ಒಡಿಶಾ: ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ಒಡಿಶಾದ ಗಂಜಾಂನಲ್ಲಿ 27 ವರ್ಷದ ವ್ಯಕ್ತಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಶನಿವಾರ ನಿರ್ಮಾಣ ಹಂತದ ಮನೆಯಿಂದ ಆಕೆಯ ಮೃತದೇಹ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ: ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ
ಕ್ರೈಂ

Updated on: Apr 27, 2025 | 2:25 PM

ಭುವನೇಶ್ವರ, ಏಪ್ರಿಲ್ 27: ಒಡಿಶಾದ ಗಂಜಾಂನಲ್ಲಿ 27 ವರ್ಷದ ವ್ಯಕ್ತಿ ತನ್ನ  ಸಂಬಂಧಿಯ 4 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ(Murder) ಮಾಡಿದ್ದಾನೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಶನಿವಾರ ನಿರ್ಮಾಣ ಹಂತದ ಮನೆಯಿಂದ ಆಕೆಯ ಮೃತದೇಹ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಪೋಷಕರು ಮಗು ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಆ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸುವೇಂದು ಪಾತ್ರ ತಿಳಿಸಿದ್ದಾರೆ.

ಆರೋಪಿಯು ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ, ತಮ್ಮ ಗ್ರಾಮದಲ್ಲಿ ನಡೆಯುವ ಹಬ್ಬಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದ. ಆದರೆ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಆಕೆಯ ಕುತ್ತಿಗೆ ಹಿಸುಕಿ ಕೊಂದು, ನಂತರ ಶವವನ್ನು ಎಸೆದಿದ್ದ. ಆತ ಮದ್ಯದ ಅಮಲಿನಲ್ಲಿದ್ದ ಎಂದು ಎಸ್ಪಿ ಹೇಳಿದರು.

ಇದನ್ನೂ ಓದಿ
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ನಾಪತ್ತೆ ದೂರು ದಾಖಲಾದ ನಂತರ, ಪೊಲೀಸರು ತನಿಖೆ ಆರಂಭಿಸಿದರು. ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ವಿಧಿವಿಜ್ಞಾನ ತಂಡ ಮತ್ತು ಶ್ವಾನ ದಳವು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಪುರಾವೆಗಳನ್ನು ಸಂಗ್ರಹಿಸಿತು.

ಮತ್ತಷ್ಟು ಓದಿ: ಸ್ನೇಹಿತೆ ಮೇಲಾಗುತ್ತಿದ್ದ ಲೈಂಗಿಕ ಕಿರುಕುಳ ತಡೆಯಲು ಹೋದ ವ್ಯಕ್ತಿಯನ್ನು ಹೊಡೆದು ಕೊಂದ ಗುಂಪು

ಅನುಮಾನದ ಆಧಾರದ ಮೇಲೆ, ಆರೋಪಿ ಸೇರಿದಂತೆ ಹಲವರನ್ನು ವಿಚಾರಣೆಗೆ ಕರೆಯಲಾಗಿತ್ತು. ಆರೋಪಿಯನ್ನು ಬಾಲಕಿಯೊಂದಿಗೆ ನೋಡಲಾಗಿದೆ ಎಂದು ವರದಿಯಾಗಿದೆ ಮತ್ತು ಸ್ಥಳೀಯರು ಹೇಳುವಂತೆ ಆತ ಆಗಾಗ ಬಾಲಕಿಗೆ ಚಿಪ್ಸ್ ಮತ್ತು ಚಾಕೊಲೇಟ್ ಕೊಡುತ್ತಿದ್ದ ಎಂದು ಎಸ್​ಪಿ ತಿಳಿಸಿದ್ದಾರೆ.

ಆರೋಪಿ ಏಪ್ರಿಲ್ 25 ರಂದು ಸಂಜೆ ಮದ್ಯದ ಅಮಲಿನಲ್ಲಿದ್ದ , ಆಕೆಯನ್ನು ಕರೆದುಕೊಂಡು ಹೋಗುವ ಮೊದಲು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿದ್ದ. ಮೃತ ದೇಹವನ್ನು ಎಸೆದ ನಂತರ ಅವನು ಮತ್ತೆ ಮದ್ಯ ಸೇವಿಸಿದ್ದ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಕೆಸಿಜಿ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದಾರೆ. ಶವಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ