AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶಾಹೀನ್ ಬಾಗ್​ನ ಮನೆ ಮೇಲೆ ಎನ್​ಸಿಬಿ ದಾಳಿ; 300 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶ

ಈ ವರ್ಷದ ಅತಿ ದೊಡ್ಡ ದಂಧೆ ಎಂದು ಕರೆದಿರುವ ಎನ್‌ಸಿಬಿ ಅಧಿಕಾರಿಗಳಿಗೆ ಡ್ರಗ್ಸ್ ಬಗ್ಗೆ ಸುಳಿವು ಸಿಕ್ಕಿದ್ದು, ಶಾಹೀನ್ ಬಾಗ್‌ನಲ್ಲಿ ದಾಳಿ ನಡೆಸಲಾಗಿದೆ.

Crime News: ಶಾಹೀನ್ ಬಾಗ್​ನ ಮನೆ ಮೇಲೆ ಎನ್​ಸಿಬಿ ದಾಳಿ; 300 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶ
ಸೀಜ್ ಮಾಡಲಾದ ಹೆರಾಯಿನ್
TV9 Web
| Edited By: |

Updated on: Apr 29, 2022 | 2:35 PM

Share

ನವದೆಹಲಿ: ದೆಹಲಿಯ ಶಾಹೀನ್ ಬಾಗ್‌ನಲ್ಲಿರುವ ಮನೆಯೊಂದರಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) 97 ಕೆಜಿಗೂ ಹೆಚ್ಚು ಹೆರಾಯಿನ್ ಮತ್ತು ಇತರ ಮಾದಕ ವಸ್ತುಗಳನ್ನು (ಡ್ರಗ್ಸ್​) ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಹೆರಾಯಿನ್ ಅಫ್ಘಾನಿಸ್ತಾನದಿಂದ (Afghanistan) ಬಂದಿದೆ ಎನ್ನಲಾಗಿದೆ. ಪಾಕಿಸ್ತಾನಿ ಕಳ್ಳಸಾಗಣೆದಾರರ ಸಹಾಯದಿಂದ ಅಂತಾರಾಷ್ಟ್ರೀಯ ಹೆರಾಯಿನ್ ದಂಧೆಯನ್ನು (heroin Scam) ಭೇದಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದ ಅತಿ ದೊಡ್ಡ ದಂಧೆ ಎಂದು ಕರೆದಿರುವ ಎನ್‌ಸಿಬಿ ಅಧಿಕಾರಿಗಳಿಗೆ ಡ್ರಗ್ಸ್ ಬಗ್ಗೆ ಸುಳಿವು ಸಿಕ್ಕಿದ್ದು, ಶಾಹೀನ್ ಬಾಗ್‌ನಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ. ಈ ತಂಡವು ಮನೆಯಲ್ಲಿದ್ದ 50 ಕೆಜಿ ಹೆರಾಯಿನ್, 47 ಕೆಜಿ ಮಾದಕ ದ್ರವ್ಯ ಮತ್ತು 30 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಎನ್​ಸಿಬಿ ಉಪ ಮಹಾನಿರ್ದೇಶಕ ಸಂಜಯ್ ಕುಮಾರ್ ಸಿಂಗ್, ಡ್ರಗ್‌ಗಳನ್ನು ಟ್ರಾವೆಲ್ ಬ್ಯಾಗ್‌ಗಳು, ಬ್ಯಾಕ್‌ಪ್ಯಾಕ್‌ಗಳು ಮತ್ತು ಸೆಣಬಿನ ಚೀಲಗಳಲ್ಲಿ ಸಂಗ್ರಹಿಸಲಾಗಿತ್ತು. ದಾಳಿ ವೇಳೆ ವಶಪಡಿಸಿಕೊಂಡ ಹಣವನ್ನು ಹವಾಲಾ ಮಾರ್ಗಗಳ ಮೂಲಕ ಪಡೆದಿರುವ ಶಂಕೆ ಇದೆ. ಹೆರಾಯಿನ್ ಅನ್ನು ಫ್ಲಿಪ್‌ಕಾರ್ಟ್‌ನ ಪ್ಯಾಕ್‌ಗಳಲ್ಲಿ ಹಾಕಲಾಗಿತ್ತು. ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಸಹ ಬಂಧಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಶಪಡಿಸಿಕೊಂಡ ಡ್ರಗ್ಸ್ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 300 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಯು 40 ವರ್ಷದ ಉದ್ಯಮಿಯಾಗಿದ್ದು, ಪಂಜಾಬ್ ಮತ್ತು ಇತರ ರಾಜ್ಯಗಳಲ್ಲಿ ಮಾದಕವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಎಂದು ತನಿಖಾ ತಂಡ ತಿಳಿಸಿದೆ.

ಆರೋಪಿಯು ಚಿಕ್ಕ ಪ್ರಿಂಟಿಂಗ್ ಅಂಗಡಿಯನ್ನು ಹೊಂದಿದ್ದು, ಶಾಹೀನ್ ಬಾಗ್‌ನಲ್ಲಿ ಡ್ರಗ್ಸ್ ಮತ್ತು ಹಣವನ್ನು ಸಂಗ್ರಹಿಸಿಡಲು ಮತ್ತು ಬಚ್ಚಿಡಲು ಬಳಸುತ್ತಿದ್ದ. ಪ್ರಮುಖ ಆರೋಪಿಗಳು ಬೇರೆ ದೇಶಗಳಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಆರೋಪಿಗಳು ಭಾರತ-ಅಫ್ಘಾನ್ ಸಿಂಡಿಕೇಟ್‌ನ ಭಾಗವಾಗಿದ್ದು, ಅವರು ನೆಲ ಮತ್ತು ಜಲ ಗಡಿಗಳ ಮೂಲಕ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಾರೆ ಎಂದು ಸಿಂಗ್ ಹೇಳಿದ್ದಾರೆ. ಅವರು ಇತರ ಸರಕುಗಳೊಂದಿಗೆ ಹೆರಾಯಿನ್ ಅನ್ನು ಮರೆಮಾಡಿ, ಸಾಗಿಸುತ್ತಿದ್ದರು. ಮಸಾಲೆಗಳು, ಹಣ್ಣುಗಳು, ಜವಳಿ ಮತ್ತು ಇತರ ಸರಕುಗಳ ನಡುವೆ ಡ್ರಗ್ಸ್​ ಇಟ್ಟು ಸಾಗಿಸಲಾಗುತ್ತಿತ್ತು.

ಇದನ್ನೂ ಓದಿ: ಆರ್ಯನ್ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್​ ಸಾವು; ವಕೀಲರಿಂದ ಮಾಹಿತಿ

ಪಂಜಾಬ್​​ನ ಫಿರೋಜ್​​ಪುರ್​​ ಗಡಿಯಲ್ಲಿ ₹200 ಕೋಟಿ ಮೌಲ್ಯದ ಹೆರಾಯಿನ್ ವಶ ಪಡಿಸಿದ ಬಿಎಸ್​​ಎಫ್

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್