Cyclone Jawad: ಭಾರತಕ್ಕೆ ಜವಾದ್​ ಚಂಡಮಾರುತದ ಭೀತಿ; ಡಿ.4ಕ್ಕೆ ಅಪ್ಪಳಿಸಲಿರುವ ಸೈಕ್ಲೋನ್​​ನಿಂದ ಈ ರಾಜ್ಯಗಳಿಗೆ ಆತಂಕ

ದಕ್ಷಿಣ ಥೈಲ್ಯಾಂಡ್​​ನ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿ ಗಾಳಿ ಏಳಲಿದ್ದು, ಅದು ಚಂಡಮಾರುತ ಸ್ವರೂಪ ಪಡೆದುಕೊಳ್ಳಲಿದೆ. ಅದು ಡಿ.4ರಂದು ಬೆಳಗ್ಗೆ ಭಾರತಕ್ಕೆ ಪ್ರವೇಶ ಮಾಡಲಿದೆ.

Cyclone Jawad: ಭಾರತಕ್ಕೆ ಜವಾದ್​ ಚಂಡಮಾರುತದ ಭೀತಿ; ಡಿ.4ಕ್ಕೆ ಅಪ್ಪಳಿಸಲಿರುವ ಸೈಕ್ಲೋನ್​​ನಿಂದ ಈ ರಾಜ್ಯಗಳಿಗೆ ಆತಂಕ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Dec 02, 2021 | 2:20 PM

ದೆಹಲಿ: ಈಗಾಗಲೇ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇಶಾದ್ಯಂತ ಅನಾಹುತಗಳು ಸೃಷ್ಟಿಯಾಗಿವೆ. ಬೆಳೆ ನಾಶ, ಪ್ರಾಣ ಹಾನಿಯಾಗುತ್ತಿದೆ. ಹೀಗಿರುವಾಗ ಭಾರತದ ಹವಾಮಾನ ಇಲಾಖೆ (IMD) ಮತ್ತೊಂದು ಕಹಿಸುದ್ದಿ ಕೊಟ್ಟಿದೆ. ದೇಶಕ್ಕೆ ಶೀಘ್ರವೇ ಜವಾದ್ (Cyclone Jawad) ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಿದೆ ಎಂದು ಮುನ್ಸೂಚನೆ ನೀಡಿದೆ. ಈ ಜವಾದ್​ ಚಂಡಮಾರುತ ಇನ್ನು 48 ಗಂಟೆಗಳಲ್ಲಿ ಅಂದರೆ ಡಿಸೆಂಬರ್ 4ರ ಮುಂಜಾನೆ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜವಾದ್ ಪ್ರಭಾವದಿಂದ ಡಿಸೆಂಬರ್ 4 ಮತ್ತು 5ರಂದು ಆಂಧ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಅದನ್ನು ಹೊರತುಪಡಿಸಿ ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಾದ ಕೋಲ್ಕತ್ತ, ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳು, ಮಿಡ್ನಾಪುರದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳು, ಹೂಗ್ಲಿ, ನಾದಿಯಾ ಮತ್ತು ಝಾರ್​ಗ್ರಾಮ್​​ಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದೂ ಹೇಳಲಾಗಿದೆ.  ದಕ್ಷಿಣ ಥೈಲ್ಯಾಂಡ್​​ನ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿ ಗಾಳಿ ಏಳಲಿದ್ದು, ಅದು ಚಂಡಮಾರುತ ಸ್ವರೂಪ ಪಡೆದುಕೊಳ್ಳಲಿದೆ. ನಂತರ ಅಂಡಮಾನ್​ ಸಾಗರದ ದಕ್ಷಿಣ ಕರಾವಳಿ ಮೂಲಕ ಡಿಸೆಂಬರ್​ 4ರಂದು ಭಾರತ ಪ್ರವೇಶಿಸಲಿದ್ದು, ಇದರಿಂದಾಗಿ ಬೀಳುವ ಭಯಂಕರ ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಭೂಕುಸಿತದಂತಹ ಹಾನಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ ಶುಕ್ರವಾರದಿಂದ (ಡಿ.3) ಭಾನುವಾರ (ಡಿ.5)ದವರೆಗೆ ಸಾಗರ ಪ್ರದೇಶಗಳಲ್ಲಿ ವಾಸಿಸುವವರು ತುಂಬ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಚಂಡಮಾರುತದ ವೇಗ ಗಂಟೆಗೆ 70-80 ಕಿಮೀ ಇರಲಿದ್ದು, ಸಾಗರದಲ್ಲಿ ಅಲೆಗಳ ಅಬ್ಬರವೂ ಅಧಿಕವಾಗಿರಲಿದೆ. ಈಗಾಗಲೇ ಮೀನುಗಾರಿಕೆಗೆ ತೆರಳಿರುವವರು ಇಂದೇ ವಾಪಸ್​ ಬರಬೇಕು ಎಂದು ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ: ಯಶ್​-ರಾಧಿಕಾ ಪಂಡಿತ್​ ಪುತ್ರಿ ಆಯ್ರಾ ಹುಟ್ಟುಹಬ್ಬ; 3ನೇ ವರ್ಷದ ಜನ್ಮದಿನ ಆಚರಿಸಿಕೊಂಡ ಸ್ಟಾರ್​ ಕಿಡ್​

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ