Crime News: ತಮಿಳುನಾಡಿನಲ್ಲಿ ಮತ್ತೊಬ್ಬಳು ವಿದ್ಯಾರ್ಥಿನಿ ಆತ್ಮಹತ್ಯೆ; 2 ವಾರದಲ್ಲಿ ಇದು 4ನೇ ಸಾವು!
Tamil Nadu News: ಪ್ರಥಮ ಪಿಯುಸಿ ಬಾಲಕಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ರೂಮಿನಲ್ಲಿ ಇನ್ನೂ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಆಕೆ ಆಗಾಗ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು.
ಚೆನ್ನೈ: ಕಳೆದೆರಡು ವಾರಗಳಿಂದ ತಮಿಳುನಾಡಿನಲ್ಲಿ (Tamil Nadu) ನಡೆಯುತ್ತಿರುವ ಶಾಲಾ ಬಾಲಕಿಯರ ಸರಣಿ ಸಾವಿಗೆ ಮತ್ತೊಂದು ಸೇರ್ಪಡೆಯಾಗಿದೆ. ತಮಿಳುನಾಡಿನ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನಿನ್ನೆ ಶಿವಕಾಶಿಯ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದು ಆತ್ಮಹತ್ಯೆ (Suicide) ಪ್ರಕರಣ ಎಂದು ಶಂಕಿಸಲಾಗಿದೆ. ಈ ತನಿಖೆ ಪೂರ್ಣಗೊಳ್ಳುವವರೆಗೂ ನಾವು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಥಮ ಪಿಯುಸಿ ಬಾಲಕಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ರೂಮಿನಲ್ಲಿ ಇನ್ನೂ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಆಕೆ ಆಗಾಗ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ 2 ವಾರಗಳಲ್ಲಿ ತಮಿಳುನಾಡು ರಾಜ್ಯದಲ್ಲಿ 12ನೇ ತರಗತಿಯ ಮೂವರು ಮತ್ತು ಈಗ 11ನೇ ತರಗತಿಯ ಬಾಲಕಿ ಸಾವನ್ನಪ್ಪಿದ್ದಾರೆ. ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಶಿವಕಾಶಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Students Suicide: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನೀರಿಗೆ ಹಾರಿ ಆತ್ಮಹತ್ಯೆ
ಒಂದರ ಹಿಂದೊಂದು ವಿದ್ಯಾರ್ಥಿಗಳ ಸಾವಿಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿದ್ಯಾರ್ಥಿಗಳು ಆತ್ಮಹತ್ಯೆಯ ಆಲೋಚನೆಗಳನ್ನು ದೂರವಿಡುವಂತೆ ಮನವಿ ಮಾಡಿದ್ದಾರೆ. ಹೆಣ್ಣು ಮಕ್ಕಳನ್ನು ಯಾವತ್ತೂ ಆತ್ಮಹತ್ಯೆ ಯೋಚನೆಗೆ ತಳ್ಳಬಾರದು. ವಿದ್ಯಾರ್ಥಿನಿಯರಿಗೆ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸೋಮವಾರ ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆದರೆ, ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿರಲಿಲ್ಲ. ಈ 4 ಸಾವುಗಳಲ್ಲಿ ಮೊದಲನೆಯದು ಜುಲೈ 13ರಂದು ಕಲ್ಲಕುರಿಚಿ ಜಿಲ್ಲೆಯಲ್ಲಿ ವರದಿಯಾಗಿದೆ. ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಸಾವಿಗೆ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಬೆಂಕಿ ಹಚ್ಚಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿನ ಸಾವುಗಳ ಬಗ್ಗೆ ಸಿಬಿ-ಸಿಐಡಿ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.