Crime News: ಕುಕ್ಕರ್‌ನಿಂದ ಹೆಂಡತಿಗೆ ಹೊಡೆದು ಆತ್ಮಹತ್ಯೆಗೆ ಯತ್ನಿಸಿದ ಗಂಡ

ಪೊಲೀಸರ ಪ್ರಕಾರ, ಪ್ರೆಶರ್ ಕುಕ್ಕರ್​ನಿಂದ ಹೊಡೆದು ತನ್ನ ಹೆಂಡತಿಯನ್ನು ಕೊಂದ ನಂತರ ವ್ಯಕ್ತಿಯೊಬ್ಬ ರೈಲ್ವೆ ಹಳಿಯ ಮೇಲೆ ಮಲಗಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ, ಆತನನ್ನು ರಕ್ಷಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Crime News: ಕುಕ್ಕರ್‌ನಿಂದ ಹೆಂಡತಿಗೆ ಹೊಡೆದು ಆತ್ಮಹತ್ಯೆಗೆ ಯತ್ನಿಸಿದ ಗಂಡ
ಸಾಂದರ್ಭಿಕ ಚಿತ್ರ
Follow us
|

Updated on: Jun 18, 2024 | 8:30 PM

ನವದೆಹಲಿ: ಮನೆಯಲ್ಲಿ ಹೆಂಡತಿಯೊಂದಿಗೆ ಗಲಾಟೆ ಮಾಡಿಕೊಂಡ ನಂತರ ಆಕೆಗೆ ಕುಕ್ಕರ್​​ನಲ್ಲಿ ಹೊಡೆದು ಗಂಡನೇ ಕೊಲೆ (Murder) ಮಾಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಹೆಂಡತಿಯೊಂದಿಗೆ ಗಲಾಟೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರೆಶರ್ ಕುಕ್ಕರ್‌ನಿಂದ ಹೊಡೆದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಸೋಮವಾರ ಕೊಲೆ ಮಾಡಿದ್ದಾನೆ. ಬಳಿಕ ಆ ವ್ಯಕ್ತಿ ಆತ್ಮಹತ್ಯೆಗೆ (Suicide) ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.

“20 ವರ್ಷದ ಆಯುಷಿ ಮಿಶ್ರಾ ಎಂದು ಗುರುತಿಸಲಾದ ಮಹಿಳೆಯ ವಿರೂಪಗೊಂಡ ಶವವನ್ನು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಎಂ ಆವಾಸ್ ಯೋಜನೆಯಲ್ಲಿರುವ ಅವರ ಮನೆಯಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ” ಎಂದು ದಕ್ಷಿಣದ ಹೆಚ್ಚುವರಿ ಪೊಲೀಸ್ ಉಪ ಕಮಿಷನರ್ ಶಶಾಂಕ್ ಸಿಂಗ್ ಹೇಳಿದ್ದಾರೆ.

“30 ವರ್ಷದ ನಿತಿನ್ ಮಿಶ್ರಾ ಮತ್ತು ಅವರ ಪತ್ನಿಯ ನಡುವಿನ ತೀವ್ರ ಜಗಳವೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ. ಆ ದಂಪತಿ ಕೇವಲ 1 ವರ್ಷದ ಹಿಂದೆ ವಿವಾಹವಾಗಿದ್ದರು.

ಇದನ್ನೂ ಓದಿ: ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೆ ಸಂಚು, ಅಪಘಾತದಲ್ಲೂ ಸಾಯ್ಲಿಲ್ಲ ಕೊನೆಗೆ ಗುಂಡು ಹಾರಿಸಿ ಕೊಂದ ಪತ್ನಿ

ಪೊಲೀಸರ ಪ್ರಕಾರ, ತನ್ನ ಹೆಂಡತಿಯನ್ನು ಕೊಂದ ನಂತರ, ಆ ವ್ಯಕ್ತಿ ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಈ ಪ್ರಕ್ರಿಯೆಯಲ್ಲಿ ಆತ ಗಾಯಗೊಂಡಿದ್ದಾನೆ. ಪೊಲೀಸರು ವ್ಯಕ್ತಿಯನ್ನು ವಿಚಾರಿಸಿದಾಗ ಕೊಲೆಯ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾನೆ. ನಂತರ ಪೊಲೀಸರು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಮನೆಗೆ ತಲುಪಿದಾಗ ಆ ಮಹಿಳೆಯ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿತು. ವರದಿಯ ಪ್ರಕಾರ, ಸೀತಾಪುರ ಮೂಲದ 30 ವರ್ಷದ ನಿತಿನ್ ಮಿಶ್ರಾ ರಿಯಲ್ ಎಸ್ಟೇಟ್ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಪತ್ನಿಯೊಂದಿಗೆ ಬಾಡಿಗೆಗೆ ವಾಸವಾಗಿದ್ದರು. ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಬದಲಾಯಿತು ವಿಚಾರಣೆ ಭಾಷೆ; ಪೊಲೀಸರ ಕಾಲಿಗೆ ಬಿದ್ದ ಕೊಲೆ ಆರೋಪಿ ದರ್ಶನ್?

ಪತ್ನಿಯನ್ನು ಕೊಂದ ಬಳಿಕ ನಿತಿನ್ ಮನೆಯ ಬಾಗಿಲು ಮುಚ್ಚಿ ಧೌಧನ್ ಖೇಡಾ ಬಳಿಯ ರೈಲ್ವೆ ಹಳಿ ತಲುಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲಿನ ಮುಂದೆ ಜಿಗಿಯಲು ಯತ್ನಿಸಿದ ಕೂಡಲೇ ಜನರು ಜಿಆರ್‌ಪಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆತನನ್ನು ರಕ್ಷಿಸಲಾಯಿತು. ಆಗ ಅವನ ಕೈಕಾಲುಗಳಿಗೆ ಗಾಯವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!