ಆರ್‌ಎಸ್‌ಎಸ್ 21ನೇ ಶತಮಾನದ ಕೌರವರು ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ
ರಾಹುಲ್ ಗಾಂಧಿ ಆರ್‌ಎಸ್‌ಎಸ್ ಅನ್ನು 21 ನೇ ಶತಮಾನದ ಕೌರವರೊಂದಿಗೆ ಹೋಲಿಸಿದ್ದಾರೆ. ಅವರು(ಆರ್‌ಎಸ್‌ಎಸ್) ಈಗ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಶಾಖಾಗಳಲ್ಲಿದ್ದಾರೆ.ಭಾರತದ 2-3 ಬಿಲಿಯನೇರ್‌ಗಳು ಕೌರವರ ಜೊತೆ ನಿಂತಿದ್ದಾರೆ ಎಂದು ಹೇಳಿದ್ದರು.
ಜನವರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅನ್ನು 21 ನೇ ಶತಮಾನದ ಕೌರವರು ಎಂದು ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ(Rahul Gandhi) ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ. ಆರ್‌ಎಸ್‌ಎಸ್ ಸ್ವಯಂಸೇವಕ ಎಂದು ಹೇಳಿರುವ ಕಮಲ್ ಭಡೋರಿಯಾ ಅವರ ಪರವಾಗಿ ದೂರು ಸಲ್ಲಿಸಿರುವುದಾಗಿ ವಕೀಲ ಅರುಣ್ ಭಡೋರಿಯಾ ಹೇಳಿದ್ದಾರೆ. ನ್ಯಾಯಾಲಯವು ಏಪ್ರಿಲ್ 12 ರಂದು ದೂರನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ಹೇಳಿದರು. ನಾವು ಭಾರತೀಯ ದಂಡ ಸಂಹಿತೆಯ (IPC) 499 ಮತ್ತು 500 ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿದ್ದೇವೆ. ಎರಡು ನಿಬಂಧನೆಗಳು ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿವೆ ಮತ್ತು ಗರಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ. ಈ ದೂರು ಜನವರಿಯಲ್ಲಿ ಕುರುಕ್ಷೇತ್ರದಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗೆ ಸಂಬಂಧಿಸಿದೆ ಎಂದು ಅರುಣ್ ಹೇಳಿದ್ದಾರೆ.
ರಾಹುಲ್ ಗಾಂಧಿ ಆರ್‌ಎಸ್‌ಎಸ್ ಅನ್ನು 21 ನೇ ಶತಮಾನದ ಕೌರವರೊಂದಿಗೆ ಹೋಲಿಸಿದ್ದಾರೆ. ಅವರು(ಆರ್‌ಎಸ್‌ಎಸ್) ಈಗ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಶಾಖಾಗಳಲ್ಲಿದ್ದಾರೆ. ಭಾರತದ 2-3 ಬಿಲಿಯನೇರ್‌ಗಳು ಕೌರವರ ಜೊತೆ ನಿಂತಿದ್ದಾರೆ ಎಂದು ಹೇಳಿದ್ದರು.
ಜನವರಿ 11 ರಂದು ಕಮಲ್ ಭಡೋರಿಯಾ ಅವರು ನಾಯಕನಿಗೆ ಕಳುಹಿಸಿದ ಲೀಗಲ್ ನೋಟಿಸ್‌ಗೆ ಗಾಂಧಿ ಪ್ರತಿಕ್ರಿಯಿಸಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಾರ್ಚ್ 23 ರಂದು, ಸೂರತ್‌ನ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾಗಿ ಒಂದು ದಿನದ ನಂತರ ಅವರನ್ನು ಸಂಸತ್ತಿನಿಂದ ಅನರ್ಹ ಮಾಡಲಾಯಿತು.ರಾಹುಲ್ ಗಾಂಧಿ ಲೋಕಸಭೆಯಲ್ಲಿ ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:34 pm, Fri, 31 March 23