AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Mocha: ಮುಂದಿನ ವಾರ ಭಾರತದ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಯಾವ ರಾಜ್ಯಗಳಲ್ಲಿರಲಿದೆ ಇದರ ಪ್ರಭಾವ?

ಭಾರತೀಯ ಹವಾಮಾನ ಇಲಾಖೆಗೆ ಚಂಡಮಾರುತದ ಚಲನೆಯ ಬಗ್ಗೆ ಯಾವುದೇ ಮುನ್ಸೂಚನೆ ಇಲ್ಲದಿದ್ದರೂ, ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿಯ ಮೇಲೆ ಅದರ ಪ್ರಭಾವವನ್ನು ತಳ್ಳಿಹಾಕಲಾಗುವುದಿಲ್ಲ

Cyclone Mocha: ಮುಂದಿನ ವಾರ ಭಾರತದ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಯಾವ ರಾಜ್ಯಗಳಲ್ಲಿರಲಿದೆ ಇದರ ಪ್ರಭಾವ?
ಮೋಚಾ ಚಂಡಮಾರುತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 03, 2023 | 1:52 PM

Share

ಮುಖ್ಯಾಂಶಗಳು

  • ಮೇ 6, 2023 ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ
  • ಮೇ 7 ಮತ್ತು 8ರಂದು ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ
  • ಇತ್ತೀಚಿನ ವರ್ಷಗಳಲ್ಲಿ 2020 ರಲ್ಲಿ ಅಂಫಾನ್, 2021 ರಲ್ಲಿ ಅಸಾನಿ ಮತ್ತು 2022 ರಲ್ಲಿ ಯಾಸ್ ಸೇರಿದಂತೆ ಹೆಚ್ಚಿನ ಚಂಡಮಾರುತಗಳು ಮೇ ತಿಂಗಳಲ್ಲಿ ಅಪ್ಪಳಿಸಿದ್ದವು.

ವರ್ಷದ ಮೊದಲ ಚಂಡಮಾರುತ ಮೋಚಾ(Cyclone Mocha) ಈ ವಾರ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ (Bay of Bengal) ರೂಪುಗೊಳ್ಳುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ(IMD) ಪ್ರಕಾರ, ಮೇ 6 ರ ಸುಮಾರಿಗೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುವ ಸಾಧ್ಯತೆಯಿದೆ. ಆದಾಗ್ಯೂ, ಸೈಕ್ಲೋನ್ ರಚನೆಯನ್ನು ಇನ್ನೂ ದೃಢೀಕರಿಸಲಾಗಿಲ್ಲ. ಮೇ 6, 2023 ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ. ಅದರ ಪ್ರಭಾವದಿಂದಾಗಿ ನಂತರದ 48 ಗಂಟೆಗಳಲ್ಲಿ (ಮೇ 7 ಮತ್ತು 8) ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಹೇಳಿದೆ. ಯುಎಸ್ ಹವಾಮಾನ ಮುನ್ಸೂಚನೆ ಮಾದರಿ ಮತ್ತು ಮಧ್ಯಮ-ಶ್ರೇಣಿಯ ಹವಾಮಾನ ಮುನ್ಸೂಚನೆಗಳ ಯುರೋಪಿಯನ್ ಕೇಂದ್ರವು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ರಚನೆಯ ಮುನ್ಸೂಚನೆ ನೀಡಿದ ನಂತರ ಐಎಂಡಿ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

WMO/ESCAP ಸದಸ್ಯ ರಾಷ್ಟ್ರಗಳು ಅನುಸರಿಸುವ ನಾಮಕರಣ ವ್ಯವಸ್ಥೆಯ ಪ್ರಕಾರ, ಸೈಕ್ಲೋನಿಕ್ ಚಂಡಮಾರುತವು ರೂಪುಗೊಂಡರೆ ಅದನ್ನು ‘ಸೈಕ್ಲೋನ್ ಮೋಚಾ’ ಎಂದು ಹೆಸರಿಸಲಾಗುತ್ತದೆ. ಯೆಮೆನ್ ದೇಶವು ಈ ಹೆಸರನ್ನು ಸೂಚಿಸಿದೆ.

ಕೆಲವು ಮಾದರಿಗಳು ಇದು ಸೈಕ್ಲೋನ್ ಎಂದು ಸೂಚಿಸುತ್ತಿವೆ. ನಾವು ನಿಗಾ ಇಡುತ್ತಿದ್ದೇವೆ. ನವೀಕರಣಗಳನ್ನು ನಿಯಮಿತವಾಗಿ ಒದಗಿಸಲಾಗುವುದು  ಎಂದು ಭಾರತೀಯ ಹವಾಮಾನ ಇಲಾಖೆಯ ಯ ಮೃತ್ಯುಂಜಯ್ ಮೊಹಾಪಾತ್ರ ಹೇಳಿರುವುದಾಗಿ ಲೈವ್‌ಮಿಂಟ್‌ ವರದಿ ಮಾಡಿದೆ.

ಇತ್ತೀಚಿನ ವರ್ಷಗಳಲ್ಲಿ 2020 ರಲ್ಲಿ ಅಂಫಾನ್, 2021 ರಲ್ಲಿ ಅಸಾನಿ ಮತ್ತು 2022 ರಲ್ಲಿ ಯಾಸ್ ಸೇರಿದಂತೆ ಹೆಚ್ಚಿನ ಚಂಡಮಾರುತಗಳು ಮೇ ತಿಂಗಳಲ್ಲಿ ಅಪ್ಪಳಿಸಿದ್ದವು.

ಭಾರತೀಯ ಹವಾಮಾನ ಇಲಾಖೆಗೆ ಚಂಡಮಾರುತದ ಚಲನೆಯ ಬಗ್ಗೆ ಯಾವುದೇ ಮುನ್ಸೂಚನೆ ಇಲ್ಲದಿದ್ದರೂ, ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿಯ ಮೇಲೆ ಅದರ ಪ್ರಭಾವವನ್ನು ತಳ್ಳಿಹಾಕಲಾಗುವುದಿಲ್ಲ. ಚಂಡಮಾರುತದಿಂದ ಉಂಟಾಗುವ ಯಾವುದೇ ಹಾನಿಯನ್ನು ತಡೆಯಲು ಒಡಿಶಾ ಸರ್ಕಾರ ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ.

ಮುನ್ಸೂಚನೆ ಏನಿದೆ?

Windy.com ಹಂಚಿಕೊಂಡ ಮುನ್ಸೂಚನೆಗಳ ಪ್ರಕಾರ, ಚಂಡಮಾರುತವು ಮುಂದಿನ ಮಂಗಳವಾರ ಬಂಗಾಳ ಕೊಲ್ಲಿಗೆ ಬರುವ ಸಾಧ್ಯತೆಯಿದೆ. ನಂತರ ಅದು ಕ್ರಮೇಣ ಉತ್ತರದ ಕಡೆಗೆ ಚಲಿಸುವ ನಿರೀಕ್ಷೆಯಿದೆ,ಇದು ಭಾರತದ ಕರಾವಳಿಯ ಹತ್ತಿರದಲ್ಲಿದೆ. ಐಎಂಡಿ ಗ್ಲೋಬಲ್ ಫಾರ್​​ಕಾಸ್ಟ್ ಸಿಸ್ಟಂ (GFS) ಪ್ರಕಾರ, ಬಂಗಾಳಕೊಲ್ಲಿಯ ಆಗ್ನೇಯ ಪ್ರದೇಶದಲ್ಲಿ ರೂಪುಗೊಳ್ಳುತ್ತಿರುವ ಕಡಿಮೆ ಒತ್ತಡದ ಪ್ರದೇಶವು ಅಂಡಮಾನ್ ದ್ವೀಪಗಳ ಬಳಿ ಮೇ 9 ರಂದು ಚಂಡಮಾರುತವಾಗಿ ತೀವ್ರಗೊಳ್ಳುತ್ತದೆ.

ಚಂಡಮಾರುತವು ಮೇ 11 ರವರೆಗೆ ಪೂರ್ವ-ಮಧ್ಯ ಬಂಗಾಳಕೊಲ್ಲಿಯ ಕಡೆಗೆ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಮೇ 11 ರಂದು ಚಂಡಮಾರುತದ ನಂತರ ಬೆಳವಣಿಗೆಯಾಗುವ ಸಾಧ್ಯತೆಯಿದೆ ಎಂದು ಮೀಡಿಯಂ ರೇಂಜ್ ವೆದರ್ ಫಾರ್ ಕಾಸ್ಟ್ ಯುರೋಪಿಯನ್ ಕೇಂದ್ರ (ECMWF) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Bhuj Earthquake 2001: ಕುಟುಂಬದವರೆಲ್ಲಾ ಪ್ರಾಣ ಬಿಟ್ಟಿದ್ದ ಕಾಂಕ್ರೀಟ್​ ರಾಶಿಗಳ ನಡುವಿಂದ ಪವಾಡವೆಂಬಂತೆ ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ

ಚಂಡಮಾರುತ ಎದುರಿಸಲು ಸಿದ್ಧತೆ ನಡೆಸಿದ ಒಡಿಶಾ

ಸಂಭವನೀಯ ಚಂಡಮಾರುತ ‘ಮೋಚಾ’ ಎದುರಿಸಲಿರುವ ಸನ್ನದ್ದತೆಯನ್ನು ಪರಿಶೀಲಿಸಲು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮಂಗಳವಾರ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ.ಬೇಸಿಗೆಯಲ್ಲಿ ರೂಪುಗೊಂಡ ಚಂಡಮಾರುತಗಳ ಹಾದಿಯನ್ನು ನಿಖರವಾಗಿ ನಿರ್ಧರಿಸಲು ಕಷ್ಟವಾಗುವುದರಿಂದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಸಿಎಂ ಪಟ್ನಾಯಕ್ ಹೇಳಿದ್ದಾರೆ. ಅಧಿಕಾರಿಗಳು ಮತ್ತು ಇಲಾಖೆಗಳು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಿದ ಅವರು, ಎನ್‌ಡಿಆರ್‌ಎಫ್, ಒಡಿಆರ್‌ಎಫ್ ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿಯೂ ಸಿದ್ಧರಾಗಿರಬೇಕು ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:49 pm, Wed, 3 May 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!