ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 8 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಿನಿವ್ಯಾನ್ ಟ್ರಕ್‌ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ. ನಿಜಾಮ್ ಸಾಗರ ವಲಯದ ಹಾಸನಪಲ್ಲಿ ಗೇಟ್‌ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಈ ಭೀಕರ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಿಸಲಾಗಿದೆ. ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಟ್ಟು ಆರು ಮಹಿಳೆಯರು ಈ ದುರಂತಕ್ಕೆ ಬಲಿಯಾಗಿದ್ದಾರೆ. (Source)
తెలంగాణలోని కామారెడ్డి జిల్లాలో జరిగిన ప్రమాదంలో ప్రాణాలు కోల్పోవడం చాలా బాధాకరం. మృతుల కుటుంబాలకు , క్షతగాత్రులకు నా ప్రగాఢ సానుభూతి తెలియజేస్తున్నాను . మరణించిన వారి కుటుంబ సభ్యులకు రూ. 2 లక్షలు, క్షతగాత్రులకు రూ. 50,000 పిఎమ్ఎన్ఆర్ఎఫ్ నుండి అందజేయబడుతుంది. : ప్రధాని మోదీ
— PMO India (@PMOIndia) May 9, 2022
ಮಿನಿವ್ಯಾನ್ ಚಾಲಕ ಯಲ್ಲರೆಡ್ಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟರೆ, ಇಬ್ಬರು ಗಾಯಾಳುಗಳು ಬಾನ್ಸವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಮತ್ತು ಗಾಯಾಳುಗಳು ಪಿಟ್ಲಂ ಮಂಡಲದ ಚಿಲ್ಲರಗಿ ಗ್ರಾಮದವರಾಗಿದ್ದಾರೆ. ಅವರು ಪಕ್ಕದ ಹಳ್ಳಿಯಲ್ಲಿ 10ನೇ ದಿನದ ಅಂತ್ಯಕ್ರಿಯೆಯ ವಿಧಿವಿಧಾನದಲ್ಲಿ ಭಾಗವಹಿಸಿ ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಮಿನಿವ್ಯಾನ್ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ