ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್​ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ (Supreme Court)  ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್​ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್​ ಚುರುಕು ಮುಟ್ಟಿಸಿದೆ. […]

ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ
ಸುಪ್ರೀಂ ಕೋರ್ಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 10, 2021 | 7:26 PM

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್​ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ (Supreme Court)  ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್​ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್​ ಚುರುಕು ಮುಟ್ಟಿಸಿದೆ.

ಜನಪ್ರತಿನಿಧಿಗಳು ಅಥವಾ ಪ್ರಭಾವಿಗಳಿಗೆ ಸಂಬಂಧಿಸಿದ ವಿವಾದಿತ ಕೇಸ್​ಗಳನ್ನು ವಿಚಾರಣೆ ಮಾಡುವಾಗ ಆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಮೂಲಕ ಆ ಪ್ರಕರಣದ ತೀರ್ಪಿನ ಮೇಲೆ ಪ್ರಭಾವ ಬೀರುವ ಕೆಲಸ ಘಟನೆಗಳು ನಡೆದಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು ಈ ಆದೇಶ ನೀಡಿದೆ. ಹಾಗೇ, ಕ್ರಿಮಿನಲ್ ಕೇಸ್ ದಾಖಲಾಗಿರುವ ಜನಪ್ರತಿನಿಧಿಗಳ ರಾಜ್ಯದ ಹೈಕೋರ್ಟ್​ನ ಒಪ್ಪಿಗೆಯಿಲ್ಲದೆ ಅವರ ವಿರುದ್ಧದ ಕೇಸ್ ಅನ್ನು ಹಿಂಪಡೆಯುವುಂತಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಈ ಕುರಿತು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ವಿನೀತ್ ಸರನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಬಾಕಿ ಉಳಿದಿರುವ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್​ಗಳ ರಿಜಿಸ್ಟ್ರಾರ್​ಗಳಿಗೆ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಕೇರಳ ಸರ್ಕಾರ ವರ್ಸಸ್ ಕೆ. ಅಜಿತ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿನ ಬಳಿಕ 2020ರ ಸೆಪ್ಟೆಂಬರ್ 16ರಿಂದ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್​ಗಳು ಮನವಿ ಮಾಡಿದ್ದವು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಅಭ್ಯರ್ಥಿಯಾಗಿ ನೇಮಕವಾದ 48 ಗಂಟೆಯೊಳಗೆ ಜನಪ್ರತಿನಿಧಿಗಳ ಅಪರಾಧ ಜಾತಕ ಸಾರ್ವಜನಿಕಗೊಳಿಸಲೇಬೇಕು: ಸುಪ್ರೀಂ ಕೋರ್ಟ್​ 

ನಕಲಿ ಟ್ವಿಟರ್ ಖಾತೆ: ಪೊಲೀಸರಿಗೆ ದೂರು ಸಲ್ಲಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ

(Criminal cases against MPs MLAs can not be withdrawn without High Court approval Supreme Court orders)

Published On - 2:12 pm, Tue, 10 August 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ