ಪ್ರೇಯಸಿಗೆ ಬೇರೆಯವನೊಂದಿಗೆ ಮದುವೆ ನಿಶ್ಚಯ; ವಿಚಾರಿಸಲು ಹೋದ ಯುವಕನನ್ನು ಕೊಂದ ಕುಟುಂಬಸ್ಥರು

ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪ್ರೇಯಸಿಗೆ ಬೇರೆಯವನೊಂದಿಗೆ ಮದುವೆ ನಿಶ್ಚಯ; ವಿಚಾರಿಸಲು ಹೋದ ಯುವಕನನ್ನು ಕೊಂದ ಕುಟುಂಬಸ್ಥರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on:Jun 24, 2021 | 12:26 PM

ಪ್ರೀತಿಸುತ್ತಿದ್ದ ಯುವತಿಯ ಮನೆಯವರು, 21 ವರ್ಷದ ಯುವಕನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ದಿಂಡಿಗಲ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಲಾಗಿದೆ ಎಂದು ವರದಿಗಳ ಪ್ರಕಾರ ತಿಳಿದು ಬಂದಿದೆ.

21 ವರ್ಷದ ಯುವಕನ ಹೆಸರು ಭಾರತಿರಾಜ. ದಿಂಡಿಗಲ್​ ಜಿಲ್ಲೆಯ ಪುದುಪುಟ್ಟಿ ಮೂಲದವನು. ಸುರುಮೈನ ಖಾಸಗಿ ಹೊಟೇಲ್​ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಐದು ವರ್ಷಗಳಿಂದ 20 ವರ್ಷದ ಯುವತಿ ಪರಮೇಶ್ವರಿಯನ್ನು ಪ್ರೀತಿಸುತ್ತಿದ್ದ. ಈ ಕುರಿತಂತೆ ಯುವತಿ ಕುಟುಂಬಸ್ಥರಿಗೆ ತಿಳಿದಾಗ ಇವರ ಪ್ರೀತಿಯನ್ನು ನಿರಾಕರಿಸಿದ್ದಾರೆ ಹಾಗೂ ಬೇರೆ ಹುಡುಗನೊಂದಿಗೆ ಮದುವೆ ನಿಶ್ಚಯ ಮಾಡಲು ನಿರ್ಧರಿಸಿದ್ದಾರೆ.

ಈ ವಿಷಯನ್ನು ಪ್ರಿಯತಮ ಭಾರತಿರಾಜನಿಗೆ  ಯುವತಿ ಪರಮೇಶ್ವರಿ ಹೇಳಿದ್ದಾಳೆ. ವಿಷಯ ತಿಳಿದ ಬಳಿಕವೇ ಭಾರತಿರಾಜ ತನ್ನಿಬ್ಬರ ಸ್ನೇಹಿತರೊಡನೆ ಆಕೆಯ ಮನೆಗೆ ತೆರಳಿದ್ದಾನೆ. ಆ ಸಂದರ್ಭದಲ್ಲಿ ಪರಮೇಶ್ವರಿ ಕುಟುಂಬಸ್ಥರು ಮತ್ತು ಭಾರತಿರಾಜನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಪರಮೇಶ್ವರಿ ಸಹೋದರ ಮಲೈಸಾಮಿ ಭಾರತಿರಾಜನಿಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಇಬ್ಬರ ಜಗಳದಲ್ಲಿ ಗಂಭೀರ ಗಾಯಗೊಂಡ ಇವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾರತಿರಾಜ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿದ ಭಾರತಿರಾಜ ಅವರ ತಂದೆ, ನನ್ನ ಮಗನ ಸಾವಿನಲ್ಲಿ ಭಾಗಿಯಾದವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಾಥಮಿಕ ತನಿಖೆಯ ಬಳಿಕ ಪರಮೇಶ್ವರಿ ಪೋಷಕರಾದ ರಸು(63),ಅಲಕುನಾಚಿ(58) ಸಹೋದರರಾದ ಮಲೈಸಾಮಿ(33) ಮತ್ತು ಬಾಲ​ಕುಮಾರ್​(28) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:

Rekha Kadiresh: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್​ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ವರದಕ್ಷಿಣೆ ಕಿರುಕುಳ; ಮದುವೆಯಾದ ಮೂರೇ ತಿಂಗಳಿಗೆ ಯುವತಿ ಕೊಲೆ, ಪರಾರಿಯಾದ ಕುಟುಂಬ

Published On - 12:20 pm, Thu, 24 June 21

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು