Cyclone Mandous: ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತದ ಭೀತಿ; ಚೆನ್ನೈನ 16 ವಿಮಾನಗಳ ಹಾರಾಟ ರದ್ದು
Tamil Nadu Rain: ಇಂದು ರಾತ್ರಿಯ ವೇಳೆಗೆ ಮಾಂಡೌಸ್ ಚಂಡಮಾರುತವು ನೆರೆಯ ರಾಜ್ಯವಾದ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಹೀಗಾಗಿ, ಇಂದು ಕೆಟ್ಟ ಹವಾಮಾನದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 16 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಚೆನ್ನೈ: ಇಂದು ಮಧ್ಯರಾತ್ರಿ ಸುಮಾರು 85 ಕಿ.ಮೀ ವೇಗದಲ್ಲಿ ಮಾಂಡೌಸ್ ಚಂಡಮಾರುತದ (Mandous Cyclone) ಗಾಳಿ ಚೆನ್ನೈನ ಕರಾವಳಿಯ ಮೇಲೆ ಹಾದು ಹೋಗುವುದರ ಜೊತೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇಂದು ರಾತ್ರಿಯ ವೇಳೆಗೆ ಮಾಂಡೌಸ್ ಚಂಡಮಾರುತವು ನೆರೆಯ ರಾಜ್ಯವಾದ ತಮಿಳುನಾಡಿಗೆ (Tamil Nadu Rain) ಅಪ್ಪಳಿಸುವ ಸಾಧ್ಯತೆಯಿದೆ. ಹೀಗಾಗಿ, ಇಂದು ಕೆಟ್ಟ ಹವಾಮಾನದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ (Chennai Airport) 16 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇವುಗಳಲ್ಲಿ ಮೂರು ಅಂತಾರಾಷ್ಟ್ರೀಯ ವಿಮಾನಗಳು ಕೂಡ ಸೇರಿವೆ.
ಚಂಡಮಾರುತದ ಭೀತಿಯಿಂದಾಗಿ ತಮಿಳುನಾಡು ಸರ್ಕಾರ ಸಹಾಯವಾಣಿ ಸಂಖ್ಯೆ: 044-2538-4530 ಬಿಡುಗಡೆ ಮಾಡಿದೆ. ಚಂಡಮಾರುತದ ತೀವ್ರತೆ ಕಡಿಮೆ ಇರಲಿದ್ದು, 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚೆಂಗಲ್ಪಟ್ಟು, ಕಾಂಚೀಪುರಂ, ವಿಲ್ಲುಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ 12 ಜಿಲ್ಲೆಗಳಲ್ಲಿ ನಾಳೆ ಕೂಡ ಶಾಲಾ-ಕಾಲೇಜುಗಳನ್ನು ಮುಚ್ಚಲಾಗುವುದು.
ಮಧ್ಯರಾತ್ರಿ ಸುಮಾರು 85 ಕಿಮೀ ವೇಗದಲ್ಲಿ ಚಂಡಮಾರುತದ ಗಾಳಿಯು ಚೆನ್ನೈ ಕರಾವಳಿಯ ಮೇಲೆ ಹಾದು ಹೋಗುವುದರ ಜೊತೆಗೆ ಭಾರೀ ಮಳೆಯ ಮುನ್ಸೂಚನೆ ಇದೆ. ಪುದುಚೇರಿ ಬಂದರಿನಲ್ಲಿ ಚಂಡಮಾರುತದ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ತಿಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಚೆನ್ನೈನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: Bengaluru Weather Today: ಮ್ಯಾಂಡಸ್ ಚಂಡಮಾರುತದ ಎಫೆಕ್ಟ್; ಬೆಂಗಳೂರಿನಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ
ಮಾಂಡೌಸ್ ಚಂಡಮಾರುತವು ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಮಧ್ಯರಾತ್ರಿ ಅಥವಾ ನಂತರ 65-75 ಕಿಮೀ ವೇಗದಲ್ಲಿ ಗಂಟೆಗೆ 85 ಕಿಮೀ ವೇಗದಲ್ಲಿ ದಾಟುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ಉತ್ತರ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳು, ಪುದುಚೇರಿ, ಕಾರೈಕಾಲ್‌ನಲ್ಲಿ ಇಂದು ಮತ್ತು ಡಿ. 10ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.
#WATCH | Tamil Nadu: Chennai continues to receive rainfall as #CycloneMandous approaches. Cyclone to cross the coast b/w Puducherry and Sriharikota around midnight of today to early hours of December 10. pic.twitter.com/UOlL7g1EzJ
— ANI (@ANI) December 9, 2022
ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ತಿರುವಳ್ಳೂರು, ವೆಲ್ಲೂರು, ಕಡಲೂರು, ರಾಣಿಪೇಟ್, ಕಾಂಚೀಪುರಂ, ಕಲ್ಲಕುರಿಚಿ, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಣಂ, ಅರಿಯಲೂರ್, ಪೆರಂಬಲೂರು, ಪುದುಮೂರು, ಧರ್ಮಪುರ, ಪುದು ಸೇರಿ 19 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: Cyclone Mandous: ಮಾಂಡೌಸ್ ಚಂಡಮಾರುತದ ಪರಿಣಾಮ; ಡಿ. 13ರವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ
ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರು ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇಂದು ಚೆನ್ನೈನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ನಾಮಕ್ಕಲ್ ಮತ್ತು ಕಾರೈಕಲ್ ಮತ್ತು ಪುದುಚೇರಿಯಲ್ಲಿ ಇಂದು ಮತ್ತು ಶನಿವಾರ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಮಿಳುನಾಡು, ಪುದುಚೆರಿ, ಆಂಧ್ರದ ಕರಾವಳಿಯಲ್ಲಿ ಮಾಂಡೌಸ್ ಚಂಡಮಾರುತದ ಅಬ್ಬರ ಹಿನ್ನೆಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:41 pm, Fri, 9 December 22