Crime News: ಮುಂಬೈನಲ್ಲಿ ಹಾಡಹಗಲೇ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ; ವೈರಲ್ ಆಗಿರುವ ಭಯಾನಕ ವಿಡಿಯೋ ಇಲ್ಲಿದೆ

Shocking Video | ಐದಾರು ಜನರು ಬಂದು ವಕೀಲ ಸತ್ಯದೇವ್ ಮೇಲೆ ಮಚ್ಚು, ಲಾಂಗಿನಿಂದ ದಾಳಿ ನಡೆಸಿರುವುದು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.

Crime News: ಮುಂಬೈನಲ್ಲಿ ಹಾಡಹಗಲೇ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ; ವೈರಲ್ ಆಗಿರುವ ಭಯಾನಕ ವಿಡಿಯೋ ಇಲ್ಲಿದೆ
ವಕೀಲನನ್ನು ಥಳಿಸಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 19, 2021 | 6:40 PM

ಮುಂಬೈ: ಮಹಾರಾಷ್ಟ್ರದ ಮುಂಬೈ ಮಹಾನಗರಿಯಲ್ಲಿ ರೌಡಿಸಂ ಇನ್ನೂ ನಿಂತಿಲ್ಲ. ಇಲ್ಲಿ ದಿನನಿತ್ಯ ಹತ್ತಾರು ಕೊಲೆ, ಸುಲಿಗೆ, ಕಿಡ್ನಾಪ್, ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿರುತ್ತವೆ. ಸದ್ಯಕ್ಕೆ ಮುಂಬೈನ ವಕೀಲರೊಬ್ಬರ ಮೇಲೆ ಹಾಡಹಗಲೇ ದುರ್ಷರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಮುಂಬೈನ ಬೋರಿವಲಿ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನದ ವೇಳೆ ಕಾರಿನಲ್ಲಿ ಹೋಗುತ್ತಿದ್ದ ವಕೀಲ ಸತ್ಯದೇವ್ ಜೋಷಿ ಎಂಬುವವರನ್ನು ರೌಡಿಗಳ ಗುಂಪೊಂದು ಅಡ್ಡಹಾಕಿತ್ತು. ಕೈಯಲ್ಲಿ ಮಚ್ಚು, ಲಾಂಗುಗಳನ್ನು ಹಿಡಿದುಕೊಂಡು ಬಂದಿದ್ದ ಅವರು ಜೋಷಿಯ ಕಾರನ್ನು ಮಧ್ಯರಸ್ತೆಯಲ್ಲಿ ಅಡ್ಡಹಾಕಿದ್ದರು. ಕಾರಿನಿಂದ ಇಳಿದು ಏನೆಂದು ಕೇಳುತ್ತಿದ್ದಾಗ ಅವರ ಹಿಂದಿನಿಂದ ಬಂದ ರೌಡಿಗಳು ಮಚ್ಚಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ದೊಣ್ಣೆಗಳಿಂದಲೂ ಥಳಿಸಿದ್ದಾರೆ.

ವಕೀಲ ಮದನ್ ಜೆ. ಗುಪ್ತಾ ಎಂಬುವವರು ಟ್ವಿಟ್ಟರ್​ನಲ್ಲಿ ಈ ಭಯಾನಕವಾದ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಐದಾರು ಜನರು ಬಂದು ವಕೀಲ ಸತ್ಯದೇವ್ ಮೇಲೆ ದಾಳಿ ನಡೆಸಿರುವುದು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಹಗಲು ವೇಳೆಯಲ್ಲೇ ಒಬ್ಬ ವಕೀಲರಿಗೆ ಈ ರೀತಿ ಆಗಿರುವುದನ್ನು ನೋಡಿದ ನೆಟ್ಟಿಗರು ಮುಂಬೈನಲ್ಲಿ ಜನಸಾಮಾನ್ಯರಿಗೆ ಯಾವ ರೀತಿಯ ರಕ್ಷಣೆಯನ್ನು ನಿರೀಕ್ಷಿಸಲು ಸಾಧ್ಯ ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು, ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಈ ರೀತಿ ವಕೀಲರ ಮೇಲೆ ಹಲ್ಲೆ ನಡೆಸಲು ಕಾರಣವೇನೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಸತ್ಯದೇವ್ ವಾದ ಮಂಡನೆ ಮಾಡುತ್ತಿದ್ದ ಕಕ್ಷಿದಾರರ ವಿರೋಧಿ ಬಣದಿಂದ ಈ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.

ಈ ಘಟನೆಯಲ್ಲಿ ವಕೀಲ ಸತ್ಯದೇವ್ ಜೋಷಿ ಗಂಭೀರವಾಗಿ ಗಾಯಗೊಂಡಿದ್ದು, ಹೊಟ್ಟೆ, ತಲೆಗೆ ಹೊಲಿಗೆಯನ್ನು ಹಾಕಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಹೇಳಿಕೆ ನೀಡಿದ ನಂತರ ಅಸಲಿ ವಿಷಯ ಗೊತ್ತಾಗುವ ಸಾಧ್ಯತೆಯಿದೆ. ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Cadbury Chocolate: ಡೇರಿ ಮಿಲ್ಕ್ ಚಾಕೋಲೇಟ್​ನಲ್ಲಿ ದನದ ಮಾಂಸವಿದೆಯಾ?; ಕ್ಯಾಡ್​ಬರಿಯಿಂದ ಅಚ್ಚರಿಯ ಸ್ಪಷ್ಟನೆ

Viral Video: ಮದುವೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ವಧು; ಕಂಗಾಲಾಗಿ ಮಂಟಪದಿಂದ ಓಡಿಹೋದ ವರ!

(Mumbai lawyer attacked with swords in Borivali in daylight Watch Shocking Video)

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ