ನವದೆಹಲಿ: ಭಾರತೀಯ ಜನತಾ ಪಕ್ಷ (BJP) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ (CT Ravi) ಅವರಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ (BL Santosh) ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
भाजपा राष्ट्रीय अध्यक्ष श्री @JPNadda ने निम्नलिखित केंद्रीय पदाधिकारियों के नामों की घोषणा की है- pic.twitter.com/0aaArxHF30
— BJP (@BJP4India) July 29, 2023
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮುಖಾಂತರ ಹೀನಾಯವಾಗಿ ಸೋಲು ಕಂಡಿತು. ಇದರಿಂದ ಬಿಜೆಪಿ ನಾಯಕರಿಗೆ ಭಾರಿ ಮುಖಭಂಗವಾಯಿತು ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡು, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದ ಬಿಎಲ್ ಸಂತೋಷ್ ಹೊರತು ಪಡಿಸಿ ಬೇರೆಯವರಿಗೆ ಸ್ಥಾನ ನೀಡಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.
ಇದನ್ನೂ ಓದಿ: ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್.ಡಿ.ದೇವೇಗೌಡ
ಇನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಬಿಜೆಪಿ ಕೇಂದ್ರ ನಾಯಕರು ಪ್ಲಾನ್ ರೂಪಿಸಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಆದರೆ ಈ ಅಧ್ಯಕ್ಷ ಕುರ್ಚಿ ಮೇಲೆ ರಾಜ್ಯ ಕೆಲ ಹಿರಿಯ ನಾಯಕರು ಈಗಾಗಲೆ ಟವಲ್ ಹಾಕಿದ್ದಾರೆ. ಅವರನ್ನು ಬಿಟ್ಟು ಒಂದು ವೇಳೆ ಸಿ.ಟಿ ರವಿ ಅಧ್ಯಕ್ಷ ಸ್ಥಾನದಲ್ಲಿ ಕೂತರೇ ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯವಾಣಿ ನಿಜವಾಗಲಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:56 am, Sat, 29 July 23