Cyclone Biporjoy: ಚಂಡಮಾರುತ ಆರ್ಭಟ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ
ಅರಬ್ಬಿ ಸಮುದ್ರದಲ್ಲಿ ಬಿಪೊರ್ಜೊಯ್ ಚಂಡಮಾರುತದ ಆರ್ಭಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ: ಅರಬ್ಬಿ ಸಮುದ್ರದಲ್ಲಿ (Arabian Sea) ಬಿಪೊರ್ಜೊಯ್ ಚಂಡಮಾರುತದ (Biporjoy Cyclone) ಆರ್ಭಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗು (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ. ಈ ಹಿನ್ನೆಲೆ ಮುಂದಿನ 3-4 ದಿನಗಳಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಂಭವ ಇದೆ. ಕರ್ನಾಟಕದ ಕರಾವಳಿ, ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಗೋವಾ, ಕೇರಳ, ಲಕ್ಷ ದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಿಜೋರಾಂ, ಮಣಿಪುರ, ಅರುಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗು ಸಾಧ್ಯತೆ ಇದ್ದು ಕಟ್ಟೆಚ್ಚರ ವಹಿಸುವಂತೆ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯು ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಚಂಡಮಾರುತ ಸೃಷ್ಟಿಯಾಗಿ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಬಿಪೊರ್ ಜಾಯ್ ಚಂಡಮಾರುತ ಗಂಟೆಗೆ ಎರಡು ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜನರಲ್ಲಿ ಸಂತಸ ಮೂಡಿಸಿದೆ.
ಇದನ್ನೂ ಓದಿ: Monsoon 2023: ತೀವ್ರಗೊಂಡ ಬಿಪರ್ಜಾಯ್ ಚಂಡಮಾರುತ, ಜೂನ್ 9ಕ್ಕೆ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶ
Very severe cyclonic storm #Biparjoy over east-central Arabian Sea at 23.30 hrs IST of June 8 over about 840 km west-southwest of Goa, 870 km west-southwest of Mumbai. To intensify further gradually during next 36 hrs and move nearly north-northwestwards in next 2 days: IMD pic.twitter.com/eDSz75ZRI5
— ANI (@ANI) June 8, 2023
ಮುಂದಿನ ಮೂರು ದಿನಗಳಲ್ಲಿ ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು IMD ಹೇಳಿದೆ. ಮುಂದಿನ 48 ಗಂಟೆಗಳಲ್ಲಿ ಕೇರಳಕ್ಕೆ ಮಾನ್ಸೂನ್ ಆಗಮಿಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ನೈಸರ್ಗಿಕ ವಿಕೋಪಗಳ ಸಾಧ್ಯತೆಯನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದೆ ಎಂದು ಗುಜರಾತ್ ಸರ್ಕಾರ ಹೇಳಿದೆ. ಜೂನ್ 14 ರವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉತ್ತರ
ಹಿಂದೂ ಮಹಾಸಾಗರದಲ್ಲಿ ಮೂರು ವಾರಗಳಲ್ಲಿ ಇದು ಎರಡನೇ ಚಂಡಮಾರುತವಾಗಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡ ಮೋಚಾ ಚಂಡಮಾರುತವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ಗೆ ನುಗ್ಗಿ ಭಾರಿ ವಿನಾಶಕ್ಕೆ ಕಾರಣವಾಗಿತ್ತು. 2021 ರಲ್ಲಿ ಮಾನ್ಸೂನ್ ಆರಂಭದ ಸಮಯದಲ್ಲಿ ಯಾಸ್ ಚಂಡಮಾರುತವು ಕೂಡ ಇದೇ ರೀತಿ ರೂಪುಗೊಂಡಿತ್ತು.
Published On - 6:57 am, Fri, 9 June 23