Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಂಗಲ್ ಚಂಡಮಾರುತ: ಆಂಧ್ರದಲ್ಲಿ ಸುರಿಯುತ್ತಿದೆ ಭಾರಿ ಮಳೆ

ಫೆಂಗಲ್ ಚಂಡಮಾರುತವು ತಮಿಳುನಾಡು ಕರಾವಳಿಗೆ ಅಪ್ಪಳಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಿರುಮಲದಲ್ಲಿ ಶುಕ್ರವಾರ ಬೆಳಗ್ಗೆ ಆರಂಭವಾದ ತುಂತುರು ಮಳೆ ಭಾನುವಾರವೂ ಮುಂದುವರೆದಿದೆ. ರಾಯಲ್​ಸೀಮಾ, ಕಡಲೂರು ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗಲಿದೆ. ಡೀ ತಿರುಮಲ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಬೆಟ್ಟದ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ.

ಫೆಂಗಲ್ ಚಂಡಮಾರುತ: ಆಂಧ್ರದಲ್ಲಿ ಸುರಿಯುತ್ತಿದೆ ಭಾರಿ ಮಳೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Dec 01, 2024 | 12:25 PM

ಫೆಂಗಲ್ ಚಂಡಮಾರುತವು ತಮಿಳುನಾಡು ಕರಾವಳಿಗೆ ಅಪ್ಪಳಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಿರುಮಲದಲ್ಲಿ ಶುಕ್ರವಾರ ಬೆಳಗ್ಗೆ ಆರಂಭವಾದ ಮಳೆ ಭಾನುವಾರವೂ ಮುಂದುವರೆದಿದೆ. ರಾಯಲ್​ಸೀಮಾ, ಕಡಲೂರು ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗಲಿದೆ. ಡೀ ತಿರುಮಲ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಬೆಟ್ಟದ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ.

ಪಟ್ಟಣದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಾದ್ಯಂತ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತದೆ. ತಿರುಪತಿ, ನೆಲ್ಲೂರು ಮತ್ತು ಪ್ರಕಾಶಂ ಜಿಲ್ಲೆಗಳ ಕರಾವಳಿಯಲ್ಲಿ ಗಂಟೆಗೆ 70-90 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ,  ನೆಲ್ಲೂರು, ಚಿತ್ತೂರು, ಕಡಪ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹದ ಭೀತಿಯೂ ಇದೆ.

ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಜನರು ಫ್ಲೈಒವರ್‌ಗಳಲ್ಲಿ ಸಿಕ್ಕಿಹಾಕಿಕೊಂಡು ಪರದಾಡಿದ್ದಾರೆ. ವಸತಿ ಪ್ರದೇಶಗಳು, ಆಸ್ಪತ್ರೆಗಳಿಗೂ ನೀರು ನುಗ್ಗಿ ತೊಂದರೆಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ, ವಿದ್ಯುದಾಘಾತ, ಭೂಕುಸಿತದಿಂದ 3 ಮಂದಿ ಸಾವು

ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ನಗರಗಳು ಹಾಗೂ ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಚಿತ್ತೂರು, ಕೊಡೂರು, ತಿರುಪತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಹಾಬಲಿಪುರದಿಂದ 50 ಕಿಮೀ, ಪುದುಚೇರಿಯ ಪೂರ್ವ ಈಶಾನ್ಯಕ್ಕೆ 60 ಕಿಮೀ ಮತ್ತು ಚೆನ್ನೈನಿಂದ 90 ಕಿಮೀ ದೂರದಲ್ಲಿ ಚಂಡಮಾರತ ನೆಲೆಗೊಂಡಿತ್ತು ಎಂದು ಐಎಂಡಿ ತಿಳಿಸಿದೆ. ಫೆಂಗಲ್ ಚಂಡಮಾರುತವು ಪಶ್ಚಿಮ ನೈರುತ್ಯ ದಿಕ್ಕಿನಲ್ಲಿ ಚಲಿಸುತ್ತಿದೆ.   ಈ ಮಧ್ಯೆ, ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಚೆಂಗಲ್ಪಟ್ಟು ಜಿಲ್ಲೆಯ ಕಲ್ಪಾಕ್ಕಂ ಬಳಿಯ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ