AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Asani: 3 ದಿನದಲ್ಲಿ ಅಂಡಮಾನ್ ನಿಕೋಬಾರ್ ದ್ವೀಪಕ್ಕೆ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಸಮುದ್ರ ತೀರದಲ್ಲಿ ಹೈ ಅಲರ್ಟ್​

ಅಸನಿ ಚಂಡಮಾರುತದ ಭೀತಿ ಶುರುವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಈಗಾಗಲೇ ನೌಕಾಪಡೆ, ವಾಯುಪಡೆ, ಸೇನಾಪಡೆ ಸಿದ್ಧವಾಗಿವೆ.

Cyclone Asani: 3 ದಿನದಲ್ಲಿ ಅಂಡಮಾನ್ ನಿಕೋಬಾರ್ ದ್ವೀಪಕ್ಕೆ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಸಮುದ್ರ ತೀರದಲ್ಲಿ ಹೈ ಅಲರ್ಟ್​
ಅಸನಿ ಚಂಡಮಾರುತ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 18, 2022 | 4:08 PM

Share

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಸನಿ (Cyclone Asani) ಅಪ್ಪಳಿಸಲಿದೆ. ಮಾರ್ಚ್​ 21ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಅಸನಿ ಚಂಡಮಾರುತ ಉಂಟಾಗುವ ನಿರೀಕ್ಷೆಯಿದೆ. ಅಸನಿ ಎಂಬ ಹೆಸರನ್ನು ಶ್ರೀಲಂಕಾ ಸೂಚಿಸಿದೆ. ಇದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉದ್ದಕ್ಕೂ ಚಲಿಸುತ್ತದೆ. ಮಾರ್ಚ್ 22ರಂದು ಈ ಚಂಡಮಾರುತ ಬಾಂಗ್ಲಾದೇಶ- ಉತ್ತರ ಮಯನ್ಮಾರ್ ಕರಾವಳಿಯನ್ನು ತಲುಪುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಮೀನುಗಾರರಿಗೆ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ (IMD) ಸೂಚಿಸಿದೆ.

ಅಸನಿ ಚಂಡಮಾರುತದ ಭೀತಿ ಶುರುವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಈಗಾಗಲೇ ನೌಕಾಪಡೆ, ವಾಯುಪಡೆ, ಸೇನಾಪಡೆ ಸಿದ್ಧವಾಗಿವೆ. ಗಂಟೆಗೆ 70ರಿಂದ 90 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. 2022ರಲ್ಲಿ ಭಾರತಕ್ಕೆ ಅಪ್ಪಳಿಸುತ್ತಿರುವ ಮೊದಲ ಚಂಡಮಾರುತ ಇದಾಗಿದ್ದು, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕಡಿಮೆ ಒತ್ತಡದ ಪ್ರದೇಶವು ಮಾರ್ಚ್ 19ರ ಬೆಳಿಗ್ಗೆ ಪೂರ್ವ-ಈಶಾನ್ಯಕ್ಕೆ ಚಲಿಸುತ್ತದೆ ಮತ್ತು ಮಾರ್ಚ್ 20ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉದ್ದಕ್ಕೂ ಉತ್ತರಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ನೈಋತ್ಯ ಹಿಂದೂ ಮಹಾಸಾಗರದಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶವು ಮುಂದಿನ ವಾರದಿಂದ ಚಂಡಮಾರುತವಾಗಿ ಬದಲಾಗಬಹುದು.

IMD ಪ್ರಕಾರ, ಈ ಚಂಡಮಾರುತವು ಬಾಂಗ್ಲಾದೇಶ ಮತ್ತು ಉತ್ತರ ಮಯನ್ಮಾರ್ ಕಡೆಗೆ ಚಲಿಸಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೂ ಮುನ್ನ ಕೇಂದ್ರ ಗೃಹ ಕಾರ್ಯದರ್ಶಿ ಚಂಡಮಾರುತವನ್ನು ಎದುರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ಚಂಡಮಾರುತವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕಡೆಗೆ ಚಲಿಸುವ ಮೊದಲು ಕಡಿಮೆ ಒತ್ತಡದ ಪ್ರದೇಶವಾಗಿ ಮಾರ್ಪಟ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 21ರಂದು ಕಡಿಮೆ ಒತ್ತಡದ ಪ್ರದೇಶ ಚಂಡಮಾರುತವಾಗಿ ಬದಲಾಗಲಿದ್ದು, ಮಾರ್ಚ್ 22ರ ವೇಳೆಗೆ ವಾಯುವ್ಯಕ್ಕೆ ಚಲಿಸುವ ನಿರೀಕ್ಷೆಯಿದೆ.

ಶ್ರೀಲಂಕಾ ಚಂಡಮಾರುತಕ್ಕೆ ಅಸನಿ ಎಂದು ಹೆಸರಿಸಿದೆ. ಕೇಂದ್ರ ಗೃಹ ಸಚಿವಾಲಯವು ಎಲ್ಲಾ ಮೂರು ಸಶಸ್ತ್ರ ಪಡೆಗಳಿಗೆ ಎಚ್ಚರಿಕೆಯಿಮದ ಇರುವುದಂತೆ ಸೂಚಿಸಿದೆ. ಕೇಂದ್ರ ಗೃಹ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್‌ನ ಕೇಂದ್ರ ಸಚಿವಾಲಯಗಳು, ಏಜೆನ್ಸಿಗಳು ಮತ್ತು ಆಡಳಿತದ ಸಿದ್ಧತೆಗಳನ್ನು ಪರಿಶೀಲಿಸಲಾಯಿತು.

ಗೃಹ ಸಚಿವಾಲಯದ ಹೇಳಿಕೆಯ ಪ್ರಕಾರ, ಚಂಡಮಾರುತದ ಎಚ್ಚರಿಕೆಯ ನಂತರ, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಎನ್‌ಡಿಆರ್‌ಎಫ್ ಜೊತೆಗೆ ರಕ್ಷಣಾ ತಂಡವನ್ನು ಅಲರ್ಟ್ ಮೋಡ್‌ನಲ್ಲಿ ಇರಿಸಲಾಗಿದೆ. ಚಂಡಮಾರುತದಿಂದಾಗಿ ಮಾರ್ಚ್ 21ರಂದು ಮಧ್ಯ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತವು ಮಾರ್ಚ್ 22ರ ಬೆಳಿಗ್ಗೆ ಬಾಂಗ್ಲಾದೇಶ- ಉತ್ತರ ಮಯನ್ಮಾರ್ ಕರಾವಳಿಯ ಬಳಿ ತಲುಪುವ ನಿರೀಕ್ಷೆಯಿದೆ ಎಂದು IMD ಭವಿಷ್ಯ ನುಡಿದಿದೆ.

ಇದನ್ನೂ ಓದಿ: Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Typhoon Rai: ಫಿಲಿಪೈನ್ಸ್​ನಲ್ಲಿ ರೈ ಚಂಡಮಾರುತದ ಅಟ್ಟಹಾಸ; 75 ಜನ ಸಾವು, ಹೈ ಅಲರ್ಟ್​ ಘೋಷಣೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ