ಇದು ತಮಾಷೆಯಲ್ಲ, ಸ್ವಲ್ಪವಾದರೂ ಸಂವೇದನೆ ಇರಲಿ: ರಾಹುಲ್​ ಗಾಂಧಿ ಟ್ವೀಟ್​​

ದೇಶದಲ್ಲಿ ಕೇವಲ ಪೆಟ್ರೋಲ್​-ಡೀಸೆಲ್​, ಎಲ್​ಪಿಜಿ ಬೆಲೆಯಷ್ಟೇ ಅಲ್ಲದೆ, ಬಹುತೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅಡುಗೆ ಎಣ್ಣೆ, ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.

ಇದು ತಮಾಷೆಯಲ್ಲ, ಸ್ವಲ್ಪವಾದರೂ ಸಂವೇದನೆ ಇರಲಿ: ರಾಹುಲ್​ ಗಾಂಧಿ ಟ್ವೀಟ್​​
ರಾಹುಲ್​ ಗಾಂಧಿ
Follow us
TV9 Web
| Updated By: Lakshmi Hegde

Updated on: Nov 03, 2021 | 12:55 PM

ದೆಹಲಿ: ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟ್ವೀಟ್​ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಎದುರಾಗಿರುವ ಸನ್ನಿವೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಯಾಕೆಂದರೆ ಇದು ತಮಾಷೆಯಲ್ಲ ಎಂದು ಹೇಳಿದ್ದಾರೆ. ದೇಶಾದ್ಯಂತ ದೀಪಾವಳಿ ಸಂಭ್ರಮದಲ್ಲಿರುವ ಜನರಿಗೆ ಬೆಲೆ ಏರಿಕೆ ಶಾಕ್​ ಆಗುತ್ತಲೇ ಇದೆ. ಇತ್ತೀಚೆಗೆ 19 ಕೆಜಿ ತೂಕದ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 266ರೂ.ಏರಿಕೆಯಾಗಿದ್ದು, ದೆಹಲಿಯಲ್ಲಿ 2000 ರೂ.ಗಡಿ ದಾಟಿದೆ. ಅದರ ಬೆನ್ನಲ್ಲೇ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.

ಇಂದು ಬೆಳಗ್ಗೆ ಹಿಂದಿಯಲ್ಲಿ ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, ಈಗ ದೀಪಾವಳಿ ಹಬ್ಬ ಬಂದಿದೆ. ಬೆಲೆ ಏರಿಕೆ ಉತ್ತುಂಗದಲ್ಲಿದೆ. ಇದು ತಮಾಷೆಯ ವಿಚಾರವಲ್ಲ. ಸಾಮಾನ್ಯ ಜನರ ಪರಿಸ್ಥಿತಿ ಬಗ್ಗೆ ನರೇಂದ್ರ ಮೋದಿ ಸರ್ಕಾರ ಸ್ವಲ್ಪವಾದರೂ ಸಂವೇದನೆ ತೋರಬೇಕು ಎಂಬುದು ನನ್ನ ಆಶಯ ಎಂದು ಹೇಳಿದ್ದಾರೆ.

ಇನ್ನು ದೇಶದಲ್ಲಿ ಕೇವಲ ಪೆಟ್ರೋಲ್​-ಡೀಸೆಲ್​, ಎಲ್​ಪಿಜಿ ಬೆಲೆಯಷ್ಟೇ ಅಲ್ಲದೆ, ಬಹುತೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅಡುಗೆ ಎಣ್ಣೆ, ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಅದರಲ್ಲೂ ಇಂಧನ ದರವಂತೂ ಐತಿಹಾಸಿಕ ಹೆಚ್ಚಳಕಂಡಿದ್ದು, ಸಾಮಾನ್ಯ ಜನರಿಗೆ ಬಹುದೊಡ್ಡ ಹೊರೆಯಾಗಿದೆ. ಈ ಬಗ್ಗೆ ರಾಹುಲ್​ ಗಾಂಧಿಯಷ್ಟೆ ಅಲ್ಲದೆ, ಕಾಂಗ್ರೆಸ್​ನ ಇತರ ನಾಯಕರೂ ಅಸಮಾಧಾನ ಹೊರಹಾಕಿದ್ದಾರೆ.

ಅಗತ್ಯವಸ್ತುಗಳ ಬೆಲೆ ಏರಿಕೆ ಬಗ್ಗೆ ಟ್ವೀಟ್​ ಮಾಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​, ನಾವು ಇದೀಗ ಸ್ವಾತಂತ್ರ್ಯ ಬಂದ ಸಂಭ್ರಮದ 75ನೇ ವರ್ಷದ ಆಚರಣೆ ಮಾಡುತ್ತಿದ್ದೇವೆ. ಅಂದರೆ ಆಜಾದಿ ಕಾ ಅಮೃತ್​ ಮಹೋತ್ಸವ್​ನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ದಾಖಲೆಯ ಏರಿಕೆ ಕಂಡ ಪೆಟ್ರೋಲ್​-ಡೀಸೆಲ್​ ಬೆಲೆಗಳು ಸದಾ ಇತಿಹಾಸದಲ್ಲಿ ನೆನಪಾಗಿ ಉಳಿಯುತ್ತವೆ ಎಂದು ಹೇಳಿದ್ದಾರೆ.  ಈ ಹಣದುಬ್ಬರವೆಂಬುದು ಪ್ರಧಾನಿ ಮೋದಿ ಸರ್ಕಾರ ಸಾಮಾನ್ಯ ಜನರಿಗೆ ನೀಡುತ್ತಿರುವ ದೀಪಾವಳಿ ಉಡುಗೊರೆ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Puneeth Rajkumar: ಮಾನವೀಯ ಮೌಲ್ಯಗಳನ್ನು ಪುನೀತ್​ರಿಂದ ಕಲಿಯಬೇಕು; ಅಪ್ಪು ಸ್ಮರಿಸಿ ಕಂಬನಿ ಮಿಡಿದ ರಾಮ್ ಚರಣ್

Bank Holidays: ದೇಶದಾದ್ಯಂತ ಹಬ್ಬದ ಪ್ರಯುಕ್ತ ಈ ವಾರದಲ್ಲಿ 5 ದಿನ ಬ್ಯಾಂಕ್ ರಜಾ

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು