AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಟವಾಡುತ್ತಿದ್ದಾಗ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕರಣ್‌ಪುರದ ಸುತಾರಿ ಗ್ರಾಮದಲ್ಲಿ 5 ವರ್ಷದ ಬಾಲಕ ಕುದಿಯುತ್ತಿರುವ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

Crime News: ಆಟವಾಡುತ್ತಿದ್ದಾಗ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Nov 09, 2022 | 3:57 PM

Share

ನವದೆಹಲಿ: ಮನೆಯೊಳಗೆ ಆಟವಾಡುತ್ತಿದ್ದಾಗ 5 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕರಣ್‌ಪುರದ ಸುತಾರಿ ಗ್ರಾಮದಲ್ಲಿ 5 ವರ್ಷದ ಬಾಲಕ ಕುದಿಯುತ್ತಿರುವ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ರೈತ ಸುಶೀಲ್ ಸಿಂಗ್ ಅವರ 5 ವರ್ಷದ ಮಗ ಪ್ರಶಾಂತ್ ಕಾರ್ಯಕ್ರಮಕ್ಕೆ ಅಡುಗೆ ಮಾಡುತ್ತಿದ್ದ ಜಾಗದಲ್ಲಿ ಆಟವಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಆ ಬಾಲಕನ ಮುಂಡನ ಕಾರ್ಯಕ್ರಮದ ಪ್ರಯುಕ್ತ ಮನೆಯಲ್ಲಿ ದೊಡ್ಡ ಪಾತ್ರೆಗಳಲ್ಲಿ ಅಡುಗೆ ಮಾಡಲಾಗುತ್ತಿತ್ತು. ಈ ವೇಳೆ ಗೆಳೆಯರೊಂದಿಗೆ ಆಟವಾಡುತ್ತಿದ್ದ ಆತ ಆಕಸ್ಮಿಕವಾಗಿ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾನೆ. ಅಡುಗೆ ಮನೆಯಲ್ಲಿದ್ದ ಕಿಟಕಿಯ ಮೇಲೆ ಹತ್ತಿ ಕೆಳಗೆ ಹಾರುತ್ತಿದ್ದಾಗ ಆತ ಬ್ಯಾಲೆನ್ಸ್​ ತಪ್ಪಿ ಕುದಿಯುತ್ತಿದ್ದ ಪಾತ್ರೆಯೊಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಬೈಕ್​ಗೆ ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು; ಮಕ್ಕಳಿಗೆ ಗಾಯ

ಆ ಬಾಲಕನ ಮನೆಯವರೆಲ್ಲ ನೆಂಟರನ್ನು ಸ್ವಾಗತಿಸುವುದರಲ್ಲಿ ಬ್ಯುಸಿಯಾಗಿದ್ದಾಗ ಅಡುಗೆ ಮನೆಯಲ್ಲಿ ಈ ಘಟನೆ ನಡೆದಿದೆ. ವಿಷಯ ಗೊತ್ತಾದ ತಕ್ಷಣ ಆತನನ್ನು ಮೀರತ್‌ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ಅಡ್ಮಿಟ್ ಮಾಡುವಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಶುಭ ಸಮಾರಂಭ ನಡೆಯಬೇಕಾಗಿದ್ದ ಆ ಮನೆಯಲ್ಲಿ ಆ ಬಾಲಕನ ಅಂತ್ಯಕ್ರಿಯೆ ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ