AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ನಬ್ ಚಂಡಮಾರುತದ ಭೀತಿ; ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಬಿರುಗಾಳಿಯ ಅಲರ್ಟ್

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಆಂಧ್ರಪ್ರದೇಶ ಹಾಗೂ ದಕ್ಷಿಣ ಒಡಿಶಾ ಕರಾವಳಿಯನ್ನು ದಾಟುವ ಮೊದಲು ತೀವ್ರ ವಾಯುಭಾರ ಕುಸಿತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹವಾಮಾನ ವ್ಯವಸ್ಥೆಯು ಸೆಪ್ಟೆಂಬರ್ 23ರ ರಾತ್ರಿಯ ವೇಳೆಗೆ ವಿಶಾಖಪಟ್ಟಣಂ ಮತ್ತು ಗೋಪಾಲಪುರ ನಡುವೆ ಕರಾವಳಿ ದಾಟುವ ನಿರೀಕ್ಷೆಯಿದೆ. ಈಗಾಗಲೇ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆ ಆರಂಭವಾಗಿದ್ದು, ಒಡಿಶಾದ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಹಾಗೂ ತುರ್ತು ನಿರ್ವಹಣಾ ಪಡೆಗಳ ನಿಯೋಜನೆ ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅರ್ನಬ್ ಚಂಡಮಾರುತದ ಭೀತಿ; ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಬಿರುಗಾಳಿಯ ಅಲರ್ಟ್
Arnab CycloneImage Credit source: TV9
ಸುಷ್ಮಾ ಚಕ್ರೆ
|

Updated on: Sep 22, 2026 | 7:23 PM

Share

ಹೈದರಾಬಾದ್, ಸೆಪ್ಟೆಂಬರ್ 22: ಭಾರತದಲ್ಲಿ ಅರ್ನಬ್ ಚಂಡಮಾರುತದ ಭೀತಿ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಾಯುವ್ಯ ದಿಕ್ಕಿನತ್ತ ರಭಸದಿಂದ ಚಲಿಸುತ್ತಿದ್ದು, ಕರಾವಳಿ ತಲುಪುವ ಮೊದಲು ತೀವ್ರ ವಾಯುಭಾರ ಕುಸಿತವಾಗಿ ಬದಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಅಧಿಕೃತ ವರದಿಯ ಪ್ರಕಾರ, ಮುಂದಿನ 12 ಗಂಟೆಗಳಲ್ಲಿ ಇದು ಮತ್ತಷ್ಟು ಪ್ರಬಲಗೊಂಡು, ಬುಧವಾರ ರಾತ್ರಿ ಅಥವಾ ಗುರುವಾರ ಮುಂಜಾನೆಯ ವೇಳೆಗೆ ವಿಶಾಖಪಟ್ಟಣಂ ಮತ್ತು ಗೋಪಾಲಪುರ ನಡುವೆ ಕರಾವಳಿಯನ್ನು ದಾಟಲಿದೆ.

ಉತ್ತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸೃಷ್ಟಿಯಾಗುವ ಮುಂದಿನ ಚಂಡಮಾರುತಕ್ಕೆ ‘ಅರ್ನಬ್’ಎಂದು ಹೆಸರಿಡಲಾಗುತ್ತದೆ. ‘ಅರ್ನಬ್’ ಎಂದರೆ ಬಂಗಾಳಿ ಭಾಷೆಯಲ್ಲಿ “ಸಮುದ್ರ” ಎಂದರ್ಥ. ವಿಶ್ವ ಹವಾಮಾನ ಸಂಸ್ಥೆ ಮತ್ತು ಭಾರತೀಯ ಹವಾಮಾನ ಇಲಾಖೆ ಹೊಂದಿರುವ ಚಂಡಮಾರುತಗಳ ಹೆಸರುಗಳ ಪಟ್ಟಿಗೆ ಈ ಹೆಸರನ್ನು ಬಾಂಗ್ಲಾದೇಶ ನೀಡಿದೆ.

ಇದನ್ನೂ ಓದಿ: ಮುಂದಿನ ಮೂರು ದಿನ ಕರ್ನಾಟಕದ ಹಲವೆಡೆ ಭಾರಿ ಮಳೆ: ಕರಾವಳಿಯಲ್ಲಿ ವರುಣಾರ್ಭಟದ ಎಚ್ಚರಿಕೆ

ಆಂಧ್ರಪ್ರದೇಶದ ಜಿಲ್ಲೆಗಳಿಗೆ ರೆಡ್ ಅಲರ್ಟ್:

ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯೊಂದಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ನೀಡಿರುವ ಎಚ್ಚರಿಕೆಯ ಪ್ರಕಾರ, ತೀವ್ರ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಸಂಚಾರ ದಟ್ಟಣೆ, ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳಿಬೀಳುವುದು, ವಿದ್ಯುತ್ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಅಣೆಕಟ್ಟುಗಳು ಹಾಗೂ ಜಲಾಶಯಗಳ ಮಟ್ಟ ಹೆಚ್ಚಿ ನೀರು ಹರಿಯುವ ಭೀತಿಯೂ ಇದೆ.

ಇದನ್ನೂ ಓದಿ: ಬೀಸಿಲಿನ ಬೇಗೆಯ ನಡುವೆ ರಾಜ್ಯದ ಹಲವೆಡೆ ತಂಪೆರೆದ ವರುಣ: ಬೆಂಗಳೂರು, ಯಾದಗಿರಿಯಲ್ಲಿ ಭರ್ಜರಿ ಮಳೆ

ಆಂಧ್ರಪ್ರದೇಶದ ಉತ್ತರ ಕರಾವಳಿ ಜಿಲ್ಲೆಗಳಾದ ವಿಶಾಖಪಟ್ಟಣಂ, ವಿಜಯನಗರಂ, ಶ್ರೀಕಾಕುಲಂ ಹಾಗೂ ಒಡಿಶಾದ ಗಂಜಾಂ, ಪುರಿ, ಜಗತ್‌ಸಿಂಗ್‌ಪುರ ಜಿಲ್ಲೆಗಳಿಗೆ ಭಾರಿ ಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯೊಂದಿಗೆ ‘ಆರೆಂಜ್’ ಹಾಗೂ ‘ರೆಡ್’ ಅಲರ್ಟ್ ನೀಡಲಾಗಿದೆ. ಕರಾವಳಿಯುದ್ದಕ್ಕೂ ಸಮುದ್ರ ತೀವ್ರ ಪ್ರಕ್ಷುಬ್ಧವಾಗಿರಲಿದ್ದು, ಗಂಟೆಗೆ 55ರಿಂದ 65 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮುಂದಿನ 48 ಗಂಟೆಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ