Cyclone Mocha: ಮೋಕಾ ಚಂಡಮಾರುತ: ಕೇರಳಕ್ಕೆ ಯೆಲ್ಲೋ ಅಲರ್ಟ್​, ಇನ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

|

Updated on: May 09, 2023 | 3:29 PM

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಕಾ(Mocha) ಚಂಡಮಾರುತ(Cyclone)ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Cyclone Mocha: ಮೋಕಾ ಚಂಡಮಾರುತ: ಕೇರಳಕ್ಕೆ ಯೆಲ್ಲೋ ಅಲರ್ಟ್​, ಇನ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ
ಚಂಡಮಾರುತ
Image Credit source: News NCR
Follow us on

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಕಾ(Mocha) ಚಂಡಮಾರುತ(Cyclone)ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೇರಳ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಟ್ಟನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಹಳದಿ ಅಲರ್ಟ್​ ನೀಡಲಾಗಿದೆ.

ಮೇ 11 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಗಾಳಿ ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡವು ಬುಧವಾರ ಚಂಡಮಾರುತವಾಗಿ ಬದಲಾಗಲಿದೆ ಎಂದು ಐಎಂಡಿ ತಿಳಿಸಿದೆ.

ಮೋಚಾ ಚಂಡಮಾರುತವು 2023 ರಲ್ಲಿ ಭಾರತಕ್ಕೆ ಅಪ್ಪಳಿಸುವ ಮೊದಲ ಚಂಡಮಾರುತವಾಗಿದೆ ಮತ್ತು ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಚಂಡಮಾರುತದ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಈ ರಾಜ್ಯಗಳಲ್ಲಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮತ್ತು ದೋಣಿ ನಿರ್ವಾಹಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ, ಆಗ್ನೇಯ ಮತ್ತು ಸುತ್ತಮುತ್ತಲಿನ ಮಧ್ಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ತೆರಳದಂತೆ ಸೂಚಿಸಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ

IMD ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಹಿಮಾಚಲ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಮಳೆ ಜೊತೆಗೆ ಹಿಮಪಾತವೂ ಆಗಬಹುದು ಎನ್ನಲಾಗಿದೆ. ಅದೇ ವೇಳೆ ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಲಘು ಪ್ರಮಾಣದಲ್ಲಿ ಮಳೆಯಾಗಬಹುದು.

IMD ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಮೋಡ ಕವಿದ ವಾತವರಣ ಇರಲಿದೆ. ಗರಿಷ್ಠ ತಾಪಮಾನವು ಸುಮಾರು 38 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published On - 12:54 pm, Tue, 9 May 23