AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone: ಬಂಗಾಳಕೊಲ್ಲಿಯಲ್ಲಿ ಈ ವಾರ ಚಂಡಮಾರುತ ಸಾಧ್ಯತೆ; ಕರ್ನಾಟಕ, ಕೇರಳ ಸೇರಿ ಹಲವೆಡೆ ಭಾರೀ ಮಳೆ

Rain Updates: ಅಕ್ಟೋಬರ್ 18ರ ಸುಮಾರಿಗೆ ಉತ್ತರ ಅಂಡಮಾನ್ ಸಮುದ್ರದ ಮೇಲೆ ಈ ಚಂಡಮಾರುತ ರೂಪುಗೊಳ್ಳುತ್ತದೆ. ಇದು ನೈಋತ್ಯ ಬಂಗಾಳ ಕೊಲ್ಲಿಯ ಕಡೆಗೆ ಚಲಿಸುತ್ತದೆ.

Cyclone: ಬಂಗಾಳಕೊಲ್ಲಿಯಲ್ಲಿ ಈ ವಾರ ಚಂಡಮಾರುತ ಸಾಧ್ಯತೆ; ಕರ್ನಾಟಕ, ಕೇರಳ ಸೇರಿ ಹಲವೆಡೆ ಭಾರೀ ಮಳೆ
ಚಂಡಮಾರುತ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 17, 2022 | 12:18 PM

Share

ಬೆಂಗಳೂರು: ಇನ್ನೇನು ಮುಂಗಾರು (Monsoon) ಅಬ್ಬರ ಕಡಿಮೆಯಾಗುತ್ತಿದೆ. ಮುಂಗಾರು ಮಳೆ ಶುರುವಾದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಚಂಡಮಾರುತವೊಂದು (Cyclone) ಅಪ್ಪಳಿಸಲು ಸಜ್ಜಾಗಿದೆ. ಈ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಮಾನ್ಸೂನ್ ನಂತರದ ಮೊದಲ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಆಂಧ್ರಪ್ರದೇಶ- ಒಡಿಶಾ ಕರಾವಳಿಗೆ ಈ ಚಂಡಮಾರುತ ಮೊದಲು ಅಪ್ಪಳಿಸುವ ಸಾಧ್ಯತೆಯಿದೆ. ಆದರೆ, ಈ ಸೈಕ್ಲೋನ್ ಬಗ್ಗೆ ಹವಾಮಾನ ಇಲಾಖೆಯ ತಜ್ಞರು ಇನ್ನೂ ಯಾವ ಮಾಹಿತಿಯನ್ನೂ ನೀಡಿಲ್ಲ. ಅಕ್ಟೋಬರ್ 18ರ ಸುಮಾರಿಗೆ ಉತ್ತರ ಅಂಡಮಾನ್ ಸಮುದ್ರದ ಮೇಲೆ ಈ ಚಂಡಮಾರುತ ರೂಪುಗೊಳ್ಳುತ್ತದೆ. ಇದು ನೈಋತ್ಯ ಬಂಗಾಳ ಕೊಲ್ಲಿಯ ಕಡೆಗೆ ಚಲಿಸುತ್ತದೆ. ಅಕ್ಟೋಬರ್ 20ರ ವೇಳೆಗೆ ಈ ಚಂಡಮಾರುತವು ಕಡಿಮೆ ಒತ್ತಡದ ಪ್ರದೇಶದಲ್ಲಿ ತೀವ್ರಗೊಳ್ಳುತ್ತದೆ ಎನ್ನಲಾಗಿದೆ.

ಅಕ್ಟೋಬರ್ 18ರ ಸುಮಾರಿಗೆ ಪೂರ್ವ ಕರಾವಳಿಗೆ ಸೂಪರ್-ಸೈಕ್ಲೋನ್ ಅಪ್ಪಳಿಸುವ ವದಂತಿಗಳು ಕಳೆದ ವಾರ ಹೊರಹೊಮ್ಮಿದ್ದವು. ಆದರೆ, IMD ಈ ವರದಿಗಳನ್ನು ತಳ್ಳಿಹಾಕಿತ್ತು. ಹವಾಮಾನ ಇಲಾಖೆ ಈ ಬಗ್ಗೆ ಇದುವರೆಗೂ ಯಾವುದೇ ಸಲಹೆಯನ್ನು ನೀಡಿಲ್ಲ. ಹವಾಮಾನ ಇಲಾಖೆ ಇನ್ನೂ ಯಾವುದೇ ಎಚ್ಚರಿಕೆ ನೀಡದಿದ್ದರೂ, ಒಡಿಶಾ ಸರ್ಕಾರ ಕಳೆದ ವಾರ ತನ್ನ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ ಸಂಭವನೀಯ ಚಂಡಮಾರುತಗಳಿಗೆ ತಯಾರಿ ನಡೆಸಿಕೊಳ್ಳಲು ಸೂಚಿಸಿದೆ.

ಇದನ್ನೂ ಓದಿ: Karnataka Rain: ಮಲೆನಾಡು ಸೇರಿದಂತೆ ಬಹುತೇಕ ಕಡೆ ಇಂದಿನಿಂದ 3 ದಿನ ಮಳೆ ಹೆಚ್ಚಳ; ಬೆಂಗಳೂರಿನಲ್ಲೂ ಹಳದಿ ಅಲರ್ಟ್

ಪಿಟಿಐ ಮಾಹಿತಿ ಪ್ರಕಾರ, ಕಳೆದ ಸೋಮವಾರ ನಡೆದ ರಾಜ್ಯ ಮಟ್ಟದ ಚಂಡಮಾರುತ ಸಿದ್ಧತಾ ಸಭೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಸ್‌ಸಿ ಮೊಹಾಪಾತ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಒಡಿಶಾದಲ್ಲಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ತೀವ್ರ ಚಂಡಮಾರುತ ಎದುರಾಗಲಿದೆ. ಕೆಲವೊಮ್ಮೆ ಡಿಸೆಂಬರ್ 15ರವರೆಗೂ ಈ ಚಂಡಮಾರುತ ಉಂಟಾಗಲಿದೆ. ಈ ಎರಡೂವರೆ ತಿಂಗಳನ್ನು ಒಡಿಶಾದಲ್ಲಿ “ಸೈಕ್ಲೋನ್ ಸೀಸನ್” ಎಂದು ಪರಿಗಣಿಸಲಾಗುತ್ತದೆ.

ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಕೇರಳದ ಕರಾವಳಿ ತೀರದಲ್ಲಿ ಚಂಡಮಾರುತದ ಪರಿಚಲನೆಯು ಕಡಿಮೆ ಉಷ್ಣವಲಯದ ಮಟ್ಟದಲ್ಲಿದೆ. ಅಕ್ಟೋಬರ್ 18ರ ಸುಮಾರಿಗೆ ಉತ್ತರ ಅಂಡಮಾನ್ ಸಮುದ್ರ ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆ ರೂಪುಗೊಳ್ಳುವ ಸಾಧ್ಯತೆಯಿದೆ. ಕರ್ನಾಟಕ, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ಅಕ್ಟೋಬರ್ 21ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು IMD ಮಾಹಿತಿ ನೀಡಿದೆ.

ಇದನ್ನೂ ಓದಿ: Karnataka Rains: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ, ರಾಜ್ಯದ ಉದ್ದಗಲಕ್ಕೂ ಮುಂದುವರೆದ ವರ್ಷಧಾರೆ

ಅಕ್ಟೋಬರ್ 20ರಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಇಂದು ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 2 ದಿನಗಳಲ್ಲಿ ವಿದರ್ಭ, ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಮಳೆ ಹೆಚ್ಚಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?