆಯವರಿಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಎಂಬಾತನನ್ನು ಬಂಧಿಸಲಾಗಿದೆ. ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಘಾತಗೊಂಡು ನಿಂತಿದ್ದ ಬಾಲಕಿಯನ್ನು ಗಮನಿಸಿದ ಮನೆಯವರು ಏನಾಗಿದೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ, ಯಾರೋ ಬಂದು ಹೊಡೆದಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಸಮೀಪದ ಶಾಲೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಆರೋಪಿಯು ಬಾಲಕಿಗೆ ಹೊಡೆದು ಆಕೆಯನ್ನು ನೆಲಕ್ಕೆ ಎಸೆದಿರುವ ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಏಕಾಏಕಿ ಬಾಲಕಿಯತ್ತ ಬಂದ ಆರೋಪಿ ಆಕೆಗೆ ಹೊಡೆಯುತ್ತಾನೆ. ಬಳಿಕ ಆಕೆಯನ್ನು ಎತ್ತಿ ಎಸೆದು ಏನೂ ಆಗಿಯೇ ಇಲ್ಲ ಎಂಬಂತೆ ನಡೆದುಕೊಂಡು ಹೋಗಿ ಮತ್ತೊಂದು ಬದಿಯಲ್ಲಿ ನಿಂತಿರುವುದು ವಿಡಿಯೊದಲ್ಲಿದೆ. ದಿಢೀರ್ ಹಲ್ಲೆಯಿಂದ ಆಘಾತಗೊಂಡ ಬಾಲಕಿ ಅಲ್ಲಿಂದ ಎದ್ದು ಬದಿಗೆ ಸರಿಯುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.

ವಿಡಿಯೊ ಇಲ್ಲಿದೆ;

ಘಟನೆಯಿಂದ ಆಘಾತಗೊಂಡಿದ್ದ ಬಾಲಕಿ ಆರಂಭದಲ್ಲಿ ಏನೂ ಹೇಳಿರಲಿಲ್ಲ. ಕೊನೆಯಲ್ಲಿ ಯಾರೋ ಹೊಡೆದರು ಎಂದಷ್ಟೇ ಹೇಳಿದಳು. ಆಮೇಲೆ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ನಿಜ ವಿಚಾರ ತಿಳಿಯಿತು ಎಂದು ಆಕೆಯ ಸಂಬಂಧಿಕರು ತಿಳಿಸಿದ್ದಾರೆ.

ಘಟನೆ ಸಂಬಂಧಿತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಬಾಲಕಿ ಗಾಯಗೊಂಡಿರುವುದು ತಿಳಿದುಬಂದಿಲ್ಲ. ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?