AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಕಾಂಗ್ರೆಸ್ ತಿರಸ್ಕರಿಸುತ್ತದೆ: ಪಿ.ಚಿದಂಬರಂ

CWC meet: ರಾಜಕೀಯ ಪರಿಸ್ಥಿತಿಯಲ್ಲಿ, ದೇಶದ ಸಾಂವಿಧಾನಿಕ ಮತ್ತು ಒಕ್ಕೂಟ ರಚನೆಗೆ ಸವಾಲು ಇದೆ ಎಂದು ನಾವು ನಂಬುತ್ತೇವೆ. ಫೆಡರಲಿಸಂ ಅನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಲಾಗುತ್ತಿದೆ, ರಾಜ್ಯ ಸರ್ಕಾರಗಳಿಗೆ ಅಡ್ಡಿಪಡಿಸಲಾಗಿದೆ. ರಾಜ್ಯ ಸರ್ಕಾರಗಳಿಗೆ ಆದಾಯವನ್ನು ನಿರಾಕರಿಸಲಾಗಿದೆ, ಕಡಿಮೆ ಮಾಡಲಾಗಿದೆ ಅಥವಾ ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವ ರೀತಿಗೆ ಅಡೆತಡೆಗಳನ್ನು ಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಕಾಂಗ್ರೆಸ್ ತಿರಸ್ಕರಿಸುತ್ತದೆ: ಪಿ.ಚಿದಂಬರಂ
ಪಿ ಚಿದಂಬರಂ
ರಶ್ಮಿ ಕಲ್ಲಕಟ್ಟ
|

Updated on: Sep 16, 2023 | 8:10 PM

Share

ಹೈದರಾಬಾದ್  ಸೆಪ್ಟೆಂಬರ್ 16: ಕಾಂಗ್ರೆಸ್‌ (Congress) ಪಕ್ಷವು ಪೂರ್ವದಿಂದ ಪಶ್ಚಿಮಕ್ಕೆ ಭಾರತ್ ಜೋಡೋ ಯಾತ್ರೆಯನ್ನು(Bharat Jodo Yatra-2) ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರು ಮನವಿ ಮಾಡಿದ್ದಾರೆ. ಇದು ಪರಿಶೀಲನೆಯಲ್ಲಿದೆ ಎಂದು ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ (P Chidambaram)ಹೇಳಿದ್ದಾರೆ. ನಾವು ಪೂರ್ವದಿಂದ ಪಶ್ಚಿಮಕ್ಕೆ ಭಾರತ್ ಜೋಡೋ ಯಾತ್ರೆ 2 ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ. ಆ ವಿಷಯವು ಪರಿಗಣನೆಯಲ್ಲಿದ ಎಂದು ಹೈದರಾಬಾದ್‌ನಲ್ಲಿ ಪುನರ್ರಚಿಸಲಾದ ಸಿಡಬ್ಲ್ಯುಸಿಯ ಮೊದಲ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಚಿದಂಬರಂ ಹೇಳಿದ್ದಾರೆ.

ಸಿಡಬ್ಲ್ಯಸಿ ಕರಡು ನಿರ್ಣಯದ ಬಗ್ಗೆ ಚರ್ಚಿಸುತ್ತಿದೆ. ಚರ್ಚೆಗಳು ಇನ್ನೂ ನಡೆಯುತ್ತಿವೆ. ನಾವು ದೇಶದ ಪರಿಸ್ಥಿತಿಯನ್ನು ಚರ್ಚಿಸುತ್ತಿದ್ದೇವೆ. ಸ್ಥೂಲವಾಗಿ, ಇದನ್ನು ರಾಜಕೀಯ ಪರಿಸ್ಥಿತಿ, ದೇಶ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ದೇಶಕ್ಕೆ ದೊಡ್ಡ ಸವಾಲು ಆಗಿರುವ ಆಂತರಿಕ ಮತ್ತು ಬಾಹ್ಯ ಭದ್ರತಾ ಬೆದರಿಕೆಗಳು ಎಂದು ವಿಂಗಡಿಸಬಹುದು.

ರಾಜಕೀಯ ಪರಿಸ್ಥಿತಿಯಲ್ಲಿ, ದೇಶದ ಸಾಂವಿಧಾನಿಕ ಮತ್ತು ಒಕ್ಕೂಟ ರಚನೆಗೆ ಸವಾಲು ಇದೆ ಎಂದು ನಾವು ನಂಬುತ್ತೇವೆ. ಫೆಡರಲಿಸಂ ಅನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಲಾಗುತ್ತಿದೆ, ರಾಜ್ಯ ಸರ್ಕಾರಗಳಿಗೆ ಅಡ್ಡಿಪಡಿಸಲಾಗಿದೆ. ರಾಜ್ಯ ಸರ್ಕಾರಗಳಿಗೆ ಆದಾಯವನ್ನು ನಿರಾಕರಿಸಲಾಗಿದೆ, ಕಡಿಮೆ ಮಾಡಲಾಗಿದೆ ಅಥವಾ ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವ ರೀತಿಗೆ ಅಡೆತಡೆಗಳನ್ನು ಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆ ಕುರಿತು ಮಾತನಾಡಿದ ಚಿದಂಬರಂ, ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ನಾವು ಅದನ್ನು ತಿರಸ್ಕರಿಸುತ್ತೇವೆ. ಇದು ಒಕ್ಕೂಟದ ಮೇಲಿನ ದಾಳಿ. ಇದಕ್ಕೆ ಕನಿಷ್ಠ ಐದು ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿದೆ. ಈ ಸಂವಿಧಾನ ತಿದ್ದುಪಡಿಗಳನ್ನು ಅಂಗೀಕರಿಸಲು ಬಿಜೆಪಿಗೆ ಸಂಖ್ಯಾಬಲವಿಲ್ಲ ಎಂದು ತಿಳಿದಿದೆ. ಆದರೂ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಮರೀಚಿಕೆಯನ್ನು ಮುಂದಿಟ್ಟಿದ್ದು, ಈಗಿನ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ಸುಳ್ಳು ನಿರೂಪಣೆಯನ್ನು ಸೃಷ್ಟಿಸಲು ಮಾತ್ರ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2024ರ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಎನ್‌ಡಿಎಗೆ ಗೆಲುವು: ಅಮಿತ್ ಶಾ

ಸಿಡಬ್ಲ್ಯುಸಿ ಸಭೆಯಲ್ಲಿ ಸನಾತನ ಧರ್ಮದ ವಿವಾದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಚಿದಂಬರಂ ಹೇಳಿದ್ದಾರೆ. ಸನಾತನ ಧರ್ಮದ ಬಗ್ಗೆ ಯಾವುದೇ ವಿವಾದಕ್ಕೆ ಸಿಲುಕಲು ಕಾಂಗ್ರೆಸ್ ಸಿದ್ಧವಿಲ್ಲ. ನಾವು ಎಲ್ಲಾ ಧರ್ಮಗಳಿಗೂ ಸಮಾನ ಗೌರವವನ್ನು ಕಾಯ್ದುಕೊಂಡಿದ್ದೇವೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು