ಇಂದು ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ(Cyclone) ಅಪ್ಪಳಿಸುವ ಸಾಧ್ಯತೆ ಇದೆ. ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ.
ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್‌ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತಷ್ಟು ಓದಿ: Cyclone: ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿದೆ ಚಂಡಮಾರುತ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ
ಕರ್ನಾಟಕ, ಪುದುಚೇರಿ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ತೆಲಂಗಾಣದಲ್ಲಿ ಮೇ 23 ರವರೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವಿಶೇಷವಾಗಿ ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳಲ್ಲಿರುವವರು ಜಾಗರೂಕತೆ ವಹಿಸುವಂತೆ ರಾಜ್ಯ ಸರ್ಕಾರವು ನಿವಾಸಿಗಳನ್ನು ಒತ್ತಾಯಿಸಿದೆ. ನೈಋತ್ಯ ಮುಂಗಾರು ಮೇ 31ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:28 am, Thu, 23 May 24