CRPF Dog Squad: ದೇಶಾದ್ಯಂತ 5 ಸಾವಿರ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಸಿಆರ್‌ಪಿಎಫ್‌ ಶ್ವಾನದಳ

ಮಾವೋ ನಕ್ಸಲರು ದೇಶಾದ್ಯಂತ ಸಂಗ್ರಹಿಸಿದ್ದ ಭಾರೀ ಪ್ರಮಾಣದ 5 ಸಾವಿರ ಸ್ಫೋಟಕ ವಸ್ತುಗಳನ್ನು ಸಿಆರ್‌ಪಿಎಫ್‌ನ ಶ್ವಾನದಳ ಪತ್ತೆಹಚ್ಚಿದೆ

CRPF Dog Squad: ದೇಶಾದ್ಯಂತ 5 ಸಾವಿರ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಸಿಆರ್‌ಪಿಎಫ್‌ ಶ್ವಾನದಳ
ಸಿಆರ್​ಪಿಎಫ್​ ಶ್ವಾನದಳ
Follow us
ವಿವೇಕ ಬಿರಾದಾರ
|

Updated on:Mar 26, 2023 | 6:32 PM

ಬಸ್ತಾರ್‌ (ಛತ್ತೀಸ್‌ಗಢ): ಮಾವೋ ನಕ್ಸಲರು (Mao Naxalites) ದೇಶಾದ್ಯಂತ ಸಂಗ್ರಹಿಸಿದ್ದ ಭಾರೀ ಪ್ರಮಾಣದ 5 ಸಾವಿರ ಸ್ಫೋಟಕ ವಸ್ತುಗಳನ್ನು (Explosive material) ಸಿಆರ್‌ಪಿಎಫ್‌ನ ಶ್ವಾನದಳ (CRPF Dog Squad) ಪತ್ತೆಹಚ್ಚಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಎಎನ್​ಐ (ANI) ವರದಿ ಮಾಡಿದೆ. ಈ ಶ್ವಾನಗಳಿಗೆ ಸಿಆರ್‌ಪಿಎಫ್‌ ಸಿಬ್ಬಂದಿ ತರಬೇತಿ ನೀಡಿದ್ದು, ದೇಶದಲ್ಲಿ ಎಲ್ಲೆ ಅವಘಡ ಸಂಭವಿಸಿದರೂ, ಸಿಆರ್​ಪಿಎಫ್​ ನಾಯಿಗಳು ಸ್ಥಳದಲ್ಲಿದ್ದು, ಕಾರ್ಯಾಚರಣೆಗೆ ಸಹಾಯ ಮಾಡುತ್ತವೆ.

ದೇಶದಲ್ಲಿ ನಕ್ಸಲ್ ಮತ್ತು ಭಯೋತ್ಪಾದಕ ಪೀಡಿತ ಪ್ರದೇಶಗಳಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಯಾವುದೇ ಭಯೋತ್ಪಾದಕ ದಾಳಿಯನ್ನು ತಪ್ಪಿಸುವಲ್ಲಿ ಶ್ವಾನಗಳು ಬಹಳ ಮಹತ್ವದ ಪಾತ್ರವನ್ನು ವಹಿಸುತ್ತವೆ.

ಬೆಂಗಳೂರಿನ ಡಾಗ್ ಬ್ರೀಡಿಂಗ್ ಮತ್ತು ಟ್ರೈನಿಂಗ್ ಸ್ಕೂಲ್ (DBTS) ಅಥವಾ ಸಿಆರ್‌ಪಿಎಫ್‌ನಲ್ಲಿ ತರಬೇತಿ ಪಡೆದಿರುವ ಶ್ವಾನಗಳು ನಕ್ಸಲ್ ಮತ್ತು ಭಯೋತ್ಪಾದಕ ದಾಳಿಗಳ ಸಂಚನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿವೆ. ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಶ್ವಾನದಳವನ್ನು ನಿಯೋಜಿಸಲಾಗಿತ್ತು. ಇದರಿಂದ ಸಿಆರ್‌ಪಿಎಫ್ ಸಿಬ್ಬಂದಿಗೆ ಸುಮಾರು 5,000 ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ಪತ್ತೆಯಾಗಿದೆ ಎಂದು ಸಿಆರ್‌ಪಿಎಫ್‌ನ ಡಿಬಿಟಿಎಸ್‌ನ ಡೆಪ್ಯುಟಿ ಕಮಾಂಡೆಂಟ್ ಮಹೇಂದ್ರ ಎಂ ಹೆಗಡೆ ಹೇಳಿದ್ದಾರೆ.

ಇದನ್ನೂ ಓದಿ: ಹುತಾತ್ಮನ ಮಗನನ್ನು ಮೀರ್ ಜಾಫರ್ ಎಂದು ಕರೆದರು, ಆಗ ಯಾಕೆ ಪ್ರಕರಣ ದಾಖಲಾಗಲಿಲ್ಲ: ಪ್ರಿಯಾಂಕಾ ವಾಗ್ದಾಳಿ

ಶೇ 80ರಷ್ಟು ಸ್ಫೋಟಕಗಳು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಪತ್ತೆಯಾಗಿವೆ. ಛತ್ತೀಸ್‌ಗಢದ ನಕ್ಸಲ್​ ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಸುಮಾರು 500 ಶ್ವಾನಗಳನ್ನು ನಿಯೋಜಿಸಲಾಗಿದೆ. ಇತರ ಪಡೆಗಳಿಗೆ ಹೋಲಿಸಿದರೆ ಸಿಆರ್‌ಪಿಎಫ್‌ನಲ್ಲಿ ಶ್ವಾನಕ್ಕೆ ಬಹಳ ಮಹತ್ವ ನೀಡಲಾಗುತ್ತದೆ. ಕಾರ್ಯಾಚರಣೆಯ ಚಟುವಟಿಕೆಗಳಲ್ಲಿ ಶ್ವಾನಗಳ ಪ್ರಾಮುಖ್ಯತೆಯನ್ನು ಅರಿತ ನಂತರ 2011 ರಲ್ಲಿ ಬೆಂಗಳೂರಿನಲ್ಲಿ ಬಿಡಿಟಿಎಸ್ ಅನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.

ಬಿಡಿಟಿಎಸ್​ನಲ್ಲಿ 1 ಸಾವಿರಕ್ಕೂ ಹೆಚ್ಚು ಶ್ವಾನಗಳಿಗೆ ತರಬೇತಿ ನೀಡಲಾಗಿದೆ. ಅವುಗಳನ್ನು ದೇಶಾದ್ಯಂತ ನಿಯೋಜಿಲಸಾಗಿದೆ. ತರಬೇತಿ ವೇಳೆ ಶ್ವಾನಗಳಿಗೆ ದೇಶ ದ್ರೋಹಿಗಳ ಸಂಚಿನ ಬಗ್ಗೆ, ಅವರ ಚಟುವಟಿಗಳ ಬಗ್ಗೆ ಮತ್ತು ಬಾಂಬ್​, ಸ್ಪೋಟಕ ವಸ್ತುಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಇಲ್ಲಿ ತರಬೇತಿ ಪಡೆದ ಹೆಚ್ಚಿನ ನಾಯಿಗಳನ್ನು ಜಮ್ಮು ಮತ್ತು ಕಾಶ್ಮೀರ, ಬಿಹಾರ, ಜಾರ್ಖಂಡ್, ಒಡಿಸ್ಸಾ ಮತ್ತು ಭಾರತದ ಹಲವಾರು ಭಾಗಗಳಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Sun, 26 March 23

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ