Shocking Video: ವಾಹನ ಚಾಲಕರೇ ಎಚ್ಚರ; ಇಲ್ಲಿದೆ ಭೀಕರ ಅಪಘಾತದ ವಿಡಿಯೋ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿನ ಟ್ರಾಫಿಕ್ ಸಿಗ್ನಲ್​ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದುರಂತ ಘಟನೆಯು ಕಾರು ಪಲ್ಟಿಯಾಗುವ ಮೊದಲು ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ತೋರಿಸುತ್ತದೆ. ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಲವರಿಗೆ ಗಾಯಗಳಾಗಿವೆ.

Follow us
ಸುಷ್ಮಾ ಚಕ್ರೆ
|

Updated on:Jun 03, 2024 | 10:23 PM

ಮುಂಬೈ: ಪುಣೆಯಲ್ಲಿ ಪೋರ್ಷೆ ಕಾರು (Pune Porsche Crash Case) ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದರು. ಅದಾದ ಬಳಿಕ ಅದೇ ರೀತಿಯ ಹಲವು ಅಪಘಾತಗಳು ನಡೆಯುತ್ತಿವೆ. ಇದೀಗ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ (Kolhapur) ಅದೇ ರೀತಿಯ ಭೀಕರ ಅಪಘಾತವೊಂದು (Accident) ನಡೆದಿದ್ದು, ಕಾರಿನ ರಭಸಕ್ಕೆ ಬೈಕ್​ಗಳು ಛಿದ್ರ ಛಿದ್ರವಾಗಿವೆ. ಈ ದುರಂತ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದ ಜನನಿಬಿಡ ಜಂಕ್ಷನ್‌ನಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿದ ಕಾರೊಂದು 5 ಬೈಕ್‌ಗಳು ಸೇರಿದಂತೆ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಜನನಿಬಿಡ ಜಂಕ್ಷನ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿದ್ದ ಇತರ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Viral Video: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನ ಪ್ರಾಣ ರಕ್ಷಿಸಿದ ರಿಯಲ್‌ ಹೀರೋಗಳು; ಇಲ್ಲಿದೆ ರೋಚಕ ವಿಡಿಯೋ 

ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರು ಕಾಣಿಸಿಕೊಂಡು, ಪಲ್ಟಿಯಾಗುವ ಮೊದಲು ಹಲವಾರು ಬೈಕ್‌ಗಳು ಮತ್ತು ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರರು ಹಾರಿ ಬಿದ್ದಿದ್ದು, ಕೆಲವರು ಹಲವು ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ. ಬೈಕ್​ನಲ್ಲಿದ್ದ ಮಗುವಿಗೂ ಗಾಯಗಳಾಗಿವೆ. ಇದನ್ನೂ ಓದಿ:

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 pm, Mon, 3 June 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ