Cyclone Mocha: ಈ ವಾರ ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ, ಭೂ ಕುಸಿತ ಸಾಧ್ಯತೆ
Cyclone Mocha: ಈ ವರ್ಷದ ಮೊದಲ ಚಂಡಮಾರುತ (Cyclone) ಮೋಚಾ (Mocha) ಈ ಬಾರ ಒಡಿಶಾಗೆ (Odisha) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಈ ವರ್ಷದ ಮೊದಲ ಚಂಡಮಾರುತ (Cyclone) ಮೋಚಾ (Mocha) ಈ ಬಾರ ಒಡಿಶಾಗೆ (Odisha) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಚುನಾವಣೆಯ ಕಾವಿನಲ್ಲಿರುವ ಕರ್ನಾಟಕಕ್ಕೂ ಮೋಚಾ ಚಂಡಮಾರುತದ ಪ್ರಭಾವ ಇರಲಿದೆ ಎನ್ನಲಾಗಿದೆ. ಐಎಂಡಿ ಮುನ್ಸೂಚನೆ ಪ್ರಕಾರ ಮೇ 8ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ.
ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ ಸುಮಾರು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ.
ಕರಾವಳಿ ತೀರಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ. ಚಂಡಮಾರುತದ ಬಗ್ಗೆ ಭಯ ಬೇಡ, ಆದರೆ ಯಾವುದೇ ಘಟನೆಗಳನ್ನು ಎದುರಿಸಲು ಸಿದ್ಧರಾಗಿರಿ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೋಹಾಪಾತ್ರಾ ತಿಳಿಸಿದ್ದಾರೆ. ಚಂಡಮಾರುತದ ಚಲನವಲನದ ಮೇಲೆ ಹವಾಮಾನ ಇಲಾಖೆ ನಿರಂತರ ನಿಗಾ ಇಡುತ್ತಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು, ಉಡುಪಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ
ಮೇ 8 ರಿಂದ 12 ರವರೆಗೆ ನಾಲ್ಕು ದಿನಗಳ ಅವಧಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಪ್ರವಾಸೋದ್ಯಮ ಮತ್ತು ಕಡಲಾಚೆಯ ಚಟುವಟಿಕೆಗಳನ್ನು ನಿಲ್ಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಚಂಡಮಾರುತದ ರಚನೆಯ ಪರಿಣಾಮವಾಗಿ, ಮೇ 8 ಮತ್ತು 12 ರ ನಡುವೆ ಭಾರೀ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಮೇ 8, 9 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಹತ್ತಿರದ ಅಂಡಮಾನ್ ಸಮುದ್ರದಾದ್ಯಂತ ಗಂಟೆಗೆ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ