Shocking Video: ವಾಹನ ಚಾಲಕರೇ ಎಚ್ಚರ; ಇಲ್ಲಿದೆ ಭೀಕರ ಅಪಘಾತದ ವಿಡಿಯೋ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿನ ಟ್ರಾಫಿಕ್ ಸಿಗ್ನಲ್​ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದುರಂತ ಘಟನೆಯು ಕಾರು ಪಲ್ಟಿಯಾಗುವ ಮೊದಲು ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ತೋರಿಸುತ್ತದೆ. ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಲವರಿಗೆ ಗಾಯಗಳಾಗಿವೆ.

ಮುಂಬೈ: ಪುಣೆಯಲ್ಲಿ ಪೋರ್ಷೆ ಕಾರು (Pune Porsche Crash Case) ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದರು. ಅದಾದ ಬಳಿಕ ಅದೇ ರೀತಿಯ ಹಲವು ಅಪಘಾತಗಳು ನಡೆಯುತ್ತಿವೆ. ಇದೀಗ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ (Kolhapur) ಅದೇ ರೀತಿಯ ಭೀಕರ ಅಪಘಾತವೊಂದು (Accident) ನಡೆದಿದ್ದು, ಕಾರಿನ ರಭಸಕ್ಕೆ ಬೈಕ್​ಗಳು ಛಿದ್ರ ಛಿದ್ರವಾಗಿವೆ. ಈ ದುರಂತ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದ ಜನನಿಬಿಡ ಜಂಕ್ಷನ್‌ನಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿದ ಕಾರೊಂದು 5 ಬೈಕ್‌ಗಳು ಸೇರಿದಂತೆ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಜನನಿಬಿಡ ಜಂಕ್ಷನ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿದ್ದ ಇತರ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Viral Video: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನ ಪ್ರಾಣ ರಕ್ಷಿಸಿದ ರಿಯಲ್‌ ಹೀರೋಗಳು; ಇಲ್ಲಿದೆ ರೋಚಕ ವಿಡಿಯೋ 

ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರು ಕಾಣಿಸಿಕೊಂಡು, ಪಲ್ಟಿಯಾಗುವ ಮೊದಲು ಹಲವಾರು ಬೈಕ್‌ಗಳು ಮತ್ತು ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರರು ಹಾರಿ ಬಿದ್ದಿದ್ದು, ಕೆಲವರು ಹಲವು ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ. ಬೈಕ್​ನಲ್ಲಿದ್ದ ಮಗುವಿಗೂ ಗಾಯಗಳಾಗಿವೆ.
ಇದನ್ನೂ ಓದಿ:

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 pm, Mon, 3 June 24

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us