AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್, ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್, ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?
ಸಿಟಿ ರವಿ
ಹರೀಶ್ ಜಿ.ಆರ್​.
| Edited By: ವಿವೇಕ ಬಿರಾದಾರ|

Updated on:Jul 29, 2023 | 11:36 AM

Share

ನವದೆಹಲಿ: ಭಾರತೀಯ ಜನತಾ ಪಕ್ಷ (BJP) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ (CT Ravi) ಅವರಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್ (BL Santosh) ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದೆಯಾ ಹೈಕಮಾಂಡ್ ?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮುಖಾಂತರ ಹೀನಾಯವಾಗಿ ಸೋಲು ಕಂಡಿತು. ಇದರಿಂದ ಬಿಜೆಪಿ ನಾಯಕರಿಗೆ ಭಾರಿ ಮುಖಭಂಗವಾಯಿತು ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್​​​ ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡು, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದ ಬಿಎಲ್​ ಸಂತೋಷ್​ ಹೊರತು ಪಡಿಸಿ ಬೇರೆಯವರಿಗೆ ಸ್ಥಾನ ನೀಡಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್​​.ಡಿ.ದೇವೇಗೌಡ

ಸದ್ಯದಲ್ಲೆ ಬದಲಾಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ?

ಇನ್ನು ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಅವರ ಅಧಿಕಾರವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಬಿಜೆಪಿ ಕೇಂದ್ರ ನಾಯಕರು ಪ್ಲಾನ್​ ರೂಪಿಸಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಆದರೆ ಈ ಅಧ್ಯಕ್ಷ ಕುರ್ಚಿ ಮೇಲೆ  ರಾಜ್ಯ ಕೆಲ ಹಿರಿಯ ನಾಯಕರು ಈಗಾಗಲೆ ಟವಲ್​ ಹಾಕಿದ್ದಾರೆ. ಅವರನ್ನು ಬಿಟ್ಟು ಒಂದು ವೇಳೆ ಸಿ.ಟಿ ರವಿ ಅಧ್ಯಕ್ಷ ಸ್ಥಾನದಲ್ಲಿ ಕೂತರೇ ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯವಾಣಿ ನಿಜವಾಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Sat, 29 July 23

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More