AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಿಬಾಗ್‌ಗೆ ಅಪ್ಪಳಿಸಿಯೇ ಬಿಟ್ತು Cyclone Nisarga, ಪರಿಸ್ಥಿತಿ ಹೇಗಿದೆ?

ಮಹಾರಾಷ್ಟ್ರ: ತೀವ್ರ ಸ್ವರೂಪದ ನಿಸರ್ಗ ಸೈಕ್ಲೋನ್ ನಿರೀಕ್ಷೆಯಂತೆ ಮುಂಬೈ ಬಳಿಯ ಅಲಿಬಾಗ್ ತೀರಕ್ಕೆ ಅಪ್ಪಳಿಸಿದೆ. ಮಹಾರಾಷ್ಟ್ರದ ರತ್ನಗಿರಿ, ರಾಯಘಡದಲ್ಲಿ ಭಾರಿ ಮಳೆಯಾಗುತ್ತಿದೆ. 129 ವರ್ಷಗಳ ಬಳಿಕ ಮುಂಬೈಗೆ ಸೈಕ್ಲೋನ್ ಅಪ್ಪಳಿಸಿದೆ. ಮಹಾರಾಷ್ಟ್ರದ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಬೈನ ಕೋಲಬಾದಲ್ಲಿ ಗಂಟೆಗೆ 72 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ರೇಡಿಯೋ, ಬ್ಯಾಟರಿ ಆಪರೇಟೆಡ್ ಉಪಕರಣ ಬಳಸುವಂತೆ ಮಹಾರಾಷ್ಟ್ರ ಜನರಿಗೆ ಸಿಎಂ ಉದ್ದವ್ ಠಾಕ್ರೆ ಸೂಚನೆ ನೀಡಿದ್ದು, ಚಂಡಮಾರುತ ಅಪ್ಪಳಿಸಿರುವಾಗ ವಿದ್ಯುತ್ ಉಪಕರಣಗಳನ್ನು ಬಳಸದಂತೆ ಸೂಚಿಸಿದ್ದಾರೆ. ನಿಸರ್ಗ ಚಂಡಮಾರುತ […]

ಅಲಿಬಾಗ್‌ಗೆ ಅಪ್ಪಳಿಸಿಯೇ ಬಿಟ್ತು Cyclone Nisarga, ಪರಿಸ್ಥಿತಿ ಹೇಗಿದೆ?
ಸಾಧು ಶ್ರೀನಾಥ್​
| Edited By: |

Updated on:Jun 03, 2020 | 3:23 PM

Share

ಮಹಾರಾಷ್ಟ್ರ: ತೀವ್ರ ಸ್ವರೂಪದ ನಿಸರ್ಗ ಸೈಕ್ಲೋನ್ ನಿರೀಕ್ಷೆಯಂತೆ ಮುಂಬೈ ಬಳಿಯ ಅಲಿಬಾಗ್ ತೀರಕ್ಕೆ ಅಪ್ಪಳಿಸಿದೆ. ಮಹಾರಾಷ್ಟ್ರದ ರತ್ನಗಿರಿ, ರಾಯಘಡದಲ್ಲಿ ಭಾರಿ ಮಳೆಯಾಗುತ್ತಿದೆ. 129 ವರ್ಷಗಳ ಬಳಿಕ ಮುಂಬೈಗೆ ಸೈಕ್ಲೋನ್ ಅಪ್ಪಳಿಸಿದೆ.

ಮಹಾರಾಷ್ಟ್ರದ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಬೈನ ಕೋಲಬಾದಲ್ಲಿ ಗಂಟೆಗೆ 72 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ರೇಡಿಯೋ, ಬ್ಯಾಟರಿ ಆಪರೇಟೆಡ್ ಉಪಕರಣ ಬಳಸುವಂತೆ ಮಹಾರಾಷ್ಟ್ರ ಜನರಿಗೆ ಸಿಎಂ ಉದ್ದವ್ ಠಾಕ್ರೆ ಸೂಚನೆ ನೀಡಿದ್ದು, ಚಂಡಮಾರುತ ಅಪ್ಪಳಿಸಿರುವಾಗ ವಿದ್ಯುತ್ ಉಪಕರಣಗಳನ್ನು ಬಳಸದಂತೆ ಸೂಚಿಸಿದ್ದಾರೆ.

ನಿಸರ್ಗ ಚಂಡಮಾರುತ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸುಮಾರು 50,000 ಮಂದಿ ಹಾಗೂ ದಮನ್‌ನ ಸುಮಾರು 4,000 ನಿವಾಸಿಗಳ ಸ್ಥಳಾಂತರ ಮಾಡಲಾಗಿದೆ. ಇನ್ನು, ನಿಸರ್ಗ ಚಂಡಮಾರುತ ಹಿನ್ನೆಲೆ ಮುಂಬೈ ಮೃಗಾಲಯದ ಪ್ರಾಣಿಗಳನ್ನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

Published On - 1:32 pm, Wed, 3 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು