CWRC ಸಭೆ: ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡು ಪಟ್ಟು; ಸಾಧ್ಯವೇ ಇಲ್ಲ ಎಂದ ಕರ್ನಾಟಕ

Cauvery Water Regulation Committee meeting: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡು ನೀರಿಗಾಗಿ ಪಟ್ಟು ಹಿಡಿದರೆ, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಕ್ ಆಗಿ ಉತ್ತರಿಸಿದೆ. ತಮಿಳುನಾಡಲ್ಲಿ ಮಳೆ ಬೀಳಲಿದೆ, ಆದ್ರೂ ಕೃಷಿಗೆ ನೀರು ಕೇಳ್ತಿದ್ದಾರೆ. ನಮಗೆ ಇಲ್ಲಿ ಕುಡಿಯಲೂ ನೀರಿಲ್ಲ ಎಂದು ಕರ್ನಾಟಕ ತಿಳಿಸಿದೆ.

CWRC ಸಭೆ: ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡು ಪಟ್ಟು; ಸಾಧ್ಯವೇ ಇಲ್ಲ ಎಂದ ಕರ್ನಾಟಕ
ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ
Image Credit source: cwma cwc X account
Edited By:

Updated on: Jul 15, 2026 | 3:17 PM

ಮುಖ್ಯಾಂಶಗಳು

  • ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ
  • ಸಭೆಯಲ್ಲಿ ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡಿಂದ ವಾದ
  • KRSನಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದ ಕರ್ನಾಟಕ

ದೆಹಲಿ, ಜುಲೈ 15: ನೈರುತ್ಯ ಮುಂಗಾರು ಮಳೆಯ ಕೊರತೆಯಿಂದಾಗಿ ಕರ್ನಾಟಕ  ನೀರಿಲ್ಲದೆ ಅಕ್ಷರಶಃ ತತ್ತರಿಸತೊಡಗಿದೆ. ಬರ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಡಿಕೆಶಿ ಪತ್ರ ಕೂಡ ಬರೆದಿದ್ದಾರೆ. ಈ ನಡುವೆ ಇಂದು (ಜುಲೈ 15) ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಮಹತ್ವದ ಸಭೆ ನಡೆದಿದ್ದು, ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿಯನ್ನು ಅಧಿಕಾರಿಗಳು ವಿವರಿಸಿದ್ದಾರೆ. ಹೀಗಿದ್ದರೂ ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡು ವಾದಿಸಿದೆ. ಆದರೆ ಇದಕ್ಕೆ ಕೌಂಟರ್​​ ನೀಡಿರುವ ಕರ್ನಾಟಕ ಅದು ಸಾಧ್ಯವೇ ಇಲ್ಲ ಎಂದು ತಿಳಿಸಿದೆ.

ಕರ್ನಾಟಕದ ವಾದವೇನು?

ಕೆಆರ್​ಎಸ್​ನಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದು CWRC ಸಭೆಯಲ್ಲಿ ಕರ್ನಾಟಕ ವಾದಿಸಿದೆ. ಕಾವೇರಿ ಕೊಳ್ಳದಲ್ಲಿ ಮಳೆ ಅಭಾವ ಆಗಿದೆ. ಜೂನ್ ತಿಂಗಳಲ್ಲಿ ಜಲಾಶಯಗಳಿಗೆ ಶೂನ್ಯ ಒಳಹರಿವಿದ್ದು, ಜುಲೈ ತಿಂಗಳಲ್ಲಿ ಹಲವೆಡೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ಬರಿದಾದ ಡ್ಯಾಂಗಳಿಗೆ ಸ್ವಲ್ಪ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಈ ನಡುವೆ ಮಾನ್ಸೂನ್ ಮತ್ತೆ ಚುರುಕು ಪಡೆಯುವ ಯಾವ ಮುನ್ಸೂಚನೆ ಇಲ್ಲ. ಹೀಗಾಗಿ ಸದ್ಯ ಸಂಗ್ರಹವಿರುವ ನೀರನ್ನು ಮುಂದಿನ ಮಾನ್ಸೂನ್​ವರೆಗೂ ಕುಡಿಯಲು ಬಳಸಿಕೊಳ್ಳಬೇಕು. ಕರ್ನಾಟಕದಲ್ಲಿ ರೈತರು ಕೃಷಿಗೆ ನೀರು ಕೇಳುತ್ತಿದ್ದಾರೆ, ಆದರೆ ನಾವು ಬಿಡುತ್ತಿಲ್ಲ. ರಾಜ್ಯದಲ್ಲಿ ಸಂಪೂರ್ಣ ಬರ ಆವರಿಸಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ. ತಮಿಳುನಾಡಲ್ಲಿ ಮಳೆ ಬೀಳಲಿದೆ, ಆದ್ರೂ ಕೃಷಿಗೆ ನೀರು ಕೇಳ್ತಿದ್ದಾರೆ. ನಮಗೆ ಇಲ್ಲಿ ಕುಡಿಯಲೂ ನೀರಿಲ್ಲ ಎಂದು ಕರ್ನಾಟಕ ತಿಳಿಸಿದೆ.

ಇದನ್ನೂ ಓದಿ: ಕಾವೇರಿ ಜಲ ವಿವಾದ; ತಮಿಳುನಾಡು ವಿಧಾನಸಭೆ ವಿಪಕ್ಷ ನಾಯಕ ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

ನೀರು ಬಿಡುವಂತೆ ಸ್ಪಷ್ಟ ಸೂಚನೆ ನೀಡದ CWRC

Cauvery Water Row: CWRC Instructs Karnataka To Release Cauvery Water To Tamil Nadu

ತಮ್ಮ ಪಾಲಿನ ನೀರಿಗಾಗಿ ತಮಿಳುನಾಡು ವಾದ ಮಂಡಿಸಿದ್ದರೂ ನೀರು ಬಿಡುವಂತೆ ಕರ್ನಾಟಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಿಲ್ಲ ಎನ್ನಲಾಗಿದೆ. CWRC ಸಭೆ ಮುಕ್ತಾಯದ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳ ಜೊತೆ ಸಭೆ ನಡಿಸಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿಯ ಮೀಟಿಂಗ್​​ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:04 pm, Wed, 15 July 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us