AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ನಬ್ ಚಂಡಮಾರುತದಿಂದ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ; ವಿಮಾನ, ರೈಲು ಸೇವೆ ರದ್ದು

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತೀವ್ರ ಸ್ವರೂಪದ ಅರ್ನಬ್ ಚಂಡಮಾರುತವು ಕರಾವಳಿ ತೀರಕ್ಕೆ ಮತ್ತಷ್ಟು ಹತ್ತಿರವಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಆಂಧ್ರಪ್ರದೇಶ ರಾಜ್ಯಕ್ಕೆ ಅತ್ಯಂತ ಭಾರಿ ಮಳೆ ಹಾಗೂ ಬಿರುಗಾಳಿಯ ರೆಡ್ ಅಲರ್ಟ್ ಘೋಷಿಸಿದೆ. ಈ ಚಂಡಮಾರುತವು ಬುಧವಾರ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಅರ್ನಬ್ ಚಂಡಮಾರುತವು ನಾಳೆ ಮಧ್ಯಾಹ್ನದೊಳಗೆ ಆಂಧ್ರಪ್ರದೇಶದ ಬಾಪಟ್ಲಾ ಮತ್ತು ವಿಶಾಖಪಟ್ಟಣಂ ನಡುವೆ ಇರುವ ಯಾನಾಂ ತೀರದ ಬಳಿ ಭೀಕರವಾಗಿ ಅಪ್ಪಳಿಸಲಿದೆ. 'ರೆಡ್ ಅಲರ್ಟ್' ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಉತ್ತರ ಕರಾವಳಿ ಜಿಲ್ಲೆಗಳು ಮತ್ತು ತಗ್ಗು ಪ್ರದೇಶಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ.

ಅರ್ನಬ್ ಚಂಡಮಾರುತದಿಂದ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ; ವಿಮಾನ, ರೈಲು ಸೇವೆ ರದ್ದು
ಆಂಧ್ರಪ್ರದೇಶದಲ್ಲಿ ಮಳೆImage Credit source: PTI
ಸುಷ್ಮಾ ಚಕ್ರೆ
|

Updated on: Oct 27, 2026 | 10:28 PM

Share

ಹೈದರಾಬಾದ್, ಅಕ್ಟೋಬರ್ 27: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅರ್ನಬ್’ ಚಂಡಮಾರುತವು ಬುಧವಾರ ಆಂಧ್ರಪ್ರದೇಶದ ಗಡಿ ತೀರಕ್ಕೆ ಅಪ್ಪಳಿಸುವ ಮುನ್ಸೂಚನೆ ಇದೆ. ಇದರ ಪರಿಣಾಮವಾಗಿ ಆಂಧ್ರಪ್ರದೇಶ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಪ್ರಾರಂಭವಾಗಿದೆ. ಚಂಡಮಾರುತದ ಭೀತಿಯ ಹಿನ್ನೆಲೆಯಲ್ಲಿ ಕನಿಷ್ಠ 65 ರೈಲುಗಳು ಮತ್ತು 21 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಚಂಡಮಾರುತವು ಆಂಧ್ರಪ್ರದೇಶಕ್ಕೆ ಪ್ರವೇಶಿಸಿದಂತೆ ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಯಿಂದ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

‘ಅರ್ನಬ್’ ಎಂದರೆ ಬಂಗಾಳಿ ಭಾಷೆಯಲ್ಲಿ ‘ಸಮುದ್ರ’ ಅಥವಾ ‘ಸಾಗರ’ ಎಂದರ್ಥವಾಗಿದ್ದು, ಈ ಹೆಸರನ್ನು ಬಾಂಗ್ಲಾದೇಶ ನಾಮಕರಣ ಮಾಡಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾಗಳಲ್ಲಿ ಸುಮಾರು 4,000 ಚಂಡಮಾರುತ ಆಶ್ರಯ ತಾಣಗಳನ್ನು ತೆರೆಯಲಾಗಿದ್ದು, ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಇದನ್ನೂ ಓದಿ: ಚಂಡಮಾರುತ ‘ಅರ್ನಬ್’ ಎಫೆಕ್ಟ್: ಹಲವು ರೈಲುಗಳ ಸಂಚಾರ ರದ್ದು, ಸಂಪೂರ್ಣ ಪಟ್ಟಿ ಇಲ್ಲಿದೆ

ಶಾಲಾ-ಕಾಲೇಜುಗಳಿಗೆ ರಜೆ:

ಆಂಧ್ರಪ್ರದೇಶದ 10 ಪ್ರಮುಖ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅನಕಾಪಲ್ಲಿ ಜಿಲ್ಲೆಯಲ್ಲಿ 3 ದಿನಗಳ ಕಾಲ ರಜೆ ವಿಸ್ತರಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಅಪಾಯಕಾರಿ ಪ್ರದೇಶಗಳಿಂದ ಈಗಾಗಲೇ 50,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಆಶ್ರಯ ತಾಣಗಳಿಗೆ ರವಾನಿಸಲಾಗಿದ್ದು, ಒಟ್ಟು 4 ಲಕ್ಷ ಜನರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಮಾರ್ಗದಲ್ಲಿ ಸಂಚರಿಸುವ ಕನಿಷ್ಠ 65 ರೈಲುಗಳು ಹಾಗೂ 21 ವಿಮಾನ ಸೇವೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಆಂಧ್ರಪ್ರದೇಶ ಮತ್ತು ನೆರೆಯ ಒಡಿಶಾಗಳಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ನೂರಾರು ತಂಡಗಳು ಸಜ್ಜಾಗಿವೆ. ಆಂಧ್ರದಲ್ಲಿ 2,100ಕ್ಕೂ ಹೆಚ್ಚು ಚಂಡಮಾರುತ ಆಶ್ರಯ ಕೇಂದ್ರಗಳನ್ನು ತೆರೆಯಲಾಗಿದ್ದು, 1,000ಕ್ಕೂ ಹೆಚ್ಚು ವೈದ್ಯಕೀಯ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ಇದನ್ನೂ ಓದಿ: ಆಂಧ್ರ ಸಮೀಪಿಸುತ್ತಿದೆ ಅರ್ನಬ್ ಚಂಡಮಾರುತ; 4 ರಾಜ್ಯಗಳಲ್ಲಿ ಹೈ ಅಲರ್ಟ್​, ಭೂಕುಸಿತದ ಎಚ್ಚರಿಕೆ

ತಗ್ಗು ಪ್ರದೇಶಗಳ ಜನರನ್ನು ತಕ್ಷಣವೇ ತೆರವುಗೊಳಿಸಲು, ಪರಿಹಾರ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಹಾಗೂ ವಿದ್ಯುತ್ ಪೂರೈಕೆಗೆ ಧಕ್ಕೆಯಾದರೆ ತಕ್ಷಣ ಸರಿಪಡಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನಿರ್ದೇಶನ ನೀಡಿದ್ದಾರೆ. ರಾಜ್ಯದ 20 ಜಿಲ್ಲೆಗಳಲ್ಲಿ 2,131 ಆಶ್ರಯ ತಾಣಗಳನ್ನು ಗುರುತಿಸಲಾಗಿದ್ದು, 18 ಜಿಲ್ಲೆಗಳ ಸುಮಾರು 2.70 ಕೋಟಿ ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ. 30,000ಕ್ಕೂ ಹೆಚ್ಚು ಮೀನುಗಾರಿಕಾ ದೋಣಿಗಳನ್ನು ಸುರಕ್ಷಿತವಾಗಿ ದಂಡೆಗೆ ಕಟ್ಟಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ
ನಿಗಮ ಮಂಡಳಿಗಳಲ್ಲಿ ಆರ್‌ಎಸ್‌ಎಸ್ ನಂಟು ಇರುವವರು ಸ್ವತಃ ರಾಜೀನಾಮೆ ನೀಡಬೇಕು
ನಿಗಮ ಮಂಡಳಿಗಳಲ್ಲಿ ಆರ್‌ಎಸ್‌ಎಸ್ ನಂಟು ಇರುವವರು ಸ್ವತಃ ರಾಜೀನಾಮೆ ನೀಡಬೇಕು
"ನಾನು ನೋಡಿದ್ದ ಡಿಕೆಶಿ ಘರ್ಜನೆ ಬೇರೆ ಇತ್ತು, ಈಗಿನವರು ಬೇರೆ"
ಕ್ಯಾನ್ಸರ್ ಪೀಡಿತ ಮಕ್ಕಳನ್ನು ಕಂಡು ಬೇಸರ ವ್ಯಕ್ತಪಡಿಸಿದ ಸಿಎಂ
ಕ್ಯಾನ್ಸರ್ ಪೀಡಿತ ಮಕ್ಕಳನ್ನು ಕಂಡು ಬೇಸರ ವ್ಯಕ್ತಪಡಿಸಿದ ಸಿಎಂ
ಬಿಗ್​​ಬಾಸ್ ಟಾಸ್ಕ್ ಫಲಿತಾಂಶ ನೀಡಿದ ಎಐ: ಗೆದ್ದಿದ್ದು ಯಾರು?
ಬಿಗ್​​ಬಾಸ್ ಟಾಸ್ಕ್ ಫಲಿತಾಂಶ ನೀಡಿದ ಎಐ: ಗೆದ್ದಿದ್ದು ಯಾರು?
ಅಮಾಯಕ ರೋಷನ್‌ ಹೆಸರಲ್ಲಿ 350 ಕೋಟಿ ರೂ. ವ್ಯವಹಾರ, ಬೆಳಕಿಗೆ ಬಂದಿದ್ದು ಹೇಗೆ
ಅಮಾಯಕ ರೋಷನ್‌ ಹೆಸರಲ್ಲಿ 350 ಕೋಟಿ ರೂ. ವ್ಯವಹಾರ, ಬೆಳಕಿಗೆ ಬಂದಿದ್ದು ಹೇಗೆ
ದೇಗುಲ ಪ್ರವೇಶ ನಿರಾಕರಣೆ ವಿಚಾರ: ಹೆಣ್ಣುಮಕ್ಕಳಿಗೆ ಬೇಸರ ತಂದಿದೆ
ದೇಗುಲ ಪ್ರವೇಶ ನಿರಾಕರಣೆ ವಿಚಾರ: ಹೆಣ್ಣುಮಕ್ಕಳಿಗೆ ಬೇಸರ ತಂದಿದೆ
ಕರ್ನಾಟಕದಲ್ಲಿ ಆಸ್ತಿ ಮಾರ್ಗಸೂಚಿ ಬೆಲೆ ಹೆಚ್ಚಳ: ಖರೀದಿದಾರರಿಗೆ ಆಘಾತ
ಕರ್ನಾಟಕದಲ್ಲಿ ಆಸ್ತಿ ಮಾರ್ಗಸೂಚಿ ಬೆಲೆ ಹೆಚ್ಚಳ: ಖರೀದಿದಾರರಿಗೆ ಆಘಾತ
ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಎಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ
ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಎಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ