ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ಕಡಲೂರಿನಲ್ಲಿ ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಟೈರ್ ಸ್ಫೋಟಗೊಂಡು ಬಸ್ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಆದೇಶಿಸಲಾಗಿದೆ.

ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು
ಅಪಘಾತ

Updated on: Dec 25, 2025 | 9:24 AM

ತಮಿಳುನಾಡು, ಡಿ.25: ಚಿತ್ರದುರ್ಗದಲ್ಲಿ ನಡೆದ ಅಪಘಾತದ ನಂತರ ಇದೀಗ ಮತ್ತೊಂದು ಘಟನೆ ತಮಿಳುನಾಡಿನಲ್ಲಿ (Tamil Nadu Bus Crash) ನಡೆದಿದೆ. ಜಿಲ್ಲೆಯ ಕಡಲೂರಿನಲ್ಲಿ ನೆನ್ನೆ ರಾತ್ರಿ (ಡಿ.25) ಸರ್ಕಾರಿ ಬಸ್ಸೊಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ. ಸರ್ಕಾರಿ ಬಸ್ಸೊಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಸರ್ಕಾರಿ ಬಸ್ಸಿನ ಟೈರ್ ಸ್ಫೋಟಗೊಂಡ ಈ ಎರಡು ಕಾರಿಗೆ ಡಿಕ್ಕಿ ಹೊಡೆದಿದೆ. ಈ ಕಾರುಗಳು ಚೆನ್ನೈನಿಂದ ತಿರುಚಿರಾಪಳ್ಳಿ ಕಡೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಈ ಅಪಘಾತದಲ್ಲಿ ಹಲವು ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಇನ್ನು ಈ ಬಸ್ಸು ತಿರುಚಿರಾಪಳ್ಳಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿತ್ತು. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಈ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ತಲಾ 3 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ನೀಡಲಾಗುವುದು ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಉತ್ತಮ ಆರೈಕೆ ಒದಗಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 am, Thu, 25 December 25