ಐಇಡಿ ಸ್ಫೋಟ, ಯೋಧರನ್ನು ರಕ್ಷಿಸುವ ವೇಳೆ ಸಿಆರ್​ಪಿಎಫ್​ ಶ್ವಾನಕ್ಕೆ ಗಂಭೀರ ಗಾಯ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಶ್ವಾನವೊಂದು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸೈನಿಕರ ಪ್ರಾಣ ಉಳಿಸಿದ ಸುದ್ದಿ ಇದೀಗ ಮುನ್ನೆಲೆಗೆ ಬರುತ್ತಿದೆ. . ಗುರುವಾರ ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಗಸ್ತು ತಿರುಗುತ್ತಿದ್ದಾಗ ಯೋಧರೊಂದಿಗೆ ಬಂದಿದ್ದ ಸಿಆರ್‌ಪಿಎಫ್ ಶ್ವಾನ ಐಇಡಿ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದೆ.

ಐಇಡಿ ಸ್ಫೋಟ, ಯೋಧರನ್ನು ರಕ್ಷಿಸುವ ವೇಳೆ ಸಿಆರ್​ಪಿಎಫ್​ ಶ್ವಾನಕ್ಕೆ ಗಂಭೀರ ಗಾಯ
ನಾಯಿImage Credit source: India TV
Follow us
ನಯನಾ ರಾಜೀವ್
|

Updated on: Jan 17, 2025 | 9:13 AM

ಭಾರತೀಯ ಸೇನೆಯಲ್ಲಿರುವ ಶ್ವಾನಕ್ಕೆ ಯೋಧರಷ್ಟೇ ಧೈರ್ಯ, ಕಾಳಜಿ ಎಲ್ಲವೂ ಇರುತ್ತದೆ. ಯೋಧರಂತೆಯೇ ಏನಾದರೂ ಅವಘಡ ಸಂಭವಿಸಿದಾಗ ಅವರನ್ನು ರಕ್ಷಿಸಲು ಧಾವಿಸುತ್ತವೆ, ಅದಕ್ಕಾಗಿ ವಿಶೇಷ ತರಬೇತಿಯನ್ನು ನೀಡಿರುತ್ತಾರೆ. ಹಾಗೆಯೇ ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿತ್ತು. ಸ್ಫೋಟದ ವೇಳೆ ಸೈನಿಕರ ಜೊತೆಗಿದ್ದ ಸಿಆರ್‌ಪಿಎಫ್ ಶ್ವಾನ ಗಂಭೀರವಾಗಿ ಗಾಯಗೊಂಡಿದೆ.

ಜಿಲ್ಲೆಯ ಚಿಣಗೇಲೂರು ಗ್ರಾಮದ ಬಳಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಮೂರು ವರ್ಷದ ‘ಬೆಲ್ಜಿಯನ್ ಶೆಫರ್ಡ್ ಟ್ರ್ಯಾಕರ್’ ‘ಆಂಡ್ರೋ’ ಬಲಗಾಲು ಮೂಳೆ ಮುರಿದಿದೆ.

ನಕ್ಸಲ್ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ 229 ನೇ ಬೆಟಾಲಿಯನ್‌ನ ‘ಆಲ್ಫಾ’ ಕಂಪನಿಯ ಸೈನಿಕರ ಜೀವವನ್ನು ನಾಯಿ ರಕ್ಷಿಸಿದೆ. ಸಮೀಪದ ಬಿಜಾಪುರ ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಮತ್ತಷ್ಟು ಓದಿ: ಮೈಸೂರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಸಾಕು ನಾಯಿ ಛಿದ್ರ ಛಿದ್ರ! ಸೂಕ್ತ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಮತ್ತು ಇತರ ಭದ್ರತಾ ಪಡೆಗಳು ವಿವಿಧ ರಾಜ್ಯಗಳ ಎಡಪಂಥೀಯ ಉಗ್ರಗಾಮಿ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆಗಳಲ್ಲಿ IEDಗಳನ್ನು ಪತ್ತೆಹಚ್ಚಲು ತರಬೇತಿ ಪಡೆದ ನಾಯಿಗಳನ್ನು ಬಳಸುತ್ತವೆ. ನಾರಾಯಣಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ.

ಫೆಬ್ರವರಿ 2023 ರಲ್ಲಿ, ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ನಾಯಿಯೊಂದು ತನ್ನ ಪ್ರಾಣವನ್ನು ತ್ಯಾಗ ಮಾಡಿ ಅನೇಕ ಸೈನಿಕರನ್ನು ಸಾವಿನಿಂದ ರಕ್ಷಿಸಿತ್ತು. ನಾರಾಯಣಪುರದಲ್ಲಿ ಬಾಂಬ್‌ಗೆ ಸಿಲುಕಿ ನಾಯಿಯೊಂದು ಪ್ರಾಣ ಕಳೆದುಕೊಂಡಿದ್ದರೆ ಐಟಿಬಿಪಿ ಯೋಧನಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.

ವಿಶೇಷವೆಂದರೆ ಹಳ್ಳಿಯಿಂದ ಆಗಾಗ ನಾಯಿ ಬರುತ್ತಿದ್ದು, ಸೈನಿಕರು ಅದಕ್ಕೆ ಸ್ವಲ್ಪ ಆಹಾರ ನೀಡುತ್ತಿದ್ದರು. ಘಟನೆಯ ದಿನ ಬಾಂಬ್ ನೋಡಿದಾಗ ಅದರ ಮೇಲೆ ಕುಳಿತು ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?