AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ನಬ್ ಚಂಡಮಾರುತ’ ಎಂದರೇನು? ಈ ಹೆಸರು ಬಂದಿದ್ದು ಹೇಗೆ ಇತ್ಯಾದಿ ವಿವರ

ಬಂಗಾಳಕೊಲ್ಲಿಯಲ್ಲಿ ತೀವ್ರಗೊಳ್ಳುತ್ತಿರುವ 'ಅರ್ನಬ್' ಚಂಡಮಾರುತದ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಚಂಡಮಾರುತದ ಅರ್ಥವೇನು ಮತ್ತು ಈ ಹೆಸರನ್ನು ಯಾವ ದೇಶ ಸೂಚಿಸಿದೆ ಎನ್ನುವ ವಿವರ ಇಲ್ಲಿದೆ. ಈ ಅರ್ನಬ್ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗವನ್ನು ರಾಚಿ ಹೋಗಲಿದೆ. ಅ. 28ರಂದು ಆಂಧ್ರಕ್ಕೆ ಅಡಿ ಇಡುವ ಈ ಚಂಡಮಾರುತದಿಂದ ಹಾನಿ ಸಾಧ್ಯತೆ ಕಡಿಮೆ ಮಾಡಲು ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ.

'ಅರ್ನಬ್ ಚಂಡಮಾರುತ' ಎಂದರೇನು? ಈ ಹೆಸರು ಬಂದಿದ್ದು ಹೇಗೆ ಇತ್ಯಾದಿ ವಿವರ
ಇತ್ತೀಚೆಗೆ ಬಂದು ಹೋಗಿದ್ದ ಅರ್ನಬ್ ಚಂಡಮಾರುತದಿಂದ ಛತ್ತೀಸ್​ಗಡದ ಬಸ್ತಾರ್​ನಲ್ಲಿ ಏರ್ಪಟ್ಟ ಪ್ರವಾಹ ಸ್ಥಿತಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 26, 2026 | 1:28 PM

Share

ನವದೆಹಲಿ, ಅಕ್ಟೋಬರ್ 26: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡು ತೀವ್ರಗೊಳ್ಳುತ್ತಿರುವ ಹೊಸ ಚಂಡಮಾರುತ ಆಂಧ್ರ ಮತ್ತು ಒಡಿಶಾದ ರಾಜ್ಯದ ಹಲವು ಜಿಲ್ಲೆಗಳ ಜನರನ್ನು ಭಯಭೀತಗೊಳಿಸುತ್ತಿದೆ. ಅಕ್ಟೋಬರ್ 28ರಂದು ಇದು ಆಂಧ್ರ ಕರಾವಳಿ ಭಾಗಕ್ಕೆ ಅಡಿ ಇಡಲಿದೆ. ಆಂಧ್ರ ಮತ್ತು ಒಡಿಶಾ ಸರ್ಕಾರಗಳು ಚಂಡಮಾರುತದಿಂದ ಹೆಚ್ಚಿನ ಹಾನಿಯಾಗದಂತೆ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ.

ಈ ಚಂಡಮಾರುತಕ್ಕೆ ‘ಅರ್ನಬ್’ (Cyclone Arnab) ಎಂದು ಹೆಸರಿಸಲಾಗಿದೆ. ‘ಅರ್ನಬ್’ ಎಂದರೆ ಬಂಗಾಳಿ ಭಾಷೆಯಲ್ಲಿ ‘ಸಾಗರ’ ಅಥವಾ ‘ಸಮುದ್ರ’ ಎಂದು ಅರ್ಥೈಸಲಾಗುತ್ತದೆ. ಈ ಹೆಸರನ್ನು ನೀಡಿದ್ದು ಬಾಂಗ್ಲಾದೇಶ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಅಮಿತ್ ಶಾ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಕೋರ್ಟ್

ಚಂಡಮಾರುತಗಳಿಗೆ ಹೆಸರು ಇಡುವ ಪದ್ಧತಿ ಹೇಗೆ?

ವಿಶ್ವ ಹವಾಮಾನ ಸಂಸ್ಥೆ (WMO) ಮತ್ತು ಯುಎನ್ ESCAP ನ ಸಮಿತಿಯು 2020ರ ಏಪ್ರಿಲ್‌ನಲ್ಲಿ ಉತ್ತರ ಹಿಂದೂ ಮಹಾಸಾಗರ ಪ್ರದೇಶಕ್ಕಾಗಿ (ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರ ಸೇರಿದಂತೆ) ಒಟ್ಟು 13 ದೇಶಗಳು ನೀಡಿದ ಒಟ್ಟು 169 ಹೆಸರುಗಳ ಪಟ್ಟಿಯನ್ನು ಅಳವಡಿಸಿಕೊಂಡಿದೆ. ಭಾರತ, ಬಾಂಗ್ಲಾದೇಶ, ಮಾಲ್ಡೀವ್ಸ್, ಮ್ಯಾನ್ಮಾರ್, ಓಮಾನ್, ಪಾಕಿಸ್ತಾನ, ಕತಾರ್, ಸೌದಿ ಅರೇಬಿಯಾ, ಶ್ರೀಲಂಕಾ, ಥೈಲ್ಯಾಂಡ್, ಯುಎಇ ಮತ್ತು ಯೆಮನ್ ದೇಶಗಳು ತಲಾ 13 ಹೆಸರುಗಳನ್ನು ನೀಡಿವೆ. ಇದರ ಅನುಕ್ರಮದಡಿಯೇ ಈ ಚಂಡಮಾರುತಕ್ಕೆ ‘ಅರ್ನಬ್’ ಎಂದು ಹೆಸರಿಸಲಾಗಿದೆ.

ಸೈಕ್ಲೋನ್​ಗೆ ಹೆಸರು ಇಡುವುದರ ಉದ್ದೇಶ

ಒಂದೇ ಸಮಯದಲ್ಲಿ ಅನೇಕ ಚಂಡಮಾರುತಗಳು ಬಂದಾಗ ಗೊಂದಲ ಉಂಟಾಗುವುದನ್ನು ತಡೆಯಲು, ಸಾರ್ವಜನಿಕರಿಗೆ ಎಚ್ಚರಿಕೆಗಳನ್ನು ಸುಲಭವಾಗಿ ತಲುಪಿಸಲು ಮತ್ತು ಹವಾಮಾನ ವೈಪರೀತ್ಯಗಳನ್ನು ಪ್ರತ್ಯೇಕವಾಗಿ ಗುರುತಿಸಲು ಈ ನಾಮಕರಣ ಪದ್ಧತಿಯು ಸಹಕಾರಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಇದನ್ನೂ ಓದಿ: ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿಕ್ಕಿ, ವ್ಯಕ್ತಿ ಸಾವು: ವಶಕ್ಕೆ ಪಡೆದು ಕೆಲವೇ ಗಂಟೆಯಲ್ಲಿ ಜಾಮೀನು

ಇದೇ ವೇಳೆ, ಅರ್ನಬ್ ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಲಾಗಿದ್ದು, ಯಾವುದೇ ಪ್ರಾಣಹಾನಿಯಾಗದಂತೆ ಶೂನ್ಯ ಹಾನಿಯ ಗುರಿಯೊಂದಿಗೆ ಸರ್ಕಾರಗಳು ಸನ್ನದ್ಧವಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ