ಮೊಂತಾ ಚಂಡಮಾರುತ ಎಫೆಕ್ಟ್: ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಆಂಧ್ರದ ತೀರಕ್ಕೆ ನಾಳೆ ಮೊಂತಾ ಚಂಡಮಾರುತ ಅಪ್ಪಳಿಸಲಿದ್ದು, ಭಾರಿ ಮಳೆಯ ಎಚ್ಚರಿಕೆ ಹಿನ್ನಲೆ ಆಂಧ್ರದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ಅಪ್ಪಳಿಸುವ ಭೀತಿ ಹಿನ್ನೆಲೆ ಒಡಿಶಾ ಮತ್ತು ತಮಿಳುನಾಡು ಕಡಲ ತೀರದಲ್ಲೂ ಎಚ್ಚರಿಕೆ ವಹಿಸಲಾಗಿದೆ. ಕಡಲ ತೀರ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಬಂಗಾಳ ಕೊಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಲಾಗಿದೆ.
ದೆಹಲಿ, ಅಕ್ಟೋಬರ್ 27: ಮೊಂತಾ ಚಂಡಮಾರುತ ನಾಳೆ ಆಂಧ್ರದ (Andra Pradesh) ತೀರಕ್ಕೆ ಅಪ್ಪಳಿಸಲಿದ್ದು, ಭಾರಿ ಮಳೆಯ ಎಚ್ಚರಿಕೆ ಹಿನ್ನಲೆ ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕಾಕಿನಾಡ ಬಳಿಯ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆ ಬಗ್ಗೆಯೂ ಊಹಿಸಲಾಗಿದೆ. ಚಂಡಮಾರುತ ಅಪ್ಪಳಿಸುವ ಭೀತಿ ಹಿನ್ನೆಲೆ ಒಡಿಶಾ ಮತ್ತು ತಮಿಳುನಾಡು ಕಡಲ ತೀರದಲ್ಲೂ ಎಚ್ಚರಿಕೆ ವಹಿಸಲಾಗಿದೆ. ಕಡಲ ತೀರ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಬಂಗಾಳ ಕೊಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
