ಆಂಧ್ರದಲ್ಲಿ ಮೈಚಾಂಗ್ ಚಂಡಮಾರುತ: ಪರಿಸ್ಥಿತಿ ಬಗ್ಗೆ ಸಿಎಂ ಜಗನ್ ಜತೆಗೆ ಚರ್ಚಿಸಿದ ಮೋದಿ
Cyclone Michaung: ಮೈಚಾಂಗ್ ಚಂಡಮಾರುತ ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗದಲ್ಲಿ ಒತ್ತಡ ಹೆಚ್ಚಾಗಿದೆ ಎಂದು IMD ಹೇಳಿದೆ. ಆಂಧ್ರದಲ್ಲಿ ಈಗಾಗಲೇ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಫೋನ್ ಕರೆ ಮಾಡಿ ವಿಚಾರಿಸಿದ್ದಾರೆ.
ಮೈಚಾಂಗ್ ಚಂಡಮಾರುತದ (Cyclone Michaung) ತೀವ್ರತೆ ಹೆಚ್ಚಾಗಿದ್ದು, ಭಾರತದ ಕರವಾಳಿ ಪ್ರದೇಶಗಳಲ್ಲಿ ಇದರ ಪರಿಣಾಮ ಉಂಟಾಗಲಿದೆ ಎಂದು ಹೇಳಲಾಗಿದೆ. ಇದೀಗ ಮೈಚಾಂಗ್ ಚಂಡಮಾರುತ ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗದಲ್ಲಿ ಒತ್ತಡ ಹೆಚ್ಚಾಗಿದೆ ಎಂದು IMD ಹೇಳಿದೆ. ಆಂಧ್ರದಲ್ಲಿ ಈಗಾಗಲೇ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಫೋನ್ ಕರೆ ಮಾಡಿ ವಿಚಾರಿಸಿದ್ದಾರೆ.
ಮೈಚಾಂಗ್ ಚಂಡಮಾರುತಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಜತೆಗೆ ಆಂಧ್ರಕ್ಕೆ ಬೇಕಾದ ಎಲ್ಲ ಸಹಾಯಗಳನ್ನು ನೀಡುವಂತೆ ಪ್ರಧಾನಿ ಮೋದಿ ಅವರು ಉನ್ನತ ಅಧಿಕಾರಿಗಳಿಗೆ ಹೇಳಿದ್ದಾರೆ.
ಕೇಂದ್ರ ಯಾವುದೇ ರೀತಿಯ ಸಹಾಯ ಬೇಕಾದರೂ ಕೇಳಿ ಎಂದು ಮೋದಿ ಅವರು ಹೇಳಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಮೈಚಾಂಗ್ ಚಂಡಮಾರುತ ವೇಗ ಹೆಚ್ಚಾಗಿದ್ದು, ಯಾವುದೇ ಸಮಯದಲ್ಲೂ ಬೇಕಾದರೂ ಚಂಡಮಾರುತ ಅಪ್ಪಳಿಸಬಹುದು ಎಂದು ಹೇಳಲಾಗಿದೆ.
ಇದನ್ನೂ ಓದಿ: ಮುಂದಿನ 48 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ
ಡಿಸೆಂಬರ್ 5ರಂದು ಮುಂಜಾನೆ ದಕ್ಷಿಣ ಆಂಧ್ರಪ್ರದೇಶದ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ 80-90ರಷ್ಟು ವೇಗದಲ್ಲಿ ಗಾಳಿ ಬಿಸಲಿದೆ. ಈ ವೇಗ ಹೆಚ್ಚಾಗಿ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಪರಿಣಾಮ ಉಂಟು ಮಾಡಲಿದೆ.