Cyclone: ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿದೆ ಚಂಡಮಾರುತ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ

ಬಂಗಾಳಕೊಲ್ಲಿಗೆ ಮೇ23 ರಿಂದ 27ರ ನಡುವೆ ಚಂಡಮಾರುತ ಅಪ್ಪಳಿಸಲಿದ್ದು ಇದರ ಪರಿಣಾಮ ಹಲವು ರಾಜ್ಯಗಳ ಮೇಲಾಗಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

Cyclone: ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿದೆ ಚಂಡಮಾರುತ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ
ಚಂಡಮಾರುತ( ಸಾಂದರ್ಭಿಕ ಚಿತ್ರ)Image Credit source: Hindustan Times
Follow us
|

Updated on:May 17, 2024 | 3:08 PM

ಚಂಡಮಾರುತ(Cyclone)ವು ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿದ್ದು ಕರ್ನಾಟಕ(Karnataka) ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿರುವ ಚಂಡಮಾರುತ ಒಡಿಶಾ, ಮಹಾರಾಷ್ಟ್ರ ಹಾಗೂ ಗುಜರಾತ್​ನಲ್ಲಿ ಮೇ 23ರಿಂದ ಮೇ 28ರ ನಡುವೆ ಭಾರಿ ಮಳೆಯುಂಟು ಮಾಡಲಿದೆ.

ಮೇ 28ರಂದು ಗುಜರಾತ್ ಹಾಗೂ ಮುಂಬೈನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಚಂಡಮಾರುತ ರೂಪುಗೊಳ್ಳುತ್ತಿದ್ದು ಪಶ್ಚಿಮಕ್ಕೆ ಚಲಿಸುವ ಮೊದಲು ಪೂರ್ವ ಕರಾವಳಿಯಲ್ಲಿ ಭೂಕುಸಿತವನ್ನುಂಟು ಮಾಡಬಹುದು. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 7 ದಿನ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯಿಂದ ಕೂಡಿದ ಮಳೆಯಾಗಲಿದೆ. ತಮಿಳುನಾಡು, ಕರ್ನಾಟಕ, ಪುದುಚೇರಿ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮತ್ತು ಲಕ್ಷದ್ವೀಪಗಳಲ್ಲಿ ಮೇ 23 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಜೋರು, ಆರೆಂಜ್​ ಅಲರ್ಟ್​

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಸಣ್ಣ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕೇರಳ ಮತ್ತು ಕರ್ನಾಟಕದಲ್ಲಿ ಮೇ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 20 ರಂದು ತಮಿಳುನಾಡು ಮತ್ತು ಕೇರಳಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಇಂದಿನಿಂದ ಕೇರಳದಲ್ಲೂ ಭಾರಿ ಮಳೆ ಸಾಧ್ಯತೆ ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಮಲಪ್ಪುರಂ ಮತ್ತು ವಯನಾಡಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಎಂಟು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಇಡುಕ್ಕಿ, ಪಾಲಕ್ಕಾಡ್, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:07 pm, Fri, 17 May 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ