Cyclone Shaheen: ಅ. 1ಕ್ಕೆ ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಈ ರಾಜ್ಯಗಳಲ್ಲಿ ಹೈ ಅಲರ್ಟ್
Shaheen Cyclone | ಪಶ್ಚಿಮ ಬಂಗಾಳ, ಗುಜರಾತ್ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತದ ಪರಿಣಾಮದಿಂದ ಶುಕ್ರವಾರ ವಿಪರೀತ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ನವದೆಹಲಿ: ಗುಲಾಬ್ ಚಂಡಮಾರುತದ ಅಬ್ಬರ ಕೊಂಚ ಕಡಿಮೆಯಾಗುತ್ತಿರುವ ಬೆನ್ನಲ್ಲೇ (Cyclone Gulab) ಶಾಹೀನ್ ಚಂಡಮಾರುತ (Cyclone Shaheen) ಅಪ್ಪಳಿಸಲು ಸಿದ್ಧವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 1ರಂದು ಶಾಹೀನ್ ಚಂಡಮಾರುತ ಅಪ್ಪಳಿಸಲಿದ್ದು, ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.
ಪಶ್ಚಿಮ ಬಂಗಾಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಶಾಹೀನ್ ಚಂಡಮಾರುತದ ಪರಿಣಾಮದಿಂದ ಶುಕ್ರವಾರ ವಿಪರೀತ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಇರಲಿದೆ. ಆದರೆ, ಗುಜರಾತ್ ಕರಾವಳಿ ತೀರದಲ್ಲಿ ಇದರ ಪರಿಣಾಮ ಹೆಚ್ಚಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತದ ರೂಪ ತಳೆದು ಮತ್ತೆ ಅಪ್ಪಳಿಸಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಅ. 1ರಂದು ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದಿದೆ.
The low-pressure area created due to Cyclone Storm Gulab is now in the Gujarat coast, Northeast Arabian sea and will intensify into a Depression by Sept 30. From Oct 1, it will become a new cyclone named ‘Shaheen’: RK Jenamani, senior scientist, IMD pic.twitter.com/JynGdRi5i1
— ANI (@ANI) September 29, 2021
ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಗುಜರಾತ್ನಲ್ಲಿ ಈಗಾಗಲೇ ಗಾಳಿ, ಮಳೆ ಹೆಚ್ಚಾಗಿದೆ. ಸೆ. 30ರಿಂದ ಅ. 2ರವರೆಗೂ ಶಾಹೀನ್ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದೆ. ಇನ್ನು ಎರಡು ದಿನಗಳಲ್ಲಿ ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದ್ದು, ಕತಾರ್ ಈ ಶಾಹೀನ್ ಚಂಡಮಾರುತ ಎಂಬ ಹೆಸರನ್ನು ನೀಡಿದೆ.
ಶಾಹೀನ್ ಚಂಡಮಾರುತದ ಪರಿಣಾಮದಿಂದ ಗುಜರಾತ್, ಮಹಾರಾಷ್ಟ್ರ, ಕೊಂಕಣ, ಮರಾಠವಾಡ ಮತ್ತು ಗೋವಾ ಭಾಗದಲ್ಲಿ ವಿಪರೀತ ಮಳೆಯಾಗಲಿದೆ. ಹಾಗೇ, ಪಶ್ಚಿಮ ಬಂಗಾಳ. ಮರಾಠವಾಡ, ಸೌರಾಷ್ಟ್ರ, ಕಚ್, ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ಜಾರ್ಖಂಡ್, ಆಂಧ್ರಪ್ರದೇಶ, ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಜೊತೆಗೆ ತೆಲಂಗಾಣ, ತಮಿಳುನಾಡು, ಕೇರಳ, ಪುದುಚೆರಿ, ಮಾಹೆಯಲ್ಲಿ ಕೂಡ ಶಾಹೀನ್ ಚಂಡಮಾರುತದ ಪರಿಣಾಮದಿಂದ ಅಲ್ಲಲ್ಲಿ ಮಳೆಯಾಗಲಿದೆ.
ಇದನ್ನೂ ಓದಿ: Cyclone Shaheen: ಗುಲಾಬ್ ಚಂಡಮಾರುತದ ಬೆನ್ನಲ್ಲೇ ಶಾಹೀನ್ ಸೈಕ್ಲೋನ್ ಭೀತಿ; ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ
Cyclone Gulab ಅಬ್ಬರಿಸಿದ ಗುಲಾಬ್ ಚಂಡಮಾರುತ: ಆಂಧ್ರ ಪ್ರದೇಶದ ಇಬ್ಬರು ಮೀನುಗಾರರು ಸಾವು, ಒಬ್ಬ ನಾಪತ್ತೆ