Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy: ಗುಜರಾತ್‌ನ ದ್ವಾರಕಾಧೀಶ ದೇವಾಲಯ ಬಂದ್

ಬಿಪರ್‌ಜೋಯ್ ಚಂಡಮಾರುತವು ಗುಜರಾತ್‌ನ ಕರಾವಳಿ ಪ್ರದೇಶವನ್ನು ಸಮೀಪಿಸುತ್ತಿದ್ದಂತೆ, ದೇವಭೂಮಿ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯವನ್ನು ಗುರುವಾರ ಮುಚ್ಚಲಾಗಿದೆ. ದ್ವಾರಕಾಧೀಶ್ ದೇವಾಲಯದ ಜೊತೆಗೆ ದ್ವಾರಕಾ ಬಜಾರ್ ಕೂಡ ಮುಚ್ಚಲಾಗಿದೆ.

Cyclone Biparjoy: ಗುಜರಾತ್‌ನ ದ್ವಾರಕಾಧೀಶ ದೇವಾಲಯ ಬಂದ್
ದ್ವಾರಕಾಧೀಶ ದೇವಾಲಯ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2023 | 12:57 PM

ದ್ವಾರಕಾ: ಬಿಪರ್‌ಜೋಯ್ ಚಂಡಮಾರುತವು (Cyclone Biparjoy) ಗುಜರಾತ್‌ನ ಕರಾವಳಿ ಪ್ರದೇಶವನ್ನು ಸಮೀಪಿಸುತ್ತಿದ್ದಂತೆ, ದೇವಭೂಮಿ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯವನ್ನು ಗುರುವಾರ ಮುಚ್ಚಲಾಗಿದೆ. ದ್ವಾರಕಾಧೀಶ್ ದೇವಾಲಯದ ಜೊತೆಗೆ ದ್ವಾರಕಾ ಬಜಾರ್ ಕೂಡ ಮುಚ್ಚಲಾಗಿದೆ. ಆದರೆ, ದೇವಸ್ಥಾನದ ಪ್ರತಿದಿನ ನಡೆಯುವ ಪೂಜೆ ಯಥಾಸ್ಥಿತಿಯಾಗಿ ಮುಂದುವರಿಯಲಿದೆ. ಬೆಳಗಿನ ಪೂಜೆ, ಭೋಗ್ ಮತ್ತು ಆರತಿ ಇರುತ್ತದೆ. ದ್ವಾರಕಾಧೀಶ ದೇವಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ನೇರ ದರ್ಶನವನ್ನು  ಪಡೆಯಬಹುದು ಎಂದು ದ್ವಾರಕಾಧೀಶ ದೇವಾಲಯದ ಅರ್ಚಕ ಮಲಯ್ ಪಾಂಡ್ಯ ತಿಳಿಸಿದ್ದಾರೆ.

ಬಿಪರ್‌ಜೋಯ್ ಜೂನ್ 15ರ ಸಂಜೆ ಗುಜರಾತ್‌ನ ಜಖೌ ಕರಾವಳಿಯ ಬಳಿ ಭೂಕುಸಿತ ಉಂಟು ಮಾಡುವ ಸಾಧ್ಯತೆ ಇದೆ. ದಕ್ಷಿಣ ಭಾಗ ಅನೇಕ ಕಡೆ ಇದು ಅಪ್ಪಳಿಸಲಿದೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ವಿಎಸ್‌ಸಿಎಸ್ (ಅತಿ ತೀವ್ರ ಚಂಡಮಾರುತ) ಬಿಪರ್‌ಜೋಯ್ ಇಂದು ಸಂಜೆಯ ವೇಳೆಗೆ ಸೌರಾಷ್ಟ್ರ, ಕಚ್ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯನ್ನು ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿಗಳಿಗೂ ಅಪ್ಪಳಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Cyclone Biparjoy: ಬಾಹ್ಯಾಕಾಶದಲ್ಲಿ ಬೈಪರ್‌ಜೋಯ್ ಚಂಡಮಾರುತದ ದೃಶ್ಯವನ್ನು ಸೆರೆಹಿಡಿದ ಗಗನಯಾತ್ರಿ

ಬಿಪರ್‌ಜೋಯ್ ಚಂಡಮಾರುತದಿಂದ ಉದ್ಭವಿಸುವ ಯಾವುದೇ ಸಮಸ್ಯೆಗಳನ್ನು ಎದುರಿಸಲು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ಬಿಎಸ್‌ಎಫ್ ಗುಜರಾತ್‌ನ ಇನ್ಸ್‌ಪೆಕ್ಟರ್ ಜನರಲ್ ರವಿ ಗಾಂಧಿ ಅವರು ಭುಜ್‌ನ ಕರಾವಳಿ ಪ್ರದೇಶಗಳಿಗೆ ಭೇಟಿ ನೀಡಿ. ಪರಿಸ್ಥಿತಿಯನ್ನು ಎದುರಿಸಲು ಮಾಡಿರುವ ಕಾರ್ಯಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ.

ಎಎನ್‌ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಬಿಎಸ್‌ಎಫ್ ಐಜಿ ರವಿ ಗಾಂಧಿ, ಅಂತರರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಪಡೆಗಳನ್ನು ನಿಯೋಜಿಸಲಾಗಿದೆ. ಐಎಂಡಿ ಮೌಲ್ಯಮಾಪನದ ಪ್ರಕಾರ, ಈ ಚಂಡಮಾರುತದ ಪ್ರಭಾವ ಮಾಂಡವಿಯಿಂದ ಕರಾಚಿವರೆಗೆ ಇದೆ. ನಮ್ಮ ಪಡೆಗಳು ಸಂಪೂರ್ಣ ಸಿದ್ಧತೆಯನ್ನು ಮಾಡಿಕೊಂಡಿದೆ. ಜನರಿಗೆ ಈ ಸಮಯದಲ್ಲಿ ಯಾವುದೇ ರೀತಿಯ ಸಹಾಯಗಳನ್ನು ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Thu, 15 June 23

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್